ರಾಮನಗರ/ಬೆಂಗಳೂರು: ಶುಕ್ರವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ (rain news) ಕೆರೆ ಒಡೆದು ಮನೆಗಳಿಗೆ ನೀರು ನುಗ್ಗಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಿಟ್ಟಮಾರನಹಳ್ಳಿ ಕೆರೆ ಒಡೆದು 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮಧ್ಯರಾತ್ರಿಯಿಂದ ಜನ ಬೀದಿಯಲ್ಲೇ ಕಾಲ ಕಳೆಯುತ್ತಿದ್ದಾರೆ. ಕಳೆದ ಬಾರಿಯೂ ಇದೇ ರೀತಿಯ ಪರಿಸ್ಥಿತಿ ಉಂಟಾಗಿತ್ತು. ಅವಾಂತರಕ್ಕೆ ಕೊನೆಕಾಣಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಿಸಿದ್ದಾರೆ.
ಚನ್ನಪಟ್ಟಣದ ಅಂಬೇಡ್ಕರ್ ನಗರದಲ್ಲೂ ಅವಾಂತರ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೆಲ್ಲಾ ನೀರುಪಾಲಾಗಿವೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಜಧಾನಿಯಲ್ಲಿ ಪರದಾಟ
ಗುರುವಾರ ಆರಂಭವಾದ ಮಳೆ ರಾಜ್ಯದೆಲ್ಲೆಡೆ ಹಾಗೂ ರಾಜಧಾನಿಯಲ್ಲಿ ಶನಿವಾರವೂ ಮುಂದುವರಿದಿದೆ. ಇನ್ನೂ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಲಾಲ್‌ಬಾಗ್ ರಸ್ತೆಯಲ್ಲಿ ನೀರು ನಿಂತು ಕೆರೆಯಂತಾಗಿದ್ದು, ಪ್ರಯಾಣಿಕರ ಪರದಾಟ ಮುಂದುವರಿದಿದೆ.
ಕರವಾಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಅಲರ್ಟ್ ಘೋಷಣೆ ನೀಡಲಾಗಿದ್ದು ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿಗೆ ಇನ್ನೂ 5 ದಿನ ಮಳೆ ಇರಲಿದ್ದು, ಯೆಲ್ಲೋ ಆಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದ್ದು, ಕೆಲವೊಮ್ಮೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿಗೆ ಇಂದು ಮಾತ್ರ ಯಲ್ಲೋ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಗದಗ್, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ | Bangalore rain news | ಶುಕ್ರವಾರ ಮಳೆಯಿಂದಲೇ ಆರಂಭ, ಹಲವೆಡೆ ಯೆಲ್ಲೋ ಅಲರ್ಟ್