Site icon Vistara News

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Drowned in water

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version