ರಾಮನಗರ: ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ (Bomb Threat) ಬಾಂಬ್ ಬೆದರಿಕೆಯ ಸಂದೇಶ ಬಂದಿದೆ. ಇಂಗ್ಲಿಷ್ ಬಳಸಿ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ ಆಡಳಿತ ಹಾಗೂ ಸಿಬ್ಬಂದಿಗೆ ಇ-ಮೇಲ್ ಬಂದಿದೆ. ಸಂಡೇ ನಿನ್ನ ಹಾಗೂ ವಂಡರ್ ಲಾ ಪಾರ್ಕ್‌ಗೆ ಮೂರು ಬಾಂಬ್ ಸಿಡಿಸುತ್ತೇವೆ ಇನ್ಶಾಅಲ್ಲಾ..! ಕನ್ನಡದ ಕಾಫೀರರು ಮುಸ್ಲಿಂರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯ ಶಿಕ್ಷೆ ಸಿಗಲಿದೆ ಎಂದು ಸಂದೇಶ ಕಳಿಸಿದ್ದಾರೆ.
ಕಳೆದ ಆಗಸ್ಟ್ 3ರಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಇರ್ಫಾನ್ ಜಿಹಾದಿ ಎಂಬ ಹೆಸರಿನ ಇ -ಮೇಲ್‌ನಿಂದ ಬಂದಿದೆ. ಬಿಡದಿ ಪೊಲೀಸರು ಇ ಮೇಲ್ ಮಾಡಿದ ಆರೋಪಿಯನ್ನು ಹುಡುಕುತ್ತಿದ್ದಾರೆ. ಬಾಂಬ್ ಬೆದರಿಕೆ ಬಳಿಕ ಇಡೀ ಪಾರ್ಕ್ ಪರಿಶೀಲನೆ ಮಾಡಲಾಗಿದೆ.
ಇದನ್ನೂ ಓದಿ: Wild Animals Attack : ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ
ತಿರುವನಂತಪುರಂ: ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ (Air India) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ (Bomb Threat) ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Thiruvananthapuram Airport) ಸಂಪೂರ್ಣ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು ಮತ್ತು ಅದನ್ನು ಪ್ರತ್ಯೇಕ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ