Site icon Vistara News

Solar Energy Mela: ಬೆಂಗಳೂರಿನ ಜಿಕೆವಿಕೆಯಲ್ಲಿ ಮಾ. 9ರಂದು ‘ರೈತ ಸೌರ ಶಕ್ತಿ ಮೇಳ’; ಏನೇನಿರಲಿದೆ?

Raita Solar Energy Mela to be held on march 9th At GKVK in Bengaluru

ಬೆಂಗಳೂರು: ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಮಾರ್ಚ್‌ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಲಾಗಿದೆ.

ನಗರದ ಹೋಟೆಲ್‌ ಲಲಿತ್‌ ಅಶೋಕದಲ್ಲಿ ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು, ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್‌ 9 ರಂದು ʼರೈತ ಸೌರ ಶಕ್ತಿ ಮೇಳʼ ಆಯೋಜಿಸಲಾಗಿದೆ ಎಂದರು.

ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್‌ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್‌ಸೆಟ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 9ರ ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ‘ಕುಸುಮ್ ಸಿ’ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳಲ್ಲಿರುವ ವಿವಿಧ ವೋಲ್ಟೇಜ್ ವರ್ಗಗಳ ಹೊಸ ಸಬ್‌ಸ್ಟೇಷನ್‌ಗಳಿಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ. ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೇರಿದಂತೆ ಹಲವು ಸಚಿವರು ಮೇಳದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಜಾರ್ಜ್‌ ಮಾಹಿತಿ ನೀಡಿದರು.

ಹೆಚ್ಚಿನ ಪ್ರಮಾಣದಲ್ಲಿ ಸೌರ ಪಂಪ್‌ ಸೆಟ್‌ ಅಳವಡಿಕೆಯನ್ನು ರೈತರ ಸಮೂಹಗಳಲ್ಲಿ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ 30 ರಷ್ಟು ಸಹಾಯಧನವನ್ನು ಶೇ 50 ಕ್ಕೆ ಹೆಚ್ಚಿಸಿದೆ. ಒಟ್ಟಾರೆ ಮೊತ್ತದಲ್ಲಿ ಶೇ 20 ರಷ್ಟನ್ನು ಮಾತ್ರ ರೈತರು ಭರಿಸಬೇಕಾಗಿರುತ್ತದೆ. ಇದಲ್ಲದೇ, ಯೋಜನೆಯಡಿ ರೈತರಿಗೆ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸಲಿದೆ ಎಂದರು.

ಸಮಾರಂಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ | Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ

ಮೇಳದಲ್ಲಿ ಏನಿರುತ್ತೆ?

Exit mobile version