ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು, ಭಾರಿ ಮಳೆಗೆ ಜಿಲ್ಲೆಯಲ್ಲಿ ಹಲವು ರಸ್ತೆಗಳು ಜಲಾವೃತವಾಗಿವೆ.
ಭಾನುವಾರ ಮಧ್ಯಾಹ್ನದ ನಂತರ ಜಿಲ್ಲೆಯ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ಮುಂಜಾನೆಯವರೆಗೂ ತಲಕಾವೇರಿ ಭಾಗಮಂಡಲದಲ್ಲಿ ಮಳೆ ಬಂದಿದ್ದು, ಭಾಗಮಂಡಲದ ತ್ರಿವೇಣಿಸಂಗಮ ಭರ್ತಿಯಾಗಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಅಡಿಗಿಂತಲೂ ಹೆಚ್ಚು ನೀರು ನಿಂತಿರುವುದರಿಂದ ವಾಹನಗಳು ಚಲಿಸಲು ಆಗುತ್ತಿಲ್ಲ. ಮತ್ತಷ್ಟು ಮಳೆ ಹೆಚ್ಚಾದಲ್ಲಿ ಭಾಗಮಂಡಲ- ಮಡಿಕೇರಿ ಸಂಪರ್ಕ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.