Site icon Vistara News

Rain News | ಮುಂದಿನ 24 ಗಂಟೆಯಲ್ಲಿ ಮಳೆ ಅಬ್ಬರ; ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್‌!

rain news

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇದ್ದು ಇದರ ಪ್ರಭಾವದಿಂದ ರಾಜ್ಯಾದ್ಯಂತ ಮಳೆಯಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ ಶಿವಮೊಗ್ಗ, ತುಮಕೂರು ಸೇರಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಒಂದೆರಡು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕೇರಳ ಹಾಗೂ ಕರ್ನಾಟಕ ಕರಾವಳಿ, ಲಕ್ಷದ್ವೀಪ ಪ್ರದೇಶ, ಮಾಲ್ಡಿವ್ ಪ್ರದೇಶ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಗುರುವಾರ, ಶುಕ್ರವಾರ ಹಾಗೂ ಶನಿವಾರ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ರಾಜಧಾನಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಅಲರ್ಟ್‌

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ, ಕನಿಷ್ಠ ತಾಪಮಾನವೂ ಕ್ರಮವಾಗಿ 30-20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ | Rain News | ಮಳೆ ಅನಾಹುತ; ಬಿಬಿಎಂಪಿಯಿಂದ ಹೆಲ್ಪ್‌ಲೈನ್‌ ಆರಂಭ

Exit mobile version