ಬೆಂಗಳೂರು: ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Congress Guarantee: ಜವಳಿ ಸಚಿವರಿಗೆ ಸಿಕ್ಕ ಗೋಯೆಲ್, ಆಹಾರ ಸಚಿವರು ಬಂದಾಗ ಗಾಯಬ್?: ಏನಂದ್ರು ಮುನಿಯಪ್ಪ?
ಬೆಂಗಳೂರಿನಲ್ಲಿ ಭಾರಿ ಮಳೆ
ಬೆಂಗಳೂರು ಹಾಗೂ ಸುತ್ತಮುತ್ತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಹಾಸನದಲ್ಲಿ ಮತ್ತೆ ಮಳೆ ಆರಂಭ
ಹಾಸನದಲ್ಲಿ ಬುಧವಾರ ಮತ್ತೆ ಮಳೆ ಆರಂಭವಾಗಿದೆ. ಮಂಗಳವಾರದ ಮಳೆಯಿಂದ ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಇದರಿಂದ ಅಪಾರ ಪ್ರಮಾಣದ ಹಾನಿಯಾಗಿತ್ತು. ಬುಧವಾರವೂ ಹಾಸನ ನಗರ ಸೇರಿ ವಿವಿಧೆಡೆ ಮಳೆಯಾಗಿದೆ.
ಮಂಡ್ಯದಲ್ಲಿ ಗಂಟೆಗೂ ಹೆಚ್ಚು ಮಳೆ
ಸಕ್ಕರೆನಾಡು ಮಂಡ್ಯದಲ್ಲಿ ಸಂಜೆ ನಂತರ ಧಾರಾಕಾರ ಮಳೆಯಾಗಿದೆ. 1 ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ಜನರ ಸಂಚಾರ ಅಸ್ತವ್ಯಸ್ತವಾಗಿದೆ. ಆದರೆ, ರೈತರ ಮೊಗದಲ್ಲಿ ಹರ್ಷ ಮೂಡಿದೆ.
ಇದನ್ನೂ ಓದಿ: Power tariff hike: ವಿದ್ಯುತ್ ಏರಿಕೆ ವಿರುದ್ಧ ಹೆಚ್ಚಿದ ಜನಾಕ್ರೋಶ, ಕೆಲವೆಡೆ ಜೂನ್ 22ರಂದು ಬಂದ್
ತುಮಕೂರಲ್ಲಿ ವರ್ಷಧಾರೆ
ಕಲ್ಪತರು ನಾಡು ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಅರ್ಧ ಗಂಟೆಗಿಂತ ಹೆಚ್ಚು ಕಾಲ ಮಳೆಯಾಗಿದೆ. ತುಮಕೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಆಗಿದೆ.