Rajakaluve Encroachment | ಮುಗಿದಿಲ್ಲ ಜೆಸಿಬಿ ಗರ್ಜನೆ; ನಾಳೆಯೂ ಇದೆ ಕಾರ್ಯಾಚರಣೆ - Vistara News

ಕರ್ನಾಟಕ

Rajakaluve Encroachment | ಮುಗಿದಿಲ್ಲ ಜೆಸಿಬಿ ಗರ್ಜನೆ; ನಾಳೆಯೂ ಇದೆ ಕಾರ್ಯಾಚರಣೆ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ (Rajakaluve Encroachment) ಮುಂದುವರಿದಿದೆ. ರಾಜಕಾಲುವೆ ಮೇಲೆ ಅನಧಿಕೃತವಾಗಿ ನಿರ್ಮಿಸಿದ್ದ ಸೇತುವೆಯನ್ನು ತೆರವು ಮಾಡಿದ್ದು, ಗುರುವಾರವೂ ಕಾರ್ಯಾಚರಣೆಗೆ ಅಧಿಕಾರಿಗಳು ಇಳಿಯಲಿದ್ದಾರೆ.

VISTARANEWS.COM


on

8ನೇ ದಿನದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಬಿಎಂಪಿ ಹಾಗೂ ಕಂದಾಯ ಅಧಿಕಾರಿಗಳಿಂದ 8ನೇ ದಿನದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ (Rajakaluve Encroachment) ಅಂತ್ಯಗೊಂಡಿದೆ. ನಗರದ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬುಧವಾರ ಕಸವನಗಳ್ಳಿಯ ವಲ್ಲಿಯಮ್ಮ ಲೇಔಟ್, ಗ್ರೀನ್ ಹುಡ್ ರೆಸಿಡೆನ್ಸಿ, ಮಾರತಹಳ್ಳಿ ಪೊಲೀಸ್ ಠಾಣೆಯ ಹಿಂಭಾಗ ಜಲಮಂಡಳಿಯ ಎಸ್.ಟಿ.ಪಿ ಬಳಿ ರಾಜಕಾಲುವೆ ಮೇಲೆ ನಿರ್ಮಿಸಿದ್ದ ಆರ್.ಸಿ.ಸಿ ಸೇತುವೆಯ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ.

ಕಸವನಹಳ್ಳಿ ವಲ್ಲಿಯಮ್ಮ ಲೇಔಟ್‌ನಲ್ಲಿ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರೀನ್ ಹುಡ್ ರೆಸಿಡೆನ್ಸ್ ಆವರಣದಲ್ಲಿ ಸುಮಾರು 150 ಮೀಟರ್ ಉದ್ದದ ಮಳೆ ನೀರುಗಾಲುವೆಯ ಮೇಲೆ ಅಳವಡಿಸಿದ್ದ ಸ್ಲ್ಯಾಬ್‌ನ ತೆರವು ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಸ್ಲ್ಯಾಬ್‌ಗೆ ಅಳವಡಿಸಿದ್ದ ಗ್ರಿಲ್ ತೆರವುಗೊಳಿಸಬೇಕಿದೆ. ಮಳೆ ನೀರುಗಾಲುವೆ ಮೇಲೆ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಕೂಡಾ ತೆರವುಗೊಳಿಸಲಾಗಿದೆ.

ಮಾರತಹಳ್ಳಿ ಪೊಲೀಸ್ ಠಾಣೆಯ ಹಿಂಭಾಗ, ಜಲಮಂಡಳಿ ಎಸ್.ಟಿ.ಪಿ ಬಳಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿರುವ ಸೇತುವೆ ತೆರವು ಕಾರ್ಯಾಚರಣೆಯು ಬಹುತೇಕ ಪೂರ್ಣಗೊಂಡಿದ್ದು, ಗುರುವಾರವೂ ತೆರವು ಕಾರ್ಯಾಚರಣೆ ಮುಂದುವರಿಯಲಿದೆ. ಕಸವನಹಳ್ಳಿ, ಹೂಡಿ ವ್ಯಾಪ್ತಿಯಲ್ಲಿ ಸರ್ವೇ ಕಾರ್ಯವನ್ನು ಮಾಡುತ್ತಿದ್ದು, ಒತ್ತುವರಿ ಮಾಡಿರುವ ಜಾಗವನ್ನು ಮಾರ್ಕಿಂಗ್ ಮಾಡಿದ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Bengaluru Rain | ಕೆರೆ, ರಾಜಕಾಲುವೆ ನುಂಗಿದ್ದರ ತನಿಖೆಗೆ ಆಯೋಗ, ಅಭಿವೃದ್ಧಿಗೆ ಟಾಸ್ಕ್‌ ಫೋರ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Congress Guarantee: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಇದನ್ನೂ ಓದಿ | Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು.

ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ನಿರೀಕ್ಷೆಯಂತೆ ಬಂದಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ. 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಇದನ್ನೂ ಓದಿ | Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞರ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading

ಕರ್ನಾಟಕ

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

Bengaluru News: ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ 2 ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

VISTARANEWS.COM


on

engineering students have invented a unique fire extinguisher drone at bengaluru
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲಾಗದ ಅದೆಷ್ಟೋ ಸಂದರ್ಭಗಳಲ್ಲಿ ಪ್ರಾಣ ನಷ್ಟ ಕೂಡ ಸಂಭವಿಸುತ್ತಿವೆ. ಹಲವು ಸಂದರ್ಭಗಳಲ್ಲಿ ಬೆಂಕಿ ನಂದಿಸುವ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತಲುಪುವುದು ಕಷ್ಟವಾಗುತ್ತದೆ. ಹಾಗೆಯೇ ಅತೀ ಎತ್ತರದ ಕಟ್ಟಡಗಳಿಗೆ ಅಂಟಿಕೊಂಡ ಬೆಂಕಿಯನ್ನು ನಂದಿಸುವುದು ಸವಾಲಾಗಿಯೇ ಪರಿಣಮಿಸುತ್ತದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೋಪಾಲನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ವಿಶಿಷ್ಟ ಡ್ರೋನ್‌ ಆವಿಷ್ಕರಿಸಿದ್ದು, ಆ ಮೂಲಕ ಯಶಸ್ವಿಯಾಗಿ ಬೆಂಕಿ (Bengaluru News) ನಂದಿಸಬಹುದಾಗಿದೆ.

ನಗರದಲ್ಲಿ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಎರಡು ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

ಈ ವಿನೂತನ ಮಾದರಿಯು ತೀವ್ರವಾದ ಬೆಂಕಿಯನ್ನು ತ್ವರಿತವಾಗಿ ನಂದಿಸುವಲ್ಲಿ ಸಫಲವಾಗುತ್ತದೆ. ಇದರಿಂದಾಗಿ ಜೀವಗಳನ್ನು ರಕ್ಷಿಸುವುದರ ಜತೆಗೆ ಕಟ್ಟಡಗಳಿಗೆ ಆಗುವ ಹಾನಿಯನ್ನು ಕೂಡಾ ತಡೆಯುತ್ತದೆ ಮತ್ತು ಪರಿಸರವನ್ನು ರಕ್ಷಿಸುತ್ತದೆ. ಈ ಡ್ರೋನ್‌ಗಳ ಕ್ಷಿಪ್ರ ನಿಯೋಜನೆಯಿಂದ ಹತ್ತಿರದ ಪ್ರದೇಶಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾದ ಮಾದರಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮೂಲಕ ವಿಶಾಲ ಪ್ರದೇಶವನ್ನು ಕವರ್‌ ಮಾಡಬಹುದಾಗಿದೆ. ಪ್ರದರ್ಶಿಸಲಾದ ಈ ಮಾದರಿಯನ್ನು ನೋಡಿದ ತಜ್ಞರು, ನಾವು ನೋಡಿದ ಅತ್ಯುತ್ತಮ ಪ್ರಾತ್ಯಕ್ಷಿಕೆ ಇದಾಗಿದೆ ಎಂದು ವಿದ್ಯಾರ್ಥಿಗಳ ಈ ಅನ್ವೇಷಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಎಲ್‌ಆರ್‌ಡಿಇ, ಡಿಆರ್‌ಡಿಒ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ. ಹರ್ಜಿಂದರ್ ಸಿಂಗ್ ಭಾಟಿಯಾ ಅವರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಅನ್ವೇಷಣೆಗಳ ಹೊರತಾಗಿ, ಎಲೆಕ್ಟ್ರಾನಿಕ್ಸ್ ಹಾರ್ಡ್‌ವೇರ್ ಯೋಜನೆಗಳು ಪ್ರಸ್ತುತ ಸಮಾಜದ ಅಗತ್ಯ ಮತ್ತು ಸವಾಲುಗಳನ್ನು ಪ್ರತಿನಿಧಿಸುವಂತಾಗಬೇಕು. ಇವುಗಳು ಕಡಿಮೆ ವೆಚ್ಚದ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವುದಾಗಲಿ, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಹೆಚ್ಚಿಸುವುದಾಗಲಿ ಅಥವಾ ಗ್ರಾಹಕ ಬಳಕೆಯ ವಿನೂತನ ಎಲೆಕ್ಟ್ರಾನಿಕ್ಸ್ ಉಪಕರಣ ಅನ್ವೇಷಿಸುವುದಾಗಿರಲಿ, ಈ ಯೋಜನೆಗಳು ನಮ್ಮ ಸುತ್ತಲಿನ ಜನರ ಜೀವನದ ಮೇಲೆ ಅರ್ಥಪೂರ್ಣ ಪರಿಣಾಮವನ್ನು ಬೀರುವ ಸಾಮರ್ಥ್ಯವನ್ನು ಹೊಂದಿರಬೇಕು.

ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ ಸಂಸ್ಥೆಯಲ್ಲಿ (IETE) ಸದಸ್ಯತ್ವ ಪಡೆಯುವುದರಿಂದ, ISRO, DRDO, LRDE ಮತ್ತು ಇತರ ಸಂಸ್ಥೆಗಳ ವಿವಿಧ ಉಚಿತ ಕೋರ್ಸ್‌ಗಳ ಪ್ರಯೋಜನ ಪಡೆಯಬಹುದಾಗಿದೆ. ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಅದ್ಭುತ ಭವಿಷ್ಯ ಅಡಗಿದೆ ಎಂಬುದನ್ನು ಒತ್ತಿ ಹೇಳುತ್ತೇನೆ ಎಂದು ತಿಳಿಸಿದರು.

GETOCS 4.0, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EC) ವಿಭಾಗವು ನಡೆಸಿದ ಕಾರ್ಯಕ್ರಮವಾಗಿದ್ದು, ದಾಖಲಾತಿಗಳ ಪ್ರಸ್ತುತಿ, ರೊಬೊಟಿಕ್ ಸ್ಪರ್ಧೆಗಳು, ಸರ್ಕ್ಯೂಟ್ ಡೀಬಗ್ ಮಾಡುವುದು, ಪ್ರಾಜೆಕ್ಟ್ ಪ್ರದರ್ಶನಗಳು, ತಾಂತ್ರಿಕ ರಸಪ್ರಶ್ನೆ ಮತ್ತು ಚರ್ಚೆಗಳಂತಹ ವಿವಿಧ ಚಟುವಟಿಕೆಗಳ ಮೂಲಕ ಭಾಗವಹಿಸುವವರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಿತ್ತು.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಗುರುವಾರ ಮುಕ್ತಾಯಗೊಂಡ ಈ ವಾರ್ಷಿಕ ಎರಡು ದಿನಗಳ ಕಾರ್ಯಕ್ರಮವು ಯಾವುದೇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿ ಕೊಟ್ಟಿತ್ತು. GETOCS 4.0ನ ಪ್ರಾಥಮಿಕ ಕಾರ್ಯಸೂಚಿಯು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವುದು, ಸಾಮಾಜಿಕ ಆರೋಗ್ಯವನ್ನು ಹೆಚ್ಚಿಸುವುದು ಮತ್ತು ಹೆಚ್ಚಿನ ಸಂಶೋಧನೆ-ಆಧಾರಿತ ಯೋಜನೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಗೋಪಾಲನ್ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಸಿ. ಪ್ರಭಾಕರ್ ಮಾತನಾಡಿ, ನಮ್ಮ ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಪ್ರಯೋಜನಕಾರಿಯಾದ ನವೀನ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ನಾವು ಗುಣಮಟ್ಟದ ಯೋಜನೆಗಳತ್ತ ಗಮನಹರಿಸುತ್ತಿದ್ದೇವೆ ಮತ್ತು ರಾಷ್ಟ್ರಕ್ಕೆ ನೆರವಾಗುವಂತಹ ಯೋಜನೆಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ, ನಾವು 30 ಲಕ್ಷ ರೂ.ದೊಂದಿಗೆ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಇಂಟೆಲ್ ಪ್ರಯೋಗಾಲಯವನ್ನು ಸ್ಥಾಪಿಸುತ್ತಿದ್ದೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಗಳ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಕೂಡಾ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಗೋಪಾಲನ್ ಇನ್‌ಸ್ಟಿಟ್ಯೂಷನ್ಸ್ ಸಿಇಒ ಡಾ. ಭಾಸ್ಕರ್ ರೆಡ್ಡಿ ಸಿ.ಎಂ. ಮಾತನಾಡಿ, ” GETOCS.4.0 ಕಾರ್ಯಕ್ರಮವನ್ನು ಇಸಿಇ ವಿಭಾಗವು ಆಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ರೀತಿಯ ಕಾರ್ಯಕ್ರಮವು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುತ್ತದೆ ಎಂದರು.

ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ವಿಕಾಸ್ ಸಿಂಗ್ ಮಾತನಾಡಿ, ಪ್ರತಿಷ್ಠಿತ ಕಂಪನಿಗಳಲ್ಲಿ ವಿದ್ಯಾರ್ಥಿಗಳ ಉದ್ಯೋಗಾವಕಾಶವನ್ನು ಹೆಚ್ಚಿಸಲು ನಿಯಮಿತ ಶೈಕ್ಷಣಿಕ ತರಗತಿಗಳ ಜತೆಗೆ ಹೆಚ್ಚುವರಿ ಕೌಶಲ್ಯಗಳನ್ನು ಪಡೆದುಕೊಳ್ಳುವ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ನಾವು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಕೌಶಲ್ಯದ ಬಗ್ಗೆ ತರಬೇತಿ ನೀಡುತ್ತೇವೆ, ಇದರಿಂದ ಅವರು ಉದ್ಯೋಗಿಗಳಾಗದೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.

ಇದನ್ನೂ ಓದಿ: Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

ಕಾರ್ಯಕ್ರಮದಲ್ಲಿ ಗೋಪಾಲನ್ ಆರ್ಗ್ಯಾನಿಕ್ಸ್ ನ ನಿರ್ದೇಶಕಿ ಸುನೀತಾ ಪ್ರಭಾಕರ್‌, ಎಸ್. ಅನಂತ ಪದ್ಮನಾಭಂ, ಇಸಿಇ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕುಮಾರ್, ಕಾರ್ಯಕ್ರಮ ಸಂಘಟನಾ ಸಮಿತಿಯ ಮುಖ್ಯಸ್ಥ ಡಾ. ಕೆ.ಸುರೇಶ್, ಉಜಿರೆಯ ಧರ್ಮಸ್ಥಳ ಎಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಮಧುಸೂದನ್, ಬಿಎಂಎಸ್ ಪ್ರಾಧ್ಯಾಪಕ ಡಾ. ಪುರುಷೋತ್ತಮ್, ಏರೋನಾಟಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ. ನಟರಾಜನ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್ಮೆಂಟ್‌ನ ಪ್ರಧಾನ ವಿಜ್ಞಾನಿ ಮತ್ತು ಇಸಿಇ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ತುಮಕೂರು

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Shira News: ಶಿರಾ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ನಗರದ ಮಧುಗಿರಿ ರಸ್ತೆಯ ಸಮೀಪದ ವಾರ್ಡ್ ನಂ. 21ರಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

VISTARANEWS.COM


on

Government urdu school roof collapse in Shira
Koo

ಶಿರಾ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿರುವ ಘಟನೆ ನಗರದ ಮಧುಗಿರಿ ರಸ್ತೆಯ ಸಮೀಪದ ವಾರ್ಡ್ ನಂ 21ರಲ್ಲಿ ಗುರುವಾರ (Shira News) ಮಧ್ಯಾಹ್ನ ನಡೆದಿದೆ.

ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿಯ ಗಾರೆ ಕುಸಿದು ಬಿದ್ದು, ಪಾಠ ಮಾಡುತ್ತಿದ್ದ ಶಿಕ್ಷಕಿ ಫರೀದಾಬಾನು ತಲೆಗೆ ಪೆಟ್ಟಾಗಿದೆ. ಶಿಕ್ಷಕಿ ಫರೀದಾಬಾನು ಎಂದಿನಂತೆ ಶಾಲೆಗೆ ಬಂದು ಪಾಠ ಮಾಡುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಪಾಠ ಮಾಡುತ್ತಿದ್ದ ಕೊಠಡಿಯ ಚಾವಣಿಯ ಗಾರೆ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದೆ. ಆದರೆ ಅದೃಷ್ಟವಶಾತ್ ಶಾಲಾ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಕೊಠಡಿಗಳು ಇದ್ದು, ಇದರಲ್ಲಿ ಸುಮಾರು 10 ಕೊಠಡಿಗಳು ಶಿಥಿಲಾವಸ್ಥೆ ತಲುಪಿವೆ. ಸುಮಾರು 240 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲಾ ಕಟ್ಟಡವು ಬಹಳ ಹಳೆಯದಾಗಿದ್ದು ಶಿಥಿಲಾವಸ್ಥೆ ತಲುಪಿದೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲೇ ನಿತ್ಯ ಪಾಠ, ಬೋಧನೆ ನಡೆಯುತ್ತಿದೆ. ಶಾಲೆಯ ಕೊಠಡಿಗಳು ಶಿಥಿಲಾವಸ್ಥೆ ತಲುಪಿರುವ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ, ಯಾರೊಬ್ಬರೂ ಎಚ್ಚೆತ್ತುಕೊಳ್ಳದಿರುವುದಕ್ಕೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

ಘಟನೆ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ನಗರಸಭೆ ಸದಸ್ಯ ಇರ್ಷಾದ್ ಚಾಂದ್ ಭಾಷಾ ಸೇರಿದಂತೆ ಹಲವರು ಭೇಟಿ ನೀಡಿ, ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ ಶಾಲೆಗೆ ಬದಲಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
ಕರ್ನಾಟಕ3 mins ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ18 mins ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ54 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ57 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ1 hour ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ1 hour ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು1 hour ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ1 hour ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ2 hours ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ2 hours ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌