Site icon Vistara News

Chief Secretary: ರಜನೀಶ್‌ ಗೋಯಲ್‌ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

Rajneesh Goel

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಕಾರ್ಯಾವಧಿ ನವೆಂಬರ್‌ 30ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಜನೀಶ್‌ ಗೋಯಲ್‌ ಅವರನ್ನು ನೇಮಿಸಲಾಗಿದೆ.

ಈ ಬಗ್ಗೆ ರಾಜ್ಯಪಾಲರ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಉಕೇಶ್‌ ಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರು ಡಿ. 1ರಂದು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ರಜನೀಶ್ ಗೋಯಲ್ ಅವರು 1986ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಐಎಎಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ | Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್‌; ದಾಖಲೆ ಸಲ್ಲಿಸಿ ಸೌಲಭ್ಯ ಪಡೆಯಿರಿ!

ಇತರ ಹಿರಿಯ ಐಎಎಸ್ ಅಧಿಕಾರಿಗಳಾದ ಅಜಯ್ ಸೇಠ್, ವಿ.ಮಂಜುಳಾ ಮತ್ತು ರಾಕೇಶ್ ಸಿಂಗ್ ಅವರ ಹೆಸರುಗಳೂ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುನ್ನೆಲೆಗೆ ಬಂದಿದ್ದವು. ಆದರೆ ಅಂತಿಮವಾಗಿ ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version