ಬೆಳಗಾವಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ. ಕರ್ನಾಟಕದಲ್ಲಿ ಮತ್ತೆ 5 ವರ್ಷ ಆಡಳಿತಕ್ಕೆ ಅವಕಾಶ ಕೊಟ್ಟರೆ ರಾಜ್ಯವನ್ನು ಅತ್ಯಂತ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ ಎಂದು ನಂದಗಢದಲ್ಲಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ (BJP Rathayatre) ಚಾಲನೆ ನೀಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು.
ರಥ ಯಾತ್ರೆಗೆ ಚಾಲನೆ ನೀಡಿದ ಅವರು, ಬಳಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 50 ವರ್ಷ ಮಾಡಲು ಅಸಾಧ್ಯವಾದ ಅಭಿವೃದ್ಧಿ ಕಾರ್ಯಗಳನ್ನು ನಮ್ಮ ಸರ್ಕಾರ ಮಾಡಿದೆ. ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮೋದಿ ಅವರು ಮಾಡಿದ್ದಾರೆ. ರಕ್ಷಣಾ ಕ್ಷೇತ್ರದಲ್ಲೂ ನಾವು ಸ್ವಾವಲಂಬನೆಯತ್ತ ಮುನ್ನಡೆದಿದ್ದು, ಜಗತ್ತಿಗೂ ರಫ್ತು ಮಾಡಲು ಶಕ್ತರಾಗಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ
ಎಚ್‍ಎಎಲ್, ಕೈಗಾರಿಕಾ ಕಾರಿಡಾರ್‌ಗಳ ಮೂಲಕ ಉದ್ಯೋಗಾವಕಾಶ ಹೆಚ್ಚಲಿದೆ. ದೇಶದ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಮೋದಿ ಅವರು ಮಾಡಿದ ಕೆಲಸವನ್ನು ಗಮನಿಸಿ ಬಿಜೆಪಿಯನ್ನು ಬೆಂಬಲಿಸಬೇಕು. ಪ್ರತಿ ಮನೆಗೆ ನೀರು, ಭೂಮಿಗೆ ನೀರಾವರಿ ಕೊಡಲು ನಾವು ಬದ್ಧರಿದ್ದೇವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಹೇಳುವುದು ಒಂದು, ಮಾಡುವುದು ಇನ್ನೊಂದು. ಆದರೆ, ಬಿಜೆಪಿ ಹೇಳಿದ್ದನ್ನೇ ಮಾಡಿ ತೋರಿಸುತ್ತದೆ. ಯಡಿಯೂರಪ್ಪ ಅವರು ರಾಜ್ಯದ ಅತ್ಯುನ್ನತ ನಾಯಕ. ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ್ದೇವೆ. ಕರ್ನಾಟಕಕ್ಕೆ ಅವರ ಸೇವೆಯನ್ನು ಬಿಜೆಪಿ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
ಬೆಳಗಾವಿಯು ಕರ್ನಾಟಕದ ಅತ್ಯುನ್ನತ ಸ್ಥಾನ ಪಡೆದ ಪ್ರದೇಶ. 2018ರಲ್ಲಿ ಬಿಜೆಪಿ 6 ದಿನಗಳ ಸರ್ಕಾರ ಮಾಡಿತ್ತು. ಬಳಿಕ ಕುಮಾರಸ್ವಾಮಿ ಸರ್ಕಾರ ಬಂತು. ಪುನಃ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದರು. ಆದರೆ, ಆರೋಗ್ಯದ ಕಾರಣಕ್ಕಾಗಿ ಅಧಿಕಾರವನ್ನು ತ್ಯಜಿಸಿದರು. ಬಳಿಕ ಸಜ್ಜನ-ಪ್ರಾಮಾಣಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು ಎಂದು ವಿವರಿಸಿದರು.
ಇದನ್ನೂ ಓದಿ: Mahesh Babu: ಜಿಮ್ ವರ್ಕೌಟ್ ಫೋಟೊ ಹಂಚಿಕೊಂಡ ಮಹೇಶ್ ಬಾಬು, SSMB 28 ತಯಾರಿ ನಡೆಸಿದ್ದಾರಾ ನಟ?
370ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು ಮಾಡುವ ಬದ್ಧತೆ ಪ್ರದರ್ಶಿಸಿದ್ದೇವೆ. ಕಾಂಗ್ರೆಸ್ ಇಂಥ ಅಪರಾಧಗಳನ್ನು ಒಪ್ಪಿಕೊಂಡಿತ್ತು. ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಹಣ ಕೊಡಲಾಗಿದೆ. 8 ಕೋಟಿ ಮನೆಗಳಿಗೆ ನಲ್ಲಿ ನೀರನ್ನು ನೀಡಿದ್ದೇವೆ. 80 ಕೋಟಿ ಜನರಿಗೆ ಉಚಿತ ಪಡಿತರ ಕೊಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ಬಂದಾಗ ಉಚಿತ ಲಸಿಕೆ ಕೊಟ್ಟ ದೇಶ ನಮ್ಮದು. ಅಮೆರಿಕ, ಫ್ರಾನ್ಸ್‌ನಂಥ ದೇಶದಲ್ಲೂ ಇಂಥ ಸಾಧನೆ ಆಗಿಲ್ಲ. ಉಚಿತ ಲಸಿಕೆ ಕೊಡದಿದ್ದರೆ 39 ಲಕ್ಷ ಜನರು ಅಸುನೀಗುತ್ತಿದ್ದರು ಎಂದು ಹಾರ್ವರ್ಡ್ ವಿವಿ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದ ರಾಜನಾಥ್ ಸಿಂಗ್, ವೀರರನ್ನು ನೀಡಿದ ನಾಡಿದು. ರಾಣಿ ಚನ್ನಮ್ಮರ ವೀರಗಾಥೆಯನ್ನು ದೇಶದ ವಿವಿಧೆಡೆ ಚರ್ಚಿಸುತ್ತಾರೆ. ಸಂಗೊಳ್ಳಿ ರಾಯಣ್ಣ ಸ್ಫೂರ್ತಿದಾಯಕ ನಾಯಕ. ಅವರ ಪ್ರತಿಮೆ, ಸಮಾಧಿಗೆ ಮಾಲಾರ್ಪಣೆ ಮಾಡಿ ಧನ್ಯತಾ ಭಾವ ಹೊಂದಿದ್ದೇನೆ ಎಂದರು.
ತ್ರ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ಪೈಕಿ ತ್ರಿಪುರ, ನಾಗಾಲ್ಯಾಂಡ್‍ಗಳಲ್ಲಿ ನಮ್ಮ ಸರ್ಕಾರ ಮತ್ತೆ ರಚನೆ ಆಗಲಿದೆ. ಮೇಘಾಲಯದಲ್ಲೂ ನಮ್ಮ ಶಕ್ತಿ ಹೆಚ್ಚಿದೆ. ಇದು ಸಂತಸದ ವಿಚಾರ ಎಂದರು.
ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ಜನರಿಗೆ ತಲುಪಿಸಲಾಗುತ್ತಿದೆ. ಭ್ರಷ್ಟಾಚಾರಕ್ಕೂ ಔಷಧಿ ಇದೆ ಎಂಬುದನ್ನು ಮೋದಿ ತೋರಿಸಿಕೊಟ್ಟಿದ್ದಾರೆ. ಹಣದುಬ್ಬರ ನಮ್ಮಲ್ಲಿ ಕನಿಷ್ಠ ಮಟ್ಟದಲ್ಲಿದೆ. ಭಾರತದ ಅರ್ಥ ವ್ಯವಸ್ಥೆ ಅತ್ಯಂತ ಸದೃಢವಾಗಿದೆ. ಹಿಂದೆ ಅರ್ಥ ವ್ಯವಸ್ಥೆ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು 10- 11ನೇ ಸ್ಥಾನದಲ್ಲಿತ್ತು. ಈಗ ಅರ್ಥ ವ್ಯವಸ್ಥೆಯು 5ನೇ ಸ್ಥಾನಕ್ಕೆ ಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು. ನಾಲ್ಕೈದು ವರ್ಷಗಳಲ್ಲಿ ದೇಶವು ದೊಡ್ಡ ಅರ್ಥ ವ್ಯವಸ್ಥೆಯಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನ
ಭಾರತವನ್ನು ವಿಭಜಿಸಿದವರೇ ಭಾರತ್ ಜೋಡೋ ಮಾಡುತ್ತಾರೆ. ಜನರ ಕಣ್ಣಲ್ಲಿ ಧೂಳು ಹಾಕುವವರು ಸದಾ ಯಶ ಪಡೆಯಲು ಅಸಾಧ್ಯ. ಮೋದಿ ಅವರ ಸಾವಿನ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಮಲ ಅರಳುವುದನ್ನು ಸದಾ ನೋಡುವಂತಾಗಲಿದೆ ಎಂದು ತಿಳಿಸಿದರು. ಇದಕ್ಕೂ ಮೊದಲು ವೀರ ಸಂಗೊಳ್ಳಿ ರಾಯಣ್ಣನ ಸಮಾಧಿಗೆ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು.