Site icon Vistara News

Ram Mandir: ರಾಮಮಂದಿರ ಲೋಕಾರ್ಪಣೆ ವೇಳೆ ರಾಜ್ಯದಲ್ಲಿ ಗೋದ್ರಾ ಮಾದರಿ ದಾಳಿ ಸಾಧ್ಯತೆ: ಬಿ.ಕೆ. ಹರಿಪ್ರಸಾದ್

BK Hariprasad

ಬೆಂಗಳೂರು: ಒಂದು ಕಡೆ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ (Ram Mandir) ಸಕಲ ಸಿದ್ಧತೆಗಳು ನಡೆಯುತ್ತಿದೆ. ದೇಶಾದ್ಯಂತ ಜನ ಸಡಗರದಲ್ಲಿದ್ದಾರೆ. ಅಲ್ಲದೆ, ಎಲ್ಲ ರಾಜ್ಯಗಳಿಂದಲೂ ಅಂದು ಅಲ್ಲಿಗೆ ತೆರಳಲು ಹಲವರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹೊತ್ತಿನಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ (BK Hariprasad) ಬಾಂಬ್‌ ಸಿಡಿಸಿದ್ದಾರೆ. ಗೋಧ್ರಾ ದುರಂತದಂತಹ ಘಟನೆಯು ಕರ್ನಾಟಕದಲ್ಲಿ ಆಗಬಹುದು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್‌, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಕಾರಣ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ನಮಗೆ ಈ ಬಗ್ಗೆ ಮಾಹಿತಿ ಸಿಗುತ್ತಾ ಇದೆ. ಮಾಹಿತಿ ಇದ್ದೇ ನಾನು ಈ ರೀತಿ ಹೇಳುತ್ತಾ ಇದ್ದೇನೆ. ಆದರೆ, ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನ್ನ ಹೇಳಿಕಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳಾಗಿದ್ದಾರೆ. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು ಎಂದು ಬಿ.ಕೆ. ಹರಿಪ್ರಸಾದ್‌ ತಿಳಿಸಿದರು.

ಇದನ್ನೂ ಓದಿ | Ram Janmabhoomi: ಕ್ರಿಮಿನಲ್‌ ಆರೋಪಿ ಬೆನ್ನಿಗೆ ಬಿಜೆಪಿ ನಿಂತಿದ್ದು ಎಷ್ಟು ಸರಿ? ಸಿದ್ದರಾಮಯ್ಯ ಸರಣಿ ಪ್ರಶ್ನೆ!

ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಕಾರಣ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ನಮಗೆ ಈ ಬಗ್ಗೆ ಮಾಹಿತಿ ಸಿಗುತ್ತಾ ಇದೆ. ಮಾಹಿತಿ ಇದ್ದೇ ನಾನು ಈ ರೀತಿ ಹೇಳುತ್ತಾ ಇದ್ದೇನೆ. ಆದರೆ, ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನ್ನ ಹೇಳಿಕಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದರು

ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳಾಗಿದ್ದಾರೆ. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು ಎಂದು ಬಿ.ಕೆ. ಹರಿಪ್ರಸಾದ್‌ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಗೃಹ ಸಚಿವ ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ವ್ಯಂಗ್ಯವಾಡಿದರು.

ವಿಸ್ತಾರ ನ್ಯೂಸ್‌ ಪ್ರಶ್ನೆಗೆ ಉತ್ತರ ಕೊಡದ ಬಿ.ಕೆ. ಹರಿಪ್ರಸಾದ್!

ಇಂತಹ ಹೇಳಿಕೆ ಕೊಟ್ಟಿರುವ ಬಿ.ಕೆ. ಹರಿಪ್ರಸಾದ್‌ ಅವರನ್ನು ಬಂಧಿಸಬೇಕು ಎಂದು ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿದೆ. ಈ ನಡುವೆ ಬಿ.ಕೆ. ಹರಿಪ್ರಸಾದ್‌ ಅವರ ಬಳಿ ವಿಸ್ತಾರ ನ್ಯೂಸ್‌ ಪ್ರತಿಕ್ರಿಯೆ ಕೇಳಲು ಹೋದರೆ, ಉತ್ತರ ನೀಡದೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಯಾವ ಆದರದ ಮೇಲೆ ಗೋಧ್ರಾ ಹತ್ಯಾಕಾಂಡ ಮಾದರಿ ಗಲಭೆ ಆಗಲಿದೆ ಎಂದು ಹೇಳಿದ್ದೀರಿ? ಹಾಗಾದರೆ ಯಾವ ಸಂಘಟನೆ ಪ್ಲಾನ್ ಮಾಡುತ್ತಿದೆ? ನೀವು ಹೇಳಿದಂತೆ ಇದು ಕೇವಲ ನಿಮ್ಮ ವೈಯುಕ್ತಿಕ ಹೇಳಿಕೆಯೋ? ಇಲ್ಲವೇ ಯಾವುದಾದರೂ ಇಂಟೆಲಿಜೆನ್ಸ್ ಮಾಹಿತಿಯೋ ಎಂದು ವಿಸ್ತಾರ ನ್ಯೂಸ್ ಪ್ರಶ್ನೆ ಮಾಡಿತು. ಆದರೆ, ಇದಕ್ಕೆ ಉತ್ತರಿಸದೇ ಬಿ.ಕೆ. ಹರಿಪ್ರಸಾದ್‌ ಸ್ಥಳದಿಂದ ನಿರ್ಗಮಿಸಿದ್ದಾರೆ.

ನಾನು ಉತ್ತರ ಕೊಡಲ್ಲ ಎಂದ ಸಿಎಂ

ಅಯೋಧ್ಯೆ ಕಾರ್ಯಕ್ರಮದ ಸಂದರ್ಭದಲ್ಲಿ ಗೋದ್ರಾ ರೀತಿಯ ಘಟನೆ ಮತ್ತೆ ನಡೆಯಬಹುದು ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಅನುಮಾನಗಳಿಗೆ ಮತ್ತು ಊಹೆಗಳಿಗೆ ನಾನು ಉತ್ತರ ಕೊಡಲ್ಲ ಎಂದು ಹೇಳಿದರು.

ಇದನ್ನೂ ಓದಿ | BJP Protest: 48 ಗಂಟೆಯಲ್ಲಿ ಶ್ರೀಕಾಂತ್‌ ಬಿಡುಗಡೆ ಮಾಡದಿದ್ದರೆ ಹುಷಾರ್: ವಿಜಯೇಂದ್ರ ವಾರ್ನಿಂಗ್

ಯಾರು ಏನು ಮಾಡಿದ್ದಾರೆ ಎಂಬುದು ಗೊತ್ತಿದೆ: ವಿಜಯೇಂದ್ರ

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಯಾರು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ ಅಂತ ಹೇಳಿದ್ದಾರೆ.

Exit mobile version