ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ (Rain News) ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಪಾಂಡ್ರಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಸಂಪರ್ಕ ಸೇತುವೆ ಪದೇ ಪದೇ ಮುಳುಗಡೆಯಾಗುತ್ತಿದೆ. ಇದೀಗ ಸಾತ್ನಾಳಿ ಮಾಚಾಳಿ ಗ್ರಾಮಸ್ಥರು ವಿಡಿಯೊ ಮಾಡಿ ಅಳಲು ತೋಡಿಕೊಂಡಿದ್ದಾರೆ. ಮುಳುಗಡೆಯಾದ ಸೇತುವೆ ಮೇಲೆಯೇ ಬೈಕ್ ಸವಾರರು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಗ್ರಾಮಸ್ಥರು “ಪ್ರತಿ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಿಸುತ್ತಿದ್ದೇವೆ. ಎಂಎಲ್‌ಎ, ಎಂಪಿ ಸೇರಿ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದೇವೆ. ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಗ್ರಾಮದಲ್ಲಿ ಯಾರಿಗಾದರೂ ಅನಾರೋಗ್ಯ ಕಾಣಿಸಿಕೊಂಡರೆ ವೈದ್ಯಕೀಯ ಸೌಲಭ್ಯವೇ ಸಿಗುವುದಿಲ್ಲ. ಸೇತುವೆ ಎತ್ತರ ಮಟ್ಟವನ್ನು ಹೆಚ್ಚಿಸಿ ಅನುಕೂಲ ಮಾಡಿಕೊಡಬೇಕು” ಎಂದು ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ | Weather Report | ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡ ವಾತಾವರಣ