Site icon Vistara News

Rain News | ರಾಜ್ಯಾದ್ಯಂತ ಇನ್ನೂ 48 ಗಂಟೆ ಭಾರಿ ಮಳೆ; ಕರಾವಳಿ, ಉತ್ತರ ಒಳನಾಡಲ್ಲಿ ಅಬ್ಬರ ಸಾಧ್ಯತೆ!

Anasi gudda

ಬೆಂಗಳೂರು: ಇನ್ನು ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆ (Rain News) ಆಗುವ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆಯು ಮುಂದಿನ 48 ಗಂಟೆಯಲ್ಲಿ ಕರಾವಳಿ ಸಹಿತ ಒಳನಾಡಿನ ಬಹುತೇಕ ಕಡೆ ಅಬ್ಬರಿಸಲಿದೆ ಎಂದು ಹೇಳಿದೆ.

ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಇನ್ನು ೨-೩ ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಹ ಭಾರಿ ಪ್ರಮಾಣದಲ್ಲಿ ಮಳೆ ಆಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಕರಾವಳಿಯಲ್ಲಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ವೇಳೆ ಬಿರುಗಾಳಿ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ. ವೇಗದಲ್ಲಿರಲಿದ್ದು, 65 ಕಿ.ಮೀ.ವರೆಗೂ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ ಸಮುದ್ರ ಭಾಗದಲ್ಲಿ ಹೆಚ್ಚಿನ ಅಲೆಗಳ ಮುನ್ಸೂಚನೆ ಇದ್ದು, ಕರಾವಳಿಯುದ್ದಕ್ಕೂ 3.5ರಿಂದ 4.4 ಮೀಟರ್ ಎತ್ತರದವರೆಗೆ ಅಲೆಗಳು ಏಳುವ ಮುನ್ಸೂಚನೆಯನ್ನು ನೀಡಲಾಗಿದೆ. ಪ್ರಸ್ತುತ ವೇಗವು ಪ್ರತಿ ಸೆಕೆಂಡಿಗೆ 55 ಸೆಂ.ಮೀ.ನಿಂದ 76 ಸೆಂ.ಮೀ ಅಂತದಲ್ಲಿ ಗಾಳಿ ವೇಗವನ್ನು ಪಡೆದುಕೊಂಡಿದೆ.

ಇದನ್ನೂ ಓದಿ | Shivamogga Rain | ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರಿಗೆ ಗಂಭೀರ ಗಾಯ

Exit mobile version