Elephants Death: ಉರಿ ಬಿಸಿಲು ತಾಳಲಾರದೆ, ನೀರು ಸಿಗದೆ ನಿತ್ರಾಣಗೊಂಡಿದ್ದ ಕಾಡಾನೆಗಳ ಸಾವು - Vistara News

ರಾಮನಗರ

Elephants Death: ಉರಿ ಬಿಸಿಲು ತಾಳಲಾರದೆ, ನೀರು ಸಿಗದೆ ನಿತ್ರಾಣಗೊಂಡಿದ್ದ ಕಾಡಾನೆಗಳ ಸಾವು

Elephants Death: ಈ ಬಾರಿಯ ಬೇಸಿಗೆ ಬಿಸಿಲು (Summer Hit) ಜನರನ್ನು ಮಾತ್ರವಲ್ಲ ಮೂಕ ಜೀವಿಗಳನ್ನು ತತ್ತರಿಸುವಂತೆ ಮಾಡಿದೆ. ಕಾಡಿನಲ್ಲೂ ಕೆರೆ-ಕುಂಟೆಗಳಲ್ಲಿ ನೀರು ಬತ್ತಿ ಹೋಗಿದ್ದು, ಹನಿ ನೀರು ಸಿಗದೇ ಪ್ರಾಣಿಗಳು ಮೃತಪಡುತ್ತಿವೆ. ಸದ್ಯ ರಾಮನಗರದಲ್ಲಿ ಎರಡು ಕಾಡಾನೆಗಳು ನಿತ್ರಾಣಗೊಂಡು ಮೃತಪಟ್ಟಿವೆ. ಬಿಸಿಲ ಬೇಗೆ ತಾಳಲಾರದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

elephants Death in Ramanagara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ ಕಾಡಾನೆಗಳು (Elephants Death) ಮೃತಪಟ್ಟಿವೆ. 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಉಸಿರು ನಿಲ್ಲಿಸಿದೆ. ಬಿಸಿಲಿನ ಬೇಗೆ ತಾಳಲಾರದೆ ಕಾಡಾನೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರದ ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್‌ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ ಇದೀಗ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ.

ಸ್ಥಳಕ್ಕೆ ಡಿಎಫ್‌ಓ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.

elephants Death in Ramanagara

ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರುವ ಶಂಕೆ ಇದೆ. 14 ವರ್ಷದ ಕಾಡಾನೆ ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿತ್ತು. ಇದೀಗ ನಿತ್ರಾಣಗೊಂಡಿದ್ದ ಕಾಡಾನೆ ಸೇರಿ ಮತ್ತೊಂದು 35 ವರ್ಷದ ಕಾಡಾನೆಯೂ ಮೃತಪಟ್ಟಿದೆ. ಕನಕಪುರ -ತಮಿಳುನಾಡು ಗಡಿಭಾಗ ಯಲವನತ್ತ ಕಾಡಂಚಿನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Murder Case : ಸೀರೆಯಿಂದ ಕುತ್ತಿಗೆ ಬಿಗಿದು ಹೆಂಡತಿಯನ್ನು ಕೊಂದು ಎಸ್ಕೇಪ್‌

ಕಲಬುರಗಿಯಲ್ಲಿ ಕುಡಿಯಲು ನೀರು‌ ಸಿಗದೆ ಒದ್ದಾಡಿದ ಆಕಳು ಸಾವು

ನೀರಿಗೆ ಎಲ್ಲೆಡೆ ಹಾಹಾಕಾರ ಶುರುವಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗದೇ ಕಂಗಲಾಗಿದ್ದಾರೆ. ಕಲವುರಗಿಯ ಅಫಜಲಪುರ ತಾಲೂಕಿನ ಗುಡ್ಡೆವಾಡಿ ಗ್ರಾಮದಲ್ಲಿ ಕುಡಿಯಲು ನೀರು ಸಿಗದೆ ಆಕಳೊಂದು ಒದ್ದಾಡಿ ಪ್ರಾಣ ಬಿಟ್ಟಿದೆ. ಗ್ರಾಮದ ಬಂಡೆಪ್ಪಾ ಪೂಜಾರಿ ಎಂಬುವವರಿಗೆ ಸೇರಿದ ಆಕಳು, ನೀರು ಇಲ್ಲದೆ ಉಸುಕಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದೆ.

ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಗಾಣಗಾಪುರ ಬ್ಯಾರೆಜ್‌ಗೆ ನೀರು ಬಿಡುವಂತೆ ಒತ್ತಾಯಿಸಿ‌ ಪ್ರತಿಭಟನೆಯೂ ನಡೆದಿದೆ. ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದ ಬಳಿ ರಸ್ತೆ ತಡೆದು ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಳೆ ಅಭಾವ ಹಿನ್ನೆಲೆಯಲ್ಲಿ ಭೀಮಾ ನದಿ‌ ಬತ್ತಿ‌ಹೋಗಿದೆ. ಕುಡಿಯಲು ‌ನೀರಿಲ್ಲದೆ ಜನ ಜಾನುವಾರು ಪರಿತಪಿಸುತ್ತಿವೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ತುಮಕೂರಿನಲ್ಲಿ ಮೀನುಗಳು ಮಾರಣಹೋಮ

ಬಿಸಿಲಿನ ತಾಪಕ್ಕೆ ಕೆರೆಯಲ್ಲಿದ್ದ ರಾಶಿ ರಾಶಿ ಮೀನುಗಳು ದಾರುಣವಾಗಿ ಮೃತಪಟ್ಟಿವೆ. ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳು ಸಾವನ್ನಪ್ಪುತ್ತಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನ್ನಮೇಡಿ ಕೆರೆಯಲ್ಲಿ ಘಟನೆ ನಡೆದಿದೆ. ಸುಮಾರು 108 ಎಕರೆ ಪ್ರದೇಶದಲ್ಲಿರುವ ಕನ್ನಮೇಡಿ ಕೆರೆಯು ಮಳೆಯಿಲ್ಲದೇ ಸಂಪೂರ್ಣವಾಗಿ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ನೀರಿಲ್ಲದೇ ಕೆರೆಯಲ್ಲಿದ್ದ ಮೀನುಗಳು ವಿಲವಿಲನೇ ಒದ್ದಾಡಿ ಮೃತಪಟ್ಟಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಮನಗರ

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Kusina Mane : ಗ್ರಾಮೀಣ ಮಹಿಳೆಯರ ಪಾಲಿಗೆ ಕೂಸಿನ ಮನೆಯು ವರದಾನವಾಗಿದೆ. ಅದರಲ್ಲೂ ನರೇಗಾ ಮಹಿಳಾ ಕೂಲಿಕರಾರು ತಮ್ಮ ಮಕ್ಕಳನ್ನು ಕೂಸಿನ ಮನಯಲ್ಲಿ ಬಿಟ್ಟು, ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

VISTARANEWS.COM


on

By

kusina mane
Koo

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಮಕ್ಕಳಿಗೆ ಅನೂಕೂಲ ಕಲ್ಪಿಸುವ ಉದ್ದೇಶದೊಂದಿಗೆ ಪ್ರಾರಂಭಿಸಲಾಗಿರುವ ಕೂಸಿನ ಮನೆಗಳು (Kusina Mane) ಇದೀಗ ಮಕ್ಕಳ ಹಾಗೂ ಪೋಷಕರ ಪಾಲಿಗೆ ಆಶಾಕಿರಣವಾಗಿವೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ರಾಮನಗರ ತಾಲೂಕಿನಲ್ಲಿ ಆರಂಭಿಸಿರುವ 20 ಕೂಸಿನ ಮನೆಗಳು ಗ್ರಾಮೀಣ ಮಕ್ಕಳಿಗೆ ಅನುಕೂಲ ವಾಗುತ್ತಿದೆ. ಕೂಸಿನ ಮನೆಗಳು ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 4ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಕೂಸಿನ ಮನೆಯಲ್ಲಿ 6 ತಿಂಗಳಿಂದ 3 ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುತ್ತದೆ. ಇದರಿಂದಾಗಿ ನರೇಗಾ ಮಹಿಳಾ ಕೂಲಿಕರಾರು ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

kusina Mane

ಆರಂಭದಲ್ಲಿ ಕೂಸಿನ ಮನೆಗೆ ಮಕ್ಕಳು ನಿರೀಕ್ಷಿತ ಪ್ರಮಾಣದಲ್ಲಿ ಬಂದಿರಲಿಲ್ಲ. ನಂತರ ಪಂಚಾಯಿತಿ ಹಾಗೂ ಶಿಶು ಆರೈಕೆದಾರರ ಜಾಗೃತಿ, ಐಇಸಿ (IEC) ಚಟುವಟಿಕೆ, ಜಾಗೃತಿ ಕಾರ್ಯಕ್ರಮದ ಮೂಲಕ ಮನವರಿಕೆ ಮಾಡಿದ್ದಾರೆ. ಇದರ ಫಲವಾಗಿ ಮಹಿಳಾ ಕಾರ್ಮಿಕರು ಕೂಸಿನ ಮನೆಯಲ್ಲಿ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋಗಲಾರಂಭಿಸಿದ್ದಾರೆ.

ಇದೀಗ ಮಕ್ಕಳ ದಾಖಲಾತಿ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುತ್ತಿದ್ದು, ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ. ಇದರಿಂದ ಮಹಿಳಾ ಕೂಲಿಕಾರರು ತಮ್ಮ ಜೀವನವನ್ನು ಇನ್ನಷ್ಟು ಸುಧಾರಿಸಿಕೊಳ್ಳಲು ಕೂಸಿನ ಮನೆ ಕಾರಣವಾಗಿದೆ ಎಂದು ರಾಮನಗರ ತಾಲೂಕಿನ ಐಇಸಿ ಸಂಯೋಜಕರು ಸುಚಿತ್ರ ತಿಳಿಸಿದ್ದಾರೆ.

kusina mane

ಈಗಾಗಲೇ ರಾಮನಗರದ 20 ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ (ಶಿಶುಪಾಲನ ಕೇಂದ್ರ) ಆರಂಭವಾಗಿದ್ದು, ಬನ್ನಿಕುಪ್ಪೆ, ಕೆ, ಸುಗ್ಗನಹಳ್ಳಿ, ಬನ್ನಿಕುಪ್ಪೆ.ಬಿ, ಕೈಲoಚ ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಅದ್ಧರಿ ಸ್ವಾಗತ ಕೋರಿದರು.

VISTARANEWS.COM


on

HD Kumaraswamy
Koo

ರಾಮನಗರ: ನನಗೆ ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ನಿರುದ್ಯೋಗ ನಿವಾರಣೆಗೆ ಇಡೀ ದೇಶದಲ್ಲಿ ಕೆಲಸ ಮಾಡಬೇಕಿದೆ. ಹೊರರಾಜ್ಯಗಳಲ್ಲಿ ಕೆಲಸ ಮಾಡೋದಕ್ಕೂ ಯುವಕರು ಮಾನಸಿಕವಾಗಿ ಸಿದ್ಧರಾಗಬೇಕು. ಚನ್ನಪಟ್ಟಣ ಜನರನ್ನು ಭಯಪಡಿಸಲು ಆಗಲ್ಲ. ಮಂಡ್ಯ ಸೀಮೆಯ ಗಾಳಿ ಈ ಭಾಗದಲ್ಲಿ ಇದೆ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಹಿಂದೆ ಯೋಗೇಶ್ವರ್ ಸಚಿವರಾಗಿ ದೇವೇಗೌಡರು ಕಟ್ಟಿದ ಇಗ್ಗಲೂರಿನಿಂದ ನೀರು ತಂದರು. ನಾವು ಜಾಹೀರಾತಿನಿಂದ ಪ್ರಚಾರ ತೆಗೆದುಕೊಳ್ಳಲಿಲ್ಲ. ಜನರ ಕಷ್ಟ ಅರ್ಥ ಮಾಡಿಕೊಂಡು ಬಂದಿದ್ದೇನೆ. ಈ ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ನಾನು ಕೃಷಿ ಸಚಿವ ಆಗದೇ ಇರಬಹುದು. ದೇವೇಗೌಡರಿಗೆ ಪ್ರಧಾನಿ ಕೂಡ ಗೌರವ ಕೊಡುತ್ತಾರೆ. ಅದರಂತೆ ನನಗೂ ಸ್ವಲ್ಪ ಗೌರವ ಇದೆ. ಸ್ಮಾರ್ಟ್ ಸಿಟಿ ಯೋಜನೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಚನ್ನಪಟ್ಟಣ ನಗರಸಭೆ ಜನ ಹೆಚ್ಚು ಮತ ಕೊಟ್ಟರೂ ಅಭಿವೃದ್ಧಿ ಕುಂಠಿತವಾಯಿತು. ನಮ್ಮ ಎದುರಾಳಿಗಳು ನಮ್ಮನ್ನು ಸೋಲಿಸುವುದಕ್ಕೆ ಆಗಲ್ಲ ಎಂದಿದ್ದರು. ಬಹಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಕೂಲಿ ಕೊಡುತ್ತಾರೆ ಎಂತಿದ್ದರು. ಅದೇನೋ ಮಾತು ಎತ್ತಿದರೆ ಸಾಕ್ಷಿ ಗುಡ್ಡೆ ಎನ್ನುತ್ತಾರೆ. ಸಾಕ್ಷಿ ಗುಡ್ಡೆ ನೋಡಬೇಕು ಎಂದರೆ ಕನಕಪುರ ಮಾತ್ರ ಸಾಧ್ಯ. ಉಳಿದಂತೆ ಜಿಲ್ಲೆಯ ಯಾವ ಕ್ಷೇತ್ರವು ಅಭಿವೃದ್ಧಿ ಆಗಿಲ್ಲ. ಇದೀಗ ಚನ್ನಪಟ್ಟಣ ಕ್ಷೇತ್ರದ ಮೇಲೆ ವಕ್ರ ದೃಷ್ಟಿ ಬಿದ್ದಿದೆ ಎಂದು ಡಿಕೆ ಸಹೋದರರನ್ನು ಟೀಕಿಸಿದರು.

3 ಕೋಟಿ ಮನೆಗಳನ್ನು ಕಟ್ಟುವ ನಿರ್ಧಾರವನ್ನು ಪ್ರಧಾನಮಂತ್ರಿ ಮಾಡಿದ್ದಾರೆ. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಾದರೂ ರಾಜಕೀಯ ಶಕ್ತಿ ಕೊಟ್ಟಿದ್ದು ಈ ಜಿಲ್ಲೆಯ ಜನ. ಮಂಡ್ಯ ಜಿಲ್ಲೆಯ ಜನ ಅತ್ಯಂತ ಮುಗ್ಧರು. 50 ವರ್ಷಗಳ ಹಿಂದೆ ಹೇಗಿತ್ತೋ, ಅದೇ ರೀತಿಯಲ್ಲಿ ಆ ಜಿಲ್ಲೆ ಇನ್ನೂ ಉಳಿದಿದೆ. ಕುಮಾರಣ್ಣ ಬಂದ್ರೆ ಏನೋ ಒಳ್ಳೆ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದಾರೆ, ಹೀಗಾಗಿ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲರ ಒಪ್ಪಿಗೆ ಪಡೆದು ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾದೆ. ಈ ಬಗ್ಗೆ ಹಲವಾರು ನಾಯಕರಿಗೆ ಅಸಮಾಧಾನವಾಗಿದೆ. ನಾನು ರಾಮನಗರದಲ್ಲಿ ಶಾಸಕನಾಗಿದ್ದಾಗ ಚನ್ನಪಟ್ಟಣಕ್ಕೆ ಬರಬೇಕು ಎಂದಿದ್ದರು. ಅಭಿಮಾನಿಗಳು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದ ಶಾಸಕನಾದೆ. ಈ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲಬೇಕು ಅಂದುಕೊಂಡಿರಲಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇರಬೇಕೋ ಬೇಡವೋ ಅನ್ನೋ ಪರಿಸ್ಥಿತಿಯಾಗಿತ್ತು. ಮಂಡ್ಯದಲ್ಲಿಯೂ ನಾನು ಹೋಗದೇ ಇದ್ದರೂ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ ಅಂದುಕೊಂಡಿದ್ದಿರಿ. ಈಗ ನಾನು ಲೋಕಸಭೆಯಲ್ಲಿ ನಿಲ್ಲಬೇಕಾಯ್ತು‌. ಕೇಂದ್ರದಲ್ಲಿ ಕೃಷಿ ಸಚಿವನಾದರೆ ರೈತರಿಗೆ ಅನುಕೂಲವಾಗುತ್ತೆ ಅಂದುಕೊಂಡಿದ್ದಿರಿ. ಎಲ್ಲೇ ಹೋದರೂ ಕೃಷಿ ಸಚಿವ ಅಂತ ಘೋಷಣೆ ಮಾಡುತ್ತಿದ್ದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡಲಾಗುತ್ತದೆ. ದೇವೇಗೌಡರ ಮಾರ್ಗದರ್ಶನದಲ್ಲಿ ಹಳ್ಳಿಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಹಿಂದೆ ಎರಡು ಬಾರಿ ಸಿಎಂ ಆದಾಗ ಈ ರಾಜ್ಯದ ಜನ ಗುರುತಿಸಿದ್ದಾರೆ. ಇಲ್ಲಿ ಸಭೆ ಮಾಡಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂದುಕೊಂಡೆ. ಹಲವು ನಾಯಕರು ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದೀರಿ, ಉದ್ಘಾಟನೆ ನಾನೇ ಮಾಡುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಈ ಕಾರ್ಯಕ್ರಮ ಬಳಿಕ ಸಂಜೆ ರಾಜೀನಾಮೆ ಅಂಗೀಕಾರ ಮಾಡುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Continue Reading
Advertisement
World War 3
ಪ್ರಮುಖ ಸುದ್ದಿ5 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ7 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ7 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ7 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ8 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ8 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ8 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ9 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ9 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ9 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ9 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ10 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ16 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌