ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಮತ್ತೆ ಮಳೆ (Rain News) ಆರಂಭವಾಗಿದೆ. ಇನ್ನು ಒಂದು ವಾರ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಭಾಗದಲ್ಲಿ ಮಳೆ ಮುಂದುವರಿಯಲಿದ್ದು, ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಐದು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಆ.23, 24ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಆ.24ರ ಬಳಿಕ ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದರೆ, ಆ.25ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ | Rain water safety | ಮಳೆನೀರಿಗೆ ಬೊಗಸೆಯೊಡ್ಡಿ ಕುಡಿಯುವ ಮೊದಲು, ಇನ್ನೊಮ್ಮೆ ಯೋಚಿಸಿ