ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಬಿಜಾಪುರ ಅವರು ಶನಿವಾರ (ಸೆ.3) ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ವಯೋ ಸಹಜ ಕಾಯಿಲೆಯಿಂದ (Death News) ನಿಧನವಾಗಿದ್ದಾರೆ.
ಕಾಸೀಮಸಾಬ ಹುಸೇನಸಾಬ ಬಿಜಾಪುರ (88) ಇವರು ಜಾನಪದ ಸಾಹಿತ್ಯದಲ್ಲಿ ಸಾಧನೆ ಮಾಡಿ, ತಮ್ಮನ್ನು ತೊಡಗಿಸಿಕೊಂಡಿದ್ದರು. ಜಾನಪದ ಸಾಹಿತ್ಯಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕಾಹು ಎಂದೇ ಹೆಸರುವಾಸಿ ಆದವರು.
1935 ಫೆಬ್ರವರಿ 4ರಂದು ಜನಿಸಿದ್ದು, ಜಾನಪದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು. ಕಾಹು ಅವರ ಮೆದುಳಿಗೆ ಪಾರ್ಶ್ವವಾಯು ತಗುಲಿ ಚಿಂತಾಜನಕ ಸ್ಥಿತಿಯಲ್ಲಿದ್ದರು.
ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು, ಜನಪ್ರತಿನಿಧಿಗಳಿಂದ ತೀವ್ರ ಸಂತಾಪ ವ್ಯಕ್ತವಾಗಿದೆ.
ಇದನ್ನೂ ಓದಿ | Mikhail Gorbachev | ಆಧುನಿಕ ರಷ್ಯದ ನಿರ್ಮಾತೃ ಮಿಖಾಯಿಲ್ ಗೊರ್ಬಚೆವ್ ನಿಧನ