Site icon Vistara News

ಚನ್ನಪಟ್ಟಣದಲ್ಲಿ ಅನ್ಯ ಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ, ಚಾಕು ಇರಿತ; ಯುವಕ ಗಂಭೀರ

murder ಸುರಪುರ ಕೆಂಬಾವಿ ಜೋಡಿ ಕೊಲೆ

ರಾಮನಗರ: ಜಿಲ್ಲೆಯ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕು ಇರಿಯಲಾಗಿದೆ.

ವಡಿವೇಲು (38) ಎಂಬುವರಿಗೆ ತೀವ್ರ ಗಾಯಗಳಾಗಿವೆ. ಅನ್ಯ ಕೋಮಿನ ಮೂವರು ಯುವಕರು ಗಾಂಜಾ ಮತ್ತಿನಲ್ಲಿ ಚಾಕುವಿನಿಂದ ಇರಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂಬ ವಿಷಯ ತಿಳಿದುಬಂದಿಲ್ಲ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯಾವ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿಯು ಪೊಲೀಸರ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಚನ್ನಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ.

ಇದನ್ನೂ ಓದಿ | Suspicious husband | ಶೀಲ ಶಂಕಿಸಿ ಪತ್ನಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ದುಷ್ಟ ಗಂಡ

Exit mobile version