ಉಡುಪಿ: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಉಡುಪಿಯ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಅವರ ಕಾರು ಅಪಘಾತಗೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಸೋಮವಾರ ಮುಂಜಾನೆ ಉಡುಪಿಯ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್‌ವೊಂದು ಏಕಾಏಕಿ ಅಡ್ಡಲಾಗಿ ಬಂದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ದುರಂತ ಸ್ವಲ್ಪದರಲ್ಲೇ ತಪ್ಪಿದೆ.
ಘಟನೆಗೆ ಬೈಕ್ ಸವಾರನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜರ ಮತ್ತವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಎಂಇಎಸ್‌ನಿಂದ ಮತ್ತೆ ಗಡಿ ಕ್ಯಾತೆ; ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಗೆ ಸಿದ್ಧತೆ