Site icon Vistara News

Rain alert | 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ರಾಜಧಾನಿಯಲ್ಲಿ ಮುಂದುವರಿದ ಮಳೆ

rain

ಬೆಂಗಳೂರು: ರಾಜಧಾನಿಯಲ್ಲಿ ಮುಂಜಾನೆಯಿಂದ ಮತ್ತೆ ಮಳೆ ಆರಂಭವಾಗಿದ್ದು, ಒಂದೇ ಸಮನೆ ಸುರಿಯುತ್ತಿದೆ. ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಕೆ.ಆರ್.ಪುರಂ, ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಬೆಂಗಳೂರು ‌ಸುತ್ತಮುತ್ತ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಜನರಲ್ಲಿ ಮನೆಗೆ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯಾದ್ಯಂತ 2 ದಿನ ಭಾರೀ ಮಳೆ ಸುರಿಯಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 19ರ ವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿನ್ನೆ ರಾತ್ರಿ ಸುರಿದ ಮಳೆ ಬೆಂಗಳೂರಿನ ಹಲವೆಡೆ ಅವಾಂತರಗಳನ್ನ ಸೃಷ್ಟಿಸಿದೆ.ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್ ನಲ್ಲಿ ಮರವೊಂದು ಧರೆಗುರುಳಿದೆ. ಇಎಸ್ಐ ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಾಲಿಕೆ ಸಿಬ್ಬಂದಿ ಮರ ಕತ್ತರಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Exit mobile version