ಬೀದರ್: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ (Rain News) ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಗೆ ಮನೆ ಗೋಡೆ (Wall collapse) ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ.
ಗೋಡೆ ಕುಸಿತದಿಂದಾಗಿ 8 ವರ್ಷದ ಬಾಲಕಿ ಸುಧಾರಾಣಿ ಎಂಬಾಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಬೀದರ್ನಲ್ಲಿ ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದು ಬಿದ್ದಿದೆ. ಗೋಡೆ ರಭಸವಾಗಿ ಬಿದ್ದ ಪರಿಣಾಮ ಸುಧಾರಾಣಿ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬಾಲಕಿ ಬದುಕುಳಿಯಲಿಲ್ಲ. ಮೃತ ಬಾಲಕಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಅವಘಡ ಸಂಬಂಧ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ