Rajasthan Murder: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬಳ್ಳಾರಿ ಸ್ತಬ್ಧ, ಹಂತಕರ ಗುಂಡಿಕ್ಕಿ ಕೊಲ್ಲಿ ಎಂದ ರೇಣುಕಾಚಾರ್ಯ - Vistara News

ಕರ್ನಾಟಕ

Rajasthan Murder: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬಳ್ಳಾರಿ ಸ್ತಬ್ಧ, ಹಂತಕರ ಗುಂಡಿಕ್ಕಿ ಕೊಲ್ಲಿ ಎಂದ ರೇಣುಕಾಚಾರ್ಯ

Rajasthan Murder: ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯ ಲಾಲ್ ಹತ್ಯೆ ದೇಶದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದ್ದು, ಕರ್ನಾಟಕದಲ್ಲೂ ಪ್ರತಿಭಟನೆಗಳು ಜೋರಾಗಿವೆ.

VISTARANEWS.COM


on

Rajasthan Murder balari
ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ/ಹೊನ್ನಾಳಿ: ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ದೇಶಭಕ್ತ ನಾಗರಿಕರ ವೇದಿಕೆ ಸೋಮವಾರ ಕರೆಕೊಟ್ಟಿದ್ದ ಬಳ್ಳಾರಿ ಬಂದ್‌ ಯಶಸ್ವಿಯಾಯಿತು.

ಬಂದ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಡಿಎಆರ್ ತುಕಡಿಗಳ ಸಹಿತ ಸಿವಿಲ್ ಪೊಲೀಸರ ತಂಡ, ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದರು. ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಕರೆ ನೀಡಿದ ಬಂದ್‌ ಹಿನ್ನೆಲೆಯಲ್ಲಿ ಬಳ್ಳಾರಿ ಸ್ತಬ್ಧವಾಗಿತ್ತು.

ಇದನ್ನೂ ಓದಿ | 40 ದಿನ ಬಳ್ಳಾರಿ ಜೈಲಿನಲ್ಲಿದ್ದ ಗಡಿ ಕ್ಯಾತೆಯ ಶಿಂಧೆ ಈಗ ಮಹಾ ಸಿಎಂ!

ದೇಶಭಕ್ತ ನಾಗರಿಕರ ವೇದಿಕೆಯ ಕಾರ್ಯಕರ್ತರು ಹಿಂದು ಧ್ವಜ ಹಿಡಿದು ಕನಕದುರ್ಗಮ್ಮ ದೇವಸ್ಥಾನದಿಂದ ನಗರದ ರಾಯಲ್ ಸರ್ಕಲ್, ಮೋತಿ ಸರ್ಕಲ್, ಎಸ್ಪಿ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆಯಲ್ಲಿ ಬೃಹತ್‌ ಬೈಕ್ ರ‍್ಯಾಲಿ ನಡೆಸಲಾಯಿತು. ತಾಳೂರು ರಸ್ತೆಯಲ್ಲಿ ಟೈರ್‌ಗೆ ಬೆಂಕಿ‌ ಹಚ್ಚಿ ಆಕ್ರೋಶ ಹಾಕಿದ ಸಂಘಟನೆಗಳು, ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದರು.

ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು ಬಂದ್‌

ನಗರದ ಅಂಗಡಿ ಮಾಲೀಕರು‌ ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಬೆಂಬಲ ಸೂಚಿಸಿದರು. ಚಿತ್ರಮಂದಿರ, ಪೆಟ್ರೋಲ್ ಬಂಕ್, ಹೋಟೆಲ್ ಸೇರಿದಂತೆ ಸಂಪೂರ್ಣ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದವು. ಬೆಳಗ್ಗೆ 8 ಗಂಟೆಯಿಂದಲೇ ವಾಹನ ಸಂಚಾರ ವಿರಳವಾಗಿದ್ದು, ಅಲ್ಲಲ್ಲಿ ಭಾರಿ ವಾಹನಗಳು, ಸಣ್ಣಪುಟ್ಟ ವಾಹನಗಳ ಸಂಚಾರ ಕಂಡುಬರುತ್ತಿತ್ತು. ಬಹುತೇಕ ಶಾಲಾ-ಕಾಲೇಜುಗಳಿಗೆ ರಜೆ‌ ನೀಡಲಾಗಿತ್ತು.

ಶಾಸಕರಿಂದಲ್ಲೂ ಬಂದ್‌ಗೆ ಸಾಥ್‌

ಬಳ್ಳಾರಿ ನಗರ ಶಾಸಕ‌ ಸೋಮಶೇಖರ ರೆಡ್ಡಿ, ಮಾಜಿ ‌ಸಂಸದೆ ಶಾಂತಾ ಸೇರಿದಂತೆ ಇತರರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಶಾಸಕ ಸೋಮಶೇಖರ ರೆಡ್ಡಿ ನಗರ ರಾಯಲ್ ಸರ್ಕಲ್‌ನಲ್ಲಿಯೇ ಪ್ರತಿಭಟನಾಕಾರೊಂದಿಗೆ‌ ಧರಣಿ ಕುಳಿತು ಆಕ್ರೋಶ ಹೊರಹಾಕಿದರು.

ಹಂತಕರ ಗುಂಡಿಕ್ಕಿ ಕೊಲ್ಲಿ ಅಂದ ರೇಣುಕಾಚಾರ್ಯ

ದಾವಣಗೆರೆಯ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಉದಯಪುರದಲ್ಲಿ ಕನ್ಹಯಲಾಲ್ ಹತ್ಯೆ ಖಂಡಿಸಿ ಪ್ರತಿಭಟಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಾಕಿಸ್ತಾನದಲ್ಲಿ ತರಬೇತಿ ಪಡೆಯುವ ಭಯೋತ್ಪಾದಕರು ನಮ್ಮ ದೇಶದಲ್ಲಿ ದಾಳಿ ಮಾಡುತ್ತಾರೆ. ಈಗ ಕನ್ಹಯ್ಯ ಲಾಲ್‌ನ ಹತ್ಯೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ್ದಾರೆ. ಅವರನ್ನು ಗುಂಡಿಕ್ಕಿ ಕೊಂದಾಗ ಮಾತ್ರ ಹತ್ಯೆಯಾದ ಹಿಂದುಗಳ ಆತ್ಮಕ್ಕೆ ಶಾಂತಿ ಸಿಗಲಿದೆ. ಕೊಲೆ ಬೆದರಿಕೆ ಇದೆ ಎಂದು ತಿಳಿದ ಮೇಲೂ ರಾಜಸ್ಥಾನ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಕೂಡಲೇ ರಾಜಸ್ಥಾನ ಸರ್ಕಾರವನ್ನು ವಜಾ ಮಾಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಈ ಮಧ್ಯೆ, ಹತ್ಯೆ ಮಾಡಿದ ಹಂತಕರು ಬಿಜೆಪಿ ಕಾರ್ಯಕರ್ತರು ಎನ್ನುವ ವಿಚಾರವನ್ನು ಹುಟ್ಟುಹಾಕಿದ್ದಾರೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌, ರಾಹುಲ್ ಗಾಂಧಿ ಹಿಂದುಗಳ ಪರ ಎಂದು ಹೇಳಿಕೊಳ್ಳುತ್ತಿದ್ದಾರೆ. ನಾವು ಅವರಂತೆ ವೋಟ್‌ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ಅವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿಲ್ಲ ಎಂದು ಹೇಳಲಿ ನೋಡೋಣಾ ಎಂದು ಸವಾಲು ಹಾಕಿದ ರೇಣುಕಾಚಾರ್ಯ, ಇದೆಲ್ಲ ಕಾಂಗ್ರೆಸಿಗರ ಸೃಷ್ಟಿಯಾಗಿದ್ದು, ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ | ರಾಜಸ್ಥಾನ ಹತ್ಯೆ; ಟೇಲರ್‌ ಕನ್ಹಯ್ಯಲಾಲ್‌ಗೆ ಮುಸ್ಲಿಂ ದುಷ್ಕರ್ಮಿಗಳು ಇರಿದಿದ್ದು 26 ಬಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

Self Harming: ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

self harming gym trainer
Koo

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ (Video Call) ಮಾಡಿ ಹೆದರಿಸಲು ಹೋದ ಜಿಮ್‌ ಟ್ರೈನರ್‌ (Gym Trainer), ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು (hanging) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ (Self Harming) ಮಾಡಿಕೊಂಡ ದುರ್ದೈವಿ.

ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್‌ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.

ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.

ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್‌ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಅಂಜಲಿ ಎಂಬಾಕೆಯನ್ನು ಇರಿದು ಬರ್ಬರವಾಗಿ ಕೊಲೆ (Anjali Murder Case) ಮಾಡಿದ ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಶೇಖರ್‌ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಮಾನತು ಮಾಡಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Continue Reading

ಬೆಂಗಳೂರು

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

MLC Election: ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ.

VISTARANEWS.COM


on

mlc election congress candidate gift boxes
Koo

ಆನೇಕಲ್: ಮತದಾರರಿಗೆ (voters) ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್‌ಗಳು (Gift box) ಗೋದಾಮಿನಲ್ಲಿ ಪತ್ತೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಯ (Congress Candidate) ಕಡೆಯವರು ವಿಧಾನ ಪರಿಷತ್‌ ಚುನಾವಣೆಯ (MLC Election) ಬೆಂಗಳೂರು ಪದವೀಧರ ಕ್ಷೇತ್ರದ (graduates constituency) ಮತದಾರರಿಗೆ ವಿತರಿಸಲು ಇವುಗಳನ್ನು ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ. ದುಬಾರಿ ಬೆಲೆಯ ಕಿಚನ್‌ ಸೆಟ್‌ಗಳು ಇವುಗಳಲ್ಲಿವೆ. ಅವುಗಳ ಮೇಲೆ RG ಎಂಬ ಪ್ರಿಂಟ್ ಹೊಂದಿವೆ. ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಗೋದಾಮಿನಲ್ಲಿಯೂ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ.

ಸುಳಿವಿನ ಮೇರೆಗೆ ಬಿಜೆಪಿ ಕಾರ್ಯಕರ್ತರು ಗೋದಾಮಿನ ಮೇಲೆ ದಾಳಿ ನಡೆಸಿ ಇದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ. ಜಯನಗರದಲ್ಲಿ ರಾತ್ರಿ ಪತ್ತೆಯಾಗಿರುವ ಗಿಫ್ಟ್ ಸೆಟ್‌ಗಳ ಜೊತೆಗೆ ಇದು ಸಾಮ್ಯತೆ ಹೊಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ನಡೆಸಿರುವ ಬಿಜೆಪಿ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌, ನಿಂಗರಾಜೇಗೌಡ ಬಂಡಾಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ‌.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.

ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

ಜೆಡಿಎಸ್‌ನಲ್ಲೂ ಬಂಡಾಯ?

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್‌ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

KMF Nandini Logo: ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

VISTARANEWS.COM


on

T20 World Cup 2024
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಈಗಾಗಲೇ 2 ತಂಡಗಳಾದ ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಇದೀಗ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ.

ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading
Advertisement
Robert Fico
ವಿದೇಶ10 seconds ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

self harming gym trainer
ಕ್ರೈಂ5 mins ago

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

GT vs SRH
ಕ್ರೀಡೆ15 mins ago

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

mlc election congress candidate gift boxes
ಬೆಂಗಳೂರು40 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ42 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್51 mins ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ59 mins ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ1 hour ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

IPL 2024 Points Table
ಕ್ರೀಡೆ1 hour ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ1 hour ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌