Site icon Vistara News

Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

Rain News

ಹಾಸನ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಸಿಡಿಲು, ಗುಡುಗು ಸಹಿತ ಮಳೆ (Rain News) ಆರಂಭವಾಗಿದ್ದು, ಈ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಮೂವರು ಮಹಿಳೆಯರು ಕೊನೆಯುಸಿರೆಳೆದಿದ್ದಾರೆ.

ಮುತ್ತಮ್ಮ (70), ಪುಟ್ಟಮ್ಮ (63) ಮೃತ ದುರ್ದೈವಿಗಳು. ಮೂವರು ಗಾಯಳುಗಳಿಗೆ ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಗೆ ಶಾಸಕ ಎ.ಮಂಜು ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

ಇನ್ನು ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Exit mobile version