ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಉದ್ಘಾಟನೆಗೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸಂಗೀತ ದಿಗ್ಗಜ ಇಳಯರಾಜ ಅವರ ಹೆಸರು ಪ್ರಸ್ತಾಪವಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ದಸರಾ ಉದ್ಘಾಟಕರ ಆಯ್ಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ ಅವರಿಂದ ರಜನಿಕಾಂತ್ ಮತ್ತು ಇಳಯರಾಜ ಹೆಸರು ಪ್ರಸ್ತಾಪವಾಯಿತು. ಆದರೆ ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಹೆಸರು ಇನ್ನೂ ಅಂತಿಮ ಆಗಿಲ್ಲ
ದಸರಾ ಉದ್ಘಾಟಕರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದರ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಗೊಳ್ಳಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ | ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೊಡಗಿನಿಂದ ಗಜಪಯಣ ಆರಂಭ