Site icon Vistara News

Rain News: ಕಾರವಾರದಲ್ಲಿ ರಸ್ತೆಗುರುಳಿದ ಬೃಹತ್ ಮರ; ಇನ್ನೆರಡು ದಿನ ಈ ಜಿಲ್ಲೆಗಳಿಗೆ Rain Alert

Tree fall in karwar

ಬೆಂಗಳೂರು/ಕಾರವಾರ: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು (Rain News) ಚುರುಕುಗೊಂಡಿದೆ. ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Weather report), ಭಾರಿ ಗಾಳಿಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ.

ಮರದಡಿ ನುಸುಳಿ ಹೋದ ಬೈಕ್‌ ಸವಾರ

ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ ಮಧ್ಯೆ ಬೃಹತ್ ಮರ ಉರುಳಿ ಬಿದ್ದಿದೆ. ರಸ್ತೆಗೆ ಉರುಳಿದ ಮರದಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮರ ತೆರವು ಮಾಡಿದರು. ಮರ ತೆರವಿಗೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದ್ದರು.

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್‌ ಮರ

ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಮಲೆನಾಡಿನಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಜೂ.27, 28ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ದಾವಣಗೆರೆಯಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ವರುಣ ಗುಡುಗಲಿದ್ದಾನೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Honey trapped: ಹನಿಟ್ರ್ಯಾಪ್‌ನಲ್ಲಿ Money ಕಳೆದುಕೊಂಡ ಶಿವಮೊಗ್ಗದ ಅರಣ್ಯಾಧಿಕಾರಿ!

ರಾಜ್ಯದಲ್ಲಿ ಭಾನುವಾರ (ಜೂ.26) ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಅತೀ ಹೆಚ್ಚು ಮಳೆ ಉತ್ತರ ಕನ್ನಡದ ಹೊನ್ನಾವರದಲ್ಲಿ 14 ಸೆಂ.ಮೀ, ಮಂಕಿಯಲ್ಲಿ 13 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಗೇರುಸೊಪ್ಪ, ಅಂಕೋಲದಲ್ಲಿ ತಲಾ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version