Ramanagara Lawyers: ರಾಮನಗರ ವಕೀಲರ ಮೇಲೆ ಕೇಸ್; ಪಿಎಸ್‍ಐ ಅಮಾನತಿಗೆ ಬಿಜೆಪಿ ಆಗ್ರಹ - Vistara News

ರಾಮನಗರ

Ramanagara Lawyers: ರಾಮನಗರ ವಕೀಲರ ಮೇಲೆ ಕೇಸ್; ಪಿಎಸ್‍ಐ ಅಮಾನತಿಗೆ ಬಿಜೆಪಿ ಆಗ್ರಹ

Ramanagara Lawyers: ಆರೋಪಿಗಳನ್ನು ಕೈಬಿಟ್ಟು ನಿರಪರಾಧಿಗಳ ಮೇಲೆ ಕೇಸು ಹಾಕುವ ಈ ಕೆಟ್ಟ ಸಂಪ್ರದಾಯಕ್ಕೆ ಕಾರಣರಾದ ಅಲ್ಲಿನ ಪಿಎಸ್‍ಐಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

VISTARANEWS.COM


on

Case against Ramanagara lawyers BJP demands suspension of PSI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವೈಯಕ್ತಿಕ ದ್ವೇಷ ಇಟ್ಟುಕೊಂಡು ಪೊಲೀಸರ ಮೂಲಕ ವಕೀಲರ (Ramanagara Lawyers) ಮೇಲೆ ಕೇಸನ್ನು ದಾಖಲು ಮಾಡುವ ಕೆಟ್ಟ ಸಂಪ್ರದಾಯದ ವಿರುದ್ಧ ರಾಮನಗರದಾದ್ಯಂತ ಇವತ್ತು ವಕೀಲರು ಸೇರಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರದ ಪಿಎಸ್‍ಐ ತನ್ವೀರ್ ಹುಸೇನ್ ಅವರು ವಿನಾಕಾರಣ ನಿರಪರಾಧಿ ವಕೀಲರ ಮೇಲೆ ಕೇಸು ಹಾಕಿದ್ದಾರೆ. ಇದು ಖಂಡನೀಯ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಕಿಡಿಕಾರಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಆರೋಪಿಗಳನ್ನು ಕೈಬಿಟ್ಟು ನಿರಪರಾಧಿಗಳ ಮೇಲೆ ಕೇಸು ಹಾಕುವ ಈ ಕೆಟ್ಟ ಸಂಪ್ರದಾಯಕ್ಕೆ ಕಾರಣರಾದ ಅಲ್ಲಿನ ಪಿಎಸ್‍ಐಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ದೇವಸ್ಥಾನಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಬಂದ ಟೀಕೆ ಬಗ್ಗೆ ದೂರು ನೀಡಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ಬಿಟ್ಟು ಆರೋಪಿಗಳಿಂದಲೇ ದೂರು ಸ್ವೀಕರಿಸಿ 40 ಜನ ವಕೀಲರ ಮೇಲೆ ಕೇಸು ದಾಖಲಿಸಲಾಗಿದೆ. ಅದರಲ್ಲೂ ಕೂಡ ವಿಪಕ್ಷದಲ್ಲಿ ಕೆಲಸ ಮಾಡುವ ವಕೀಲರನ್ನು ಹುಡುಕಿ ಅವರ ಮೇಲೆ ಕೇಸು ದಾಖಲಿಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು.

ದ್ವೇಷ ಸಾಧನೆಗೆ ಪೊಲೀಸರ ಬಳಕೆ

ಪೊಲೀಸರ ಮೂಲಕ ವೈಯಕ್ತಿಕ ದ್ವೇಷ ಸಾಧನೆ, ವಿಪಕ್ಷಗಳ ಮೇಲೆ ದ್ವೇಷ ಸಾಧನೆಗೆ ಬಳಸಿಕೊಳ್ಳಲಾಗಿದೆ. ಅಂಥ ಪೊಲೀಸ್ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಆಗ್ರಹಿಸಿದರು. ಈ ಕುರಿತು ಸದನದಲ್ಲೂ ಗಮನ ಸೆಳೆಯುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜಕೀಯ ಬಿಟ್ಟರೆ ವಕೀಲರ ಜತೆ ಚರ್ಚೆ: ಡಿಕೆಶಿ

“ರಾಮನಗರದಲ್ಲಿ ಬಿಜೆಪಿಯವರು (BJP Karnataka) ವಕೀಲರನ್ನು (Ramanagara Lawyers) ತಪ್ಪು ದಾರಿಗೆಳೆದು ರಾಜಕಾರಣ ಮಾಡುತ್ತಿದ್ದಾರೆ. ಈ ಪ್ರತಿಭಟನೆ ರಾಜಕೀಯ ಪ್ರೇರಿತ. ರಾಜಕಾರಣ ಬಿಟ್ಟು ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ರಾಮನಗರದ ವಕೀಲರ ಮೇಲಿನ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ರಾಮನಗರದಲ್ಲಿ ರಾಜಕಾರಣ ನಡೆಯುತ್ತಿದೆ. ಬಿಜೆಪಿಯವರು ವಕೀಲರನ್ನು ದಾರಿ ತಪ್ಪಿಸಿದ್ದಾರೆ. ರಾಜಕಾರಣ ಮಾಡುವವರನ್ನು ನಾನು ಬೇಡ ಎನ್ನುವುದಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಲು ಎಚ್.ಡಿ. ಕುಮಾರಸ್ವಾಮಿ ಅವರು ಸದನದಲ್ಲಿ ಸಮಯ ಕೇಳಿದ್ದಾರಂತೆ. ಅದಕ್ಕೆ ಗೃಹ ಸಚಿವರು ಉತ್ತರ ನೀಡುತ್ತಾರೆ. ಕಾನೂನು ಬದ್ಧವಾಗಿ ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು. ನಮ್ಮ ಬಳಿ ಬಂದು ಕುಳಿತು ಮಾತನಾಡಿದರೆ ಚರ್ಚೆಗೆ ಸಿದ್ಧ. ರಾಜಕಾರಣವನ್ನೇ ಮಾಡುತ್ತೀವಿ ಎಂದರೆ ರಾಜಕಾರಣ ಮಾಡಿಕೊಳ್ಳಲಿ, ನಮ್ಮ ಅಭ್ಯಂತರವೇನೂ ಇಲ್ಲ ಎಂದು ಹೇಳಿದರು.

ನನಗೆ ಮಧ್ಯಪ್ರವೇಶಿಸುವ ಇಚ್ಛೆಯೂ ಇಲ್ಲ

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ನಿಂದಿಸಿದ್ದಾರೆ ಎಂಬ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, “ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ನಾನು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ನನಗೆ ಮಧ್ಯಪ್ರವೇಶಿಸುವ ಇಚ್ಛೆಯೂ ಇಲ್ಲ. ಅವರುಗಳು ಬಂದು ತಮ್ಮ ನೋವನ್ನು ಹೇಳಿಕೊಂಡರೆ, ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇನೆ. ನಮಗೆ ವಕೀಲರು, ಅಧಿಕಾರಿಗಳು, ಸಾರ್ವಜನಿಕರ ಬಗ್ಗೆ ಸಮಾನ ಗೌರವವಿದೆ” ಎಂದು ಹೇಳಿದರು.

ಮಾಹಿತಿ ಪಡೆದು ಮಾತನಾಡುವೆ

ಕೇರಳದಲ್ಲಿ ಆನೆ ತುಳಿತಕ್ಕೆ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿರುವ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಮಾಹಿತಿ ಇಲ್ಲ. ಮಾಹಿತಿ ಪಡೆದು ಮಾತನಾಡುತ್ತೇನೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಇದನ್ನೂ ಓದಿ: Karnataka Budget Session 2024: ಸದನದಲ್ಲಿ ಬೊಮ್ಮಾಯಿ-ಸಿದ್ದರಾಮಯ್ಯ ಮಧ್ಯೆ ನಮ್ಮದು-ನಿಮ್ಮದು ವಾರ್!

ಏನಿದು ರಾಮನಗರ ವಕೀಲರ ಪ್ರತಿಭಟನೆ ಪ್ರಕರಣ?

ಕಾಶಿಯ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ. ಆತನನ್ನು ಪೊಲೀಸರು ಬಂಧಿಸಿದ್ದರು. ಇದಕ್ಕೆ ಪ್ರತಿಯಾಗಿ ಚಾಂದ್ ಪಾಷಾರ ಕಡೆಯೊಬ್ಬರು ವಕೀಲರ ಸಂಘದ ಮೇಲೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದರು. ಎಫ್​​ಐಆರ್ ರದ್ದುಗೊಳಿಸಬೇಕು ಮತ್ತು ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಮನಗರ

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

Govt School : ಶಾಲೆಗೆ ಬರುವ ಬಾಲಕಿಯರು ಎರಡು ಜಡೆ ಹಾಕಿಲ್ಲ ಎಂದು ಅತಿಥಿ ಶಿಕ್ಷಕರು ಮೂವರ ತಲೆಕೂದಲನ್ನೇ (Ramanagar News) ಕತ್ತರಿಸಿದ್ದಾರೆ. ಶಿಕ್ಷಕರ ಕಾರ್ಯಕ್ಕೆ ಪೋಷಕರು ಕಿಡಿಕಾರಿದ್ದಾರೆ. ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

ramanagara news
Koo

ರಾಮನಗರ: ಸರ್ಕಾರಿ ಶಾಲೆಯಲ್ಲಿ (Ramanagar News) ಎರಡು ಜಡೆ ಹಾಕಿಲ್ಲವೆಂದು ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದಾರೆ. ಶಿಕ್ಷಕರ ನಡೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲವೆಂದು ಸಿಟ್ಟಾದ ಇಬ್ಬರು ಶಿಕ್ಷಕರು ಮೂವರು ವಿದ್ಯಾರ್ಥಿನಿಯರಿಗೆ ಕೂದಲು ಕತ್ತರಿಸಿದ್ದಾರೆ. ಹೆಣ್ಮಕ್ಕಳ ತಲೆಗೂದಲು ಕಟ್ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ ಎಂದು ಪೋಷಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಪವಿತ್ರ ಹಾಗೂ ಶಿವಕುಮಾರ್ ಎಂಬ ಶಿಕ್ಷಕರು ವಿದ್ಯಾರ್ಥಿನಿಯರ ಮೇಲೆ ದರ್ಪ ತೋರಿದ್ದಾರೆ. ವಿದ್ಯಾರ್ಥಿನಿಯರು ಪ್ರತಿನಿತ್ಯ ಒಂದು ಜಡೆ ಹಾಕಿಕೊಂಡು ಬರುತ್ತಿದ್ದರು. ಹಾಗಾಗಿ ಕೂದಲು ಕಟ್ ಮಾಡಿದ್ದವಿ ಎಂದು ಸಮಜಾಯಿಷಿಯನ್ನು ನೀಡಿದ್ದಾರೆ. ಪೋಷಕರ ಎದುರು ಘಟನೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

ಅತಿಥಿ ಶಿಕ್ಷಕರ ತಲೆದಂಡ

ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದ ಅತಿಥಿ ಶಿಕ್ಷಕರಿಗೆ ತಲೆದಂಡವಾಗಿದೆ. ಇಬ್ಬರು ಶಿಕ್ಷಕರು ಅಮಾನತು ಮಾಡುವಂತೆ ಶಿಫಾರಸು ಮಾಡಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಮರಿಗೌಡ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಘಟನೆ ಬಗ್ಗೆ ಮೇಲಾಧಿಕಾರಿಗೆ ಪತ್ರ ಬರೆದು, ಅತಿಥಿ ಶಿಕ್ಷಕರಾದ ಶಿವಕುಮಾರ್ ಹಾಗೂ ಪವಿತ್ರ ಅವರಿಗೆ ಅಮಾನತು ಆದೇಶಕ್ಕೆ ರಾಮನಗರ ಜಿಲ್ಲಾ ಡಿಡಿಪಿಐ ಬಸವರಾಜೇಗೌಡಗೆ ವರದಿ ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ಮೂಲಕ ವರದಿ ಸಲ್ಲಿಸಿದ್ದು, ಕೂಡಲೇ ಇಬ್ಬರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಮಳೆಯು ಅಬ್ಬರಿಸುತ್ತಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ರಕ್ಷಣೆ ಮಾಡಲಾಗಿದೆ. ಕಾರವಾರದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗಿತ್ತು.

VISTARANEWS.COM


on

By

karnataka rain
Koo

ಮಂಗಳೂರು: ಭಾರಿ ಮಳೆಗೆ ಜನರು ಮಾತ್ರವಲ್ಲ ಜಾನುವಾರುಗಳು ತತ್ತರಿಸಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು (Karnataka Rain) ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಕರೆತಂದಿದ್ದಾರೆ.

ಇತ್ತ ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಮಂಗಳೂರು ಹೊರವಲಯದ ಕಾಜಿಲ ನೂಯಿ ಎಂಬಲ್ಲಿ ಧನಲಕ್ಷ್ಮೀ ಅವರ ಮನೆ ಸಂಪೂರ್ಣ ಕುಸಿದಿದೆ. ಮನೆಯವರೆಲ್ಲ ಅಂಗಳದಲ್ಲಿದ್ದಾಗ ಮನೆ ಕುಸಿದಿದೆ, ಹೀಗಾಗಿ ಭಾರಿ ದುರಂತವೊಂದು ತಪ್ಪಿದೆ. ಮನೆ ಸಾಮಾಗ್ರಿ ಸೇರಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳ್ ಗ್ರಾಮದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್‌ ರಸ್ತೆಯು ಕೊಚ್ಚಿ ಹೋಗಿದೆ. ಸುಮಾರು ನೂರು ಅಡಿ ರಸ್ತೆ ಕಡಲಕೊರತಕ್ಕೆ ಬಲಿಯಾಗಿದೆ. ದೇವಭಾಗ್ ನಿಂದ ಮಾಜಾಳಿ ಸಂಪರ್ಕ ಮಾಡುವ ರಸ್ತೆಯನ್ನು ನಾಲ್ಕು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಆದರೆ ಮಳೆ ಗಾಳಿಗೆ ಹೆಚ್ಚಾದ ಕಡಲ ಕೊರೆತಕ್ಕೆ ಕೊಚ್ಚಿಹೋಗಿದೆ. ಇದರಿಂದಾಗಿ ಬಾವಳ್, ಮಾಜಾಳಿ,‌ ದೇವಭಾಗ ಗ್ರಾಮಸ್ಥರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೋರು ಗಾಳಿ, ಮಳೆಗೆ ಕೋಳಿ ಫಾರಂ ಧರಶಾಹಿ

ಶಿವಮೊಗ್ಗದ ಮೋಜಪ್ಪ ಹೊಸೂರು ಗ್ರಾಮದಲ್ಲಿ ಏಜಾಜ್ ಎಂಬುವವರಿಗೆ ಸೇರಿದ್ದ ಕೋಳಿ ಫಾರಂ ಧರಶಾಹಿ ಆಗಿದೆ. ಫಾರಂ ಮಾಲೀಕ ಸುಮಾರು 6 ಸಾವಿರ ಕೋಳಿಗಳನ್ನು ಸಾಕಿದ್ದರು. ಭಾರಿ ಮಳೆ ಗಾಳಿಗೆ ಕೋಳಿ ಫಾರಂ ನೆಲಚ್ಚಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಕೋಳಿ ಫಾರಂ ನಡೆಸುತ್ತಿದ್ದ ಏಜಾಜ್ ಕುಟುಂಬ ಕಂಗಲಾಗಿದ್ದಾರೆ. ಇತ್ತ ಮಳೆ ಅಬ್ಬರಕ್ಕೆ ಕುಣೆಗದ್ದೆಯಿಂದ ಹಲಸೆ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆ ಕುಸಿತದಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ: Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಪ್ರವಾಹದ ನೀರಿನಲ್ಲಿ ಮುಳುಗಿದ ಎಪಿಎಂಸಿ ಮಾರುಕಟ್ಟೆ

ಹಾಸನದ ಹೊಳೆನರಸೀಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತ್ತು. ಮಾರುಕಟ್ಟೆ ಪ್ರಾಂಗಣ ಸ್ವಿಮ್ಮಿಂಗ್ ಪೂಲ್‌ನಂತೆ ಭಾಸವಾಗಿತ್ತು. ಹೊಳೆನರಸೀಪುರ – ಮಡಿಕೇರಿ ರಾಜ್ಯ ಹೆದ್ದಾರಿ ಸಮೀಪ ಇರುವ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆಗೂ ಮೊದಲೇ ಹೇಮಾವತಿ ನದಿ ಪ್ರವಾಹದ ನೀರಿನಲ್ಲಿ ಮುಳುಗಿದೆ.

ರಾಯಚೂರಿನಲ್ಲಿ ನದಿ ತೀರದಲ್ಲಿ ಮೊಸಳೆಗಳ ಓಡಾಟ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ‌ ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ಇದ್ದ ಮೊಸಳೆಗಳು ನದಿ ತೀರಕ್ಕೆ ಬಂದಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಗ್ರಾಮದ ಬಳಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿತ್ತು. ತುಂಗಭದ್ರಾ ನದಿ ತೀರದ ಗ್ರಾಮಗಳಿಗೆ ಮೊಸಳೆ ನುಗ್ಗುವ ಆತಂಕ ಎದುರಾಗಿದ್ದು, ನದಿ ದಂಡೆಗೆ ತೆರಳದಂತೆ ,ಜಾನುವಾರುಗಳನ್ನು ಬಿಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮೊಸಳೆಯೊಂದು ಹಸುವಿ‌ನ ಕರು ಮೇಲೆ ದಾಳಿ ಮಾಡಿತ್ತು.

ಗ್ರಾಮಗಳನ್ನು ತೊರೆಯುತ್ತಿರುವ ಜನರು

ಕೃಷ್ಣಾ ನದಿಗೆ ಕೊಯ್ನಾ ಜಲಾಶಯದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾ‌ಹ ಆತಂಕ ತೀವ್ರಗೊಂಡಿದೆ. ಪ್ರವಾಹದ ಭೀತಿಯಿಂದ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಐನಾಪೂರ ರಸ್ತೆ ಮೇಲೆ ನೀರು ಬರುತ್ತಿರುವುದರಿಂದ ಜಾನುವಾರುಗಳೊಂದಿಗೆ ಜನರು ಸ್ಥಳಾಂತರಗೊಂಡಿದ್ದಾರೆ.

ರಸ್ತೆಗೆ ಬಿದ್ದ ಮರ

ಕೊಡಗಿನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಸೋಮವಾರಪೇಟೆ ಸಮೀಪದ ಯಡವನಾಡು ಸಂಪರ್ಕ ರಸ್ತೆಯು ಬಂದ್‌ ಆಗಿತ್ತು. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳೀಯರಿಂದಲೆ ರಸ್ತೆ ಅಡ್ಡಲಾಗಿ ಬಿದ್ದ ಮರ ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PARIS 2024 OLYMPICS
ಕ್ರೀಡೆ10 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ16 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್21 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್40 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ1 hour ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ1 hour ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ2 hours ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌