ಕತ್ತೆಗೂ ಬಂತು ಕಂಕಣ ಭಾಗ್ಯ; ಮದುವೆಗೆ ಲಕ್ಷ ಲಕ್ಷ ಸುರಿದರು, ಹುಯ್ಯೋ ಮಳೆರಾಯ ಎಂದು ಮೊರೆ ಇಟ್ಟರು! - Vistara News

ಕರ್ನಾಟಕ

ಕತ್ತೆಗೂ ಬಂತು ಕಂಕಣ ಭಾಗ್ಯ; ಮದುವೆಗೆ ಲಕ್ಷ ಲಕ್ಷ ಸುರಿದರು, ಹುಯ್ಯೋ ಮಳೆರಾಯ ಎಂದು ಮೊರೆ ಇಟ್ಟರು!

Rain News: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ‌ ಲಕ್ಷ್ಮೇಶ್ವರ ಗ್ರಾಮದಲ್ಲಿ ಮಳೆಗಾಗಿ ಕತ್ತೆಗಳ ಮದುವೆಯನ್ನು ಮಾಡಲಾಗಿದೆ. ಊರಿಗೆ ಊಟ ಹಾಕಿ ವರುಣ ದೇವರ ಮೊರೆ ಹೋಗಲಾಗಿದೆ. ಇನ್ನಾದರೂ ಮಳೆ ಬರಲಿ ಎಂದು ಪ್ರಾರ್ಥನೆ ಮಾಡಿಕೊಂಡಿದ್ದಾರೆ.

VISTARANEWS.COM


on

People of Lakshmeshwar in Belagavi marry off donkeys for rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಜೂನ್‌ ತಿಂಗಳು ಮುಗಿಯಿತು. ಇನ್ನೆರಡು ದಿನದಲ್ಲಿ ಜುಲೈ ಆರಂಭವಾಗುತ್ತಲಿದೆ. ಆದರೆ, ವರುಣ ದೇವ ಮಾತ್ರ ಮುನಿಸಿಕೊಂಡಿದ್ದಾನೆ. ಮೋಡವಾಗುತ್ತದೆ, ಒಂದೆರಡು ಹನಿ ಬೀಳುತ್ತದೆ, ಮತ್ತೆ ಮಳೆ (Rain News) ಮರೆಯಾಗುತ್ತದೆ. ಇನ್ನು ಕೆಲವು ಕಡೆ ಆ ಹನಿಗಳೂ ಕಾಣಿಸದು. ಪರಿಸ್ಥಿತಿ ಹೀಗೇ ಆದರೆ ಮುಂದಿನ ಕಥೆ ಏನು? ಕೃಷಿ ಮಾಡುವುದೆಂತು? ಜೀವನ ಸಾಗಿಸುವುದೆಂತು? ಅಂತರ್ಜಲದ ಕಥೆ ಎಂತು? ಇದರ ಜತೆ ಸಹಸ್ರ, ಸಹಸ್ರ ಆಲೋಚನೆಗಳು, ಜೀವನ ನಿರ್ವಹಣೆಯ ಕಷ್ಟಗಳು. ಇಂಥ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ‌ ಲಕ್ಷ್ಮೇಶ್ವರ ಗ್ರಾಮದಲ್ಲಿ ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ಅದೂ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿ ವರುಣನಿಗೆ ಮೊರೆ ಇಟ್ಟಿದ್ದಾರೆ.

ವರುಣ ದೇವನೇ ಮಳೆ ಕರುಣಿಸು ಎಂದು ಬೇಡಿಕೊಂಡಿರುವ ಲಕ್ಷ್ಮೇಶ್ವರ ಗ್ರಾಮದ ಜನತೆ, ಎಲ್ಲರೂ ಸೇರಿಕೊಂಡು ಸಾವಿರಾರು ರೂಪಾಯಿ ದುಡ್ಡು ಹಾಕಿ, ಲಕ್ಷಗಟ್ಟಲೇ ಹಣ ಸಂಗ್ರಹಿಸಿ ಅದ್ಧೂರಿಯಾಗಿ ಕತ್ತೆಗಳಿಗೆ ಮದುವೆ ಮಾಡಿದ್ದಾರೆ.

People of Lakshmeshwar in Belagavi marry off donkeys for rain news
ಮದುವೆ ಸಂಭ್ರಮದಲ್ಲಿ ಗಂಡು ಮತ್ತು ಹೆಣ್ಣಿನ ಕಡೆಯವರು

ಗಂಡು ಕತ್ತೆ ಹಾಗೂ ಹೆಣ್ಣು ಕತ್ತೆಯನ್ನು ಆಯ್ಕೆ ಮಾಡಿ ವಧು – ವರರಂತೆ ಸಿಂಗರಿಸಿದರು. ಅದಕ್ಕೆ ಗಂಡಿನ ಕಡೆಯವರು ಮತ್ತು ಹೆಣ್ಣಿನ ಕಡೆಯವರನ್ನು ಪ್ರತ್ಯೇಕವಾಗಿ ಮಾಡಿಕೊಂಡರು. ಮದುವೆ ಮಾತುಕತೆ ನಡೆಸಿ ನಿಶ್ಚಯ ಮಾಡಿಕೊಂಡರು. ಒಂದೊಳ್ಳೆ ಮುಹೂರ್ತವನ್ನೂ ನೋಡಿದರು. ಮದುವೆಗೆ ಸಿದ್ಧತೆ ಮಾಡಿದರು.

People of Lakshmeshwar in Belagavi marry off donkeys for rain news
ಬಾಜಾ ಭಜಂತ್ರಿಯೊಂದಿಗೆ ಮೆರವಣಿಗೆ

ಇದನ್ನೂ ಓದಿ: Video Viral : ಅಸುನೀಗಿತು ಪ್ರೀತಿಯ ಹಸು; ಅಳುತ್ತಲೇ ಹಾಲು-ತುಪ್ಪ ಬಿಟ್ಟ ರೈತ, ಊರಿಗೆಲ್ಲ ಊಟ ಹಾಕಿದ!

People of Lakshmeshwar in Belagavi marry off donkeys for rain news
ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿಸಲಾಯಿತು

ಮೆರವಣಿಗೆ ಸಾಗಿದರು, ಬಾಜಾ ಭಜಂತ್ರಿ ಬಾರಿಸಿದರು

ಕೊನೆಗೆ ನಿಶ್ಚಯವಾದ ಈ ದಿನ ಮೆರವಣಿಗೆ ಸಾಗಿದರು, ಬಾಜಾ ಭಜಂತ್ರಿ ಬಾರಿಸಿದರು. ಮದುವೆ ಮಂಟಪವನ್ನೂ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದರು. ಮುತೈದೆಯರು ಸೋಬಾನ ಪದ ಹಾಡಿ ಕತ್ತೆಗಳ ಮದುವೆ ಮಾಡಿಸಿದರು. ಶಾಸ್ತ್ರೋಕ್ತವಾಗಿ ಮದುವೆ ಮಾಡಿ, ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ವೇದಿಕೆ ನಿರ್ಮಿಸಿ ಊರಿಗೆ ಊಟ ಹಾಕಿ ಸಂಭ್ರಮಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Petrol Diesel Price: ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯೇ ಇದೆ. ಚುನಾವಣಾ ಫಲಿತಾಂಶಕ್ಕೂ‌ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ (Petrol Diesel Price) ಚುನಾವಣಾ ಫಲಿತಾಂಶಕ್ಕೂ‌ ಯಾವುದೇ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲೂ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಬತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದದ್ದು ಈ ಬಾರಿ 19 ಕ್ಕೆ ಇಳಿದಿದೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ? ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ

ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೇರೆ ಕಡೆಗಿಂತ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆಯೇ ಇದೆ

ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 2021ರ ಏಪ್ರಿಲ್ 11ರಂದು ಪೆಟ್ರೋಲ್ ಮೇಲೆ ಶೇ.35 ತೆರಿಗೆ ಹಾಗೂ ಡೀಸೆಲ್ ಮೇಲೆ ಶೇ.24 ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸೆಲ್ ಮೇಲೆ 14.34ಕ್ಕೆ ಇಳಿಸಿದರು. ಶೇ.7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ.ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್‌ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಈ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ. ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಗಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಈಗ ಸ್ವಲ್ಪ ಏರಿಕೆಯಾಗಿದೆ, ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ

ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ಅನುದಾನವನ್ನು ನೀಡಲಾಗಿದೆ. ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಲಾಗಿದೆ, ಚುನಾವಣೆಗಾಗಿ ಅಲ್ಲ ಎಂದು ತಿಳಿಸಿದರು.

Continue Reading

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Actor Darshan: ಚಿತ್ರರಂಗದಿಂದ ಒಬ್ಬರನ್ನು ಬ್ಯಾನ್ ಮಾಡುವುದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಹಾಗೆಯೇ ರೇಣುಕಾಸ್ವಾಮಿ ಸಾವಿಗೂ ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಇದನ್ನೂ ಓದಿ | Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading

ಸಿನಿಮಾ

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka Swamy murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಈಗಾಗಲೇ ಆರೋಪಿಗಳ ಬಂಧನವಾಗಿದೆ. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಆಟೋ ಹಾಗೂ ಕಾರನ್ನು ಸೀಜ್ ಮಾಡಲಾಗಿದೆ. ಇದೇ ವೇಳೆ ಎ1 ಆರೋಪಿ ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಲಾಯಿತು.

VISTARANEWS.COM


on

By

Renukaswamy murder case The location of the accused is complete
Koo

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ (Renuka Swamy murder) ಪ್ರಕರಣ ಸಂಬಂಧ ತನಿಖೆಯು ಚುರುಕುಗೊಂಡಿದೆ. ಭಾನುವಾರ ಆರೋಪಿಗಳ ಮನೆಯಲ್ಲಿ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಚಿತ್ರದುರ್ಗದಲ್ಲಿ ಬೆಂಗಳೂರು ಪೊಲೀಸರಿಂದ ಸ್ಥಳ ಮಹಜರು ವೇಳೆ ರೇಣುಕಾಸ್ವಾಮಿ ಕಿಡ್ನ್ಯಾಪ್‌ಗೆ ಬಳಸಿದ್ದ ಆಟೋವನ್ನು ಸೀಜ್‌ ಮಾಡಲಾಯಿತು. ಜತೆಗೆ ಆರೋಪಿ ರವಿ ಮನೆ ಬಳಿ ಇದ್ದ ಟೊಯೊಟಾ ಇಟಿಯೋಸ್ ಕಾರನ್ನು ಜಪ್ತಿ ಮಾಡಲಾಗಿದೆ. ಭೀಕರವಾಗಿ ಕೊಂದರೂ ಆರೋಪಿಗಳಿಗೆ ಪಾಪಪ್ರಜ್ಞೆ ಕಾಡುತ್ತಿಲ್ವಾ? ಅಥವಾ ಪ್ರಭಾವಿಗಳ ಬೆಂಬಲ ಇದೆ ಎಂಬಂತೆ ನಗುತ್ತಲೇ ಪವಿತ್ರಾ ಗೌಡ ಹಾಗೂ ಪವನ್‌ ಮನೆಯಿಂದ ಹೊರಬಂದಿದ್ದಾರೆ.

ಪವಿತ್ರಾಗೌಡ ಮನೆಯಲ್ಲಿ ಸತತ 3 ಗಂಟೆಗಳ ಕಾಲ ಪರಿಶೀಲನೆ

ಬೆಂಗಳೂರಿನ ಆರ್‌ಆರ್ ನಗರದಲ್ಲಿ ಕಳೆದ 10 ವರ್ಷಗಳಿಂದ ಪವಿತ್ರಾಗೌಡ ವಾಸವಿದ್ದು, ಭಾನುವಾರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರ್ ಮಾಡಿದರು. ಪವಿತ್ರಾ ಜೂನ್ 9 – 10ರಂದು ಎಲ್ಲಿದ್ದರು? ಎಷ್ಟೊತ್ತಿಗೆ ಮನೆಯಿಂದ ತೆರಳಿದ್ದರು ಎಂಬುದನ್ನು ತಿಳಿಯಲು ಸಿಸಿಟಿವಿ ಪರಿಶೀಲನೆ ನಡೆಸಲಾಯಿತು.

ಪವಿತ್ರಾಗೌಡ ಇರುವ ಮನೆಯು ಡುಪ್ಲೆಕ್ಸ್ ಆಗಿದ್ದು ಒಟ್ಟು ಮೂರು ಮಹಡಿ ಇದೆ. ಇದರಲ್ಲಿ ಕೆಳಗಡೆ ಪಾರ್ಕಿಂಗ್‌ ಜಾಗದೊಂದಿಗೆ ಪವನ್ ವಾಸಕ್ಕೆ ಮನೆಯೊಂದು ಇದೆ. ಪವನ್ ಪವಿತ್ರಾ ಗೌಡಗೆ ಮನೆ‌ ಕೆಲಸಗಾರ ಜತೆಗೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ. ಆಗಾಗ ದರ್ಶನ್ ಈ ಮನೆಗೆ ಫಾರ್ಚುನರ್ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ಪವಿತ್ರಾ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್‌ ಕಾರಿನಲ್ಲಿ ಓಡಾಡುತ್ತಿದ್ದಳು ಎನ್ನಲಾಗಿದೆ. ಇನ್ನೂ ಪವಿತ್ರಾ ಗೌಡ ಮಗಳು ಹಾಸ್ಟೆಲ್‌ನಲ್ಲಿ ಇದ್ದು, ಆಗಾಗ ಬಂದು ಹೋಗುತ್ತಿದ್ದಳು.

ಗುಸು ಗುಸು ಮಾತು, ನಗುತ್ತಲೇ ಮಹಜರ್‌ ಪ್ರಕ್ರಿಯೆಯಲ್ಲಿ ಭಾಗಿ

ಪವಿತ್ರಾಗೌಡ ಜತೆಗೆ ಪವನ್‌ನನ್ನು ಸ್ಥಳ ಮಹಜರಿಗೆ ಕರೆತರಲಾಗಿತ್ತು. ಈ ವೇಳೆ ಇಬ್ಬರು ಗುಸು ಗುಸು ಎಂದು ಮಾತನಾಡುತ್ತಿರುವುದು ಕಂಡು ಬಂತು. ಪವನ್ ನಗು ನಗುತ್ತಲೇ ಮಹಜರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಪ್ರಭಾವಿಗಳ ರಕ್ಷಣೆಯ ವಿಶ್ವಾಸ ತೋರಿದಂತೆ ಇತ್ತು. ಅತ್ತ ಸತತ ಮೂರು ಗಂಟೆಗಳ ಮಹಜರ್ ಪ್ರಕ್ರಿಯೆ ನಂತರ ಹೊರ ಬಂದ ಪವಿತ್ರ ಗೌಡ ಕೂಡ ನಗುಮುಖದಲ್ಲೇ ಪೊಲೀಸ್‌ ವ್ಯಾನ್‌ ಹತ್ತಿದ್ದರು.

ಎಫ್‌ಎಸ್‌ಎಲ್ ತಂಡದಿಂದ ಮಹತ್ತರ ಸಾಕ್ಷಿಗಳ ಸಂಗ್ರಹ ಮಾಡಿ, ಎರಡು ಬಟ್ಟೆಗಂಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸ್ಥಳ ಮಹಜರು ಮುಗಿಸಿದ ಬಳಿಕ ಪವಿತ್ರಗೌಡ ಹಾಗೂ ಪವನ್‌ನನ್ನು ವಾಪಸ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಇತ್ತ ಎ5 ಆರೋಪಿ ನಂದೀಶ್‌ನನ್ನು ಪಟ್ಟಣಗೆರೆ ಶೆಡ್‌ನಿಂದ ನೇರವಾಗಿ ದರ್ಶನ್‌ ಮನೆಗೆ ಕರೆತಂದು ಪರಿಶೀಲನೆ ಮಾಡಲಾಯಿತು. ಈ ವೇಳೆ ನಂದೀಶ್‌ ಶೂ ಮತ್ತೆ ಬಟ್ಟೆಯನ್ನು ಜಪ್ತಿ ಮಾಡಲಾಯಿತು. ಸ್ಥಳ ಮಹಜರಿಗಾಗಿ ಆರೋಪಿ ವಿನಯ್ ಜತೆಗೆ ನಿಖಿಲ್‌ನನ್ನು ಅವರ ಮನೆಯಲ್ಲಿ ಕರೆದುಕೊಂಡು ಹೋಗಲಾಗಿತ್ತು. ಕೃತ್ಯ ನಡೆದ ದಿನ ಧರಿಸಿದ್ದ ಬಟ್ಟೆ , ಶೂ ಇನ್ನಿತರ ವಸ್ತುಗಳ ರಿಕವರಿಗಾಗಿ ‌ಮುಂದಾದರು.

ಚಿತ್ರದುರ್ಗದಲ್ಲೂ ಸ್ಥಳ ಮಹಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆ ತಂದು ಸ್ಥಳ ಮಹಜರು ಮಾಡಲಾಯಿತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ರಘು, ರವಿ, ಅನು, ಜಗ್ಗನ ಕರೆ ತರಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಗರದ ಮಹಾವೀರ ನಗರದಲ್ಲಿರುವ ಜಗ್ಗ ಅಲಿಯಾಸ್‌ ಜಗದೀಶ್ ಮನೆಯನ್ನು ಪರಿಶೀಲನೆ ನಡೆಸಿದರು. ಗೋವಿಂದರಾಜ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದಲ್ಲಿ ಮಹಜರು ನಡೆಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Petrol Diesel Price
ಕರ್ನಾಟಕ24 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ25 mins ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ1 hour ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ1 hour ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ1 hour ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ2 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ3 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ3 hours ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ8 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌