Site icon Vistara News

Rama Mandir : ರಾಮ ಮಂದಿರ ಅಕ್ಷತೆ ವಿತರಿಸುತ್ತಿದ್ದವನ ಮೇಲೆ ಪುತ್ತಿಲ ಟೀಮ್‌ ಹಲ್ಲೆ

Puttur attack Case Rama Mandir

ಪುತ್ತೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ (Rama Mandir Inauguration) ಹಿನ್ನೆಲೆಯಲ್ಲಿ ರಾಮ ಮಂದಿರದ (Rama Mandir) ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ (Hindu Activist) ಮೇಲೆ ಪುತ್ತಿಲ ಪರಿವಾರದ (Puthila Parivara) ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ.

ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಎಂದು ಗುರುತಿಸಲಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮ ಮಂದಿರದ ಅಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು.

ಆದರೆ, ಇದಕ್ಕೆ ಸ್ಥಳೀಯ ನಿವಾಸಿಗಳಾದ ಪುತ್ತಿಲ ಪರಿವಾರದ ಬೆಂಬಲಿಗರು ಎನ್ನಲಾದ ಧನಂಜಯ್ ಮತ್ತು ತಂಡ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅದೇ ದ್ವೇಷದಲ್ಲಿ ಸಂತೋಷ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸಂತೋಷ ತಾಯಿಯ ಮೇಲೂ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಸಂತೋಷ್ ಹಾಗೂ ಅವರ ತಾಯಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದ್ದು, ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರಕಾರ ಮತ್ತು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದರು. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ ಹಲ್ಲೆ ಮಾಡಿದವರು ಮತ್ತು ಹಲ್ಲೆಗೆ ಒಳಗಾದವರಿಗೆ ಜಮೀನಿನ ವಿಷಯದಲ್ಲಿ ಜಗಳವಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Rama Mandir : ರಾಮ ಮಂದಿರ ಉದ್ಘಾಟನೆಗೆ ದಿನಗಣನೆ; ಜ. 22ರವರೆಗೆ ರಾಜ್ಯದಲ್ಲಿ ಹೈಅಲರ್ಟ್‌

ಹಲ್ಲೆಗೂ ಅಕ್ಷತೆ ವಿತರಣೆಗೂ ಸಂಬಂಧವಿಲ್ಲ ಎಂದ ಎಸ್ಪಿ

ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಈ ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಮುಂಡೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಅಕ್ಷತೆ ಹಂಚುವ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ ಅದು ಜಾಗದ ವಿಚಾರಕ್ಕೆ ನಡೆದ ಗಲಾಟೆ ಆಗಿದೆ. ಹಲ್ಲೆ ನಡೆಸಿದವರಿಗೂ, ಹಲ್ಲೆಗೊಳಗಾದ ಸಂತೋಷ್ ಕುಟುಂಬದ ಮಧ್ಯೆ ದಾರಿ ವಿಚಾರವಾಗಿ ವಿವಾದವಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಗಲಾಟೆ ನಡೆದಿದೆ. ಈಗ ಎರಡೂ ಕಡೆಯವರು ದೂರು ನೀಡಿದ್ದಾರೆ. ಎರಡೂ ಕಡೆಯವರ ದೂರಿನಂತೆ ಪ್ರಕರಣ ದಾಖಲಾಗಿದೆ . ಈ ಘಟನೆಯಲ್ಲಿ ಯಾವುದೇ ರಾಜಕೀಯ ದ್ವೇಷ ಅಥವಾ ಅಕ್ಷತೆಯ ವಿಚಾರವಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

Exit mobile version