ಬೆಂಗಳೂರು: ರಾಜ್ಯಾದ್ಯಂತ ಸೋಮವಾರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗುವ ಎಚ್ಚರಿಕೆಯನ್ನು (Heavy Rain alert) ಹವಾಮಾನ ಇಲಾಖೆ (Weather report) ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲಿ ಗುಡುಗು, ಮಿಂಚಿನ ಮಳೆಯಾಗಲಿದೆ.
ಬಿಸಿಲ ತಾಪಮಾನದಿಂದ ಕಂಗೆಟ್ಟಿದ್ದ ಕಲಬುರಗಿ, ಗದಗದಲ್ಲೂ ವರುಣ ಅಬ್ಬರಿಸಲಿದ್ದಾನೆ. ಹಾವೇರಿ, ಕೊಡಗು, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಮನಗರ, ಚಿತ್ರದುರ್ಗ, ದಾವಣಗೆರೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
Source IMD TOI 1400 IST Light to Moderate Thundershowers accompanied with lightning and gusty winds with speed reaching 30-40 kmph very likely @ isolated places over Kalburgi Gadag Haveri Chamarajanagara Kodagu Mysore Tumkur Hassan Chikkamagalur Ramanagara Chitradurga Davanagere pic.twitter.com/0Cc2HLpUvA
— Karnataka State Natural Disaster Monitoring Centre (@KarnatakaSNDMC) May 29, 2023
ಇದನ್ನೂ ಓದಿ: Weather Report: ಬೆಂಗಳೂರಿಗರೇ ಎಚ್ಚರ, ಇಂದು ಇರಬಹುದು ಮಳೆಯ ಅಬ್ಬರ!
ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮರಗಳ ಬಳಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಮನೆಯಿಂದ ಹೊರಗೆ ಇರುವವರು ಆದಷ್ಟು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಲಾಗಿದೆ. ಗಾಳಿ, ಮಳೆ ಇರುವಾಗ ವಾಹನವನ್ನು ಚಲಾಯಿಸುವಾಗ ಎಚ್ಚರದಿಂದ ಇರುವಂತೆ ಸಲಹೆ ನೀಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ