ಹಾರೋಹಳ್ಳಿ (ರಾಮನಗರ): ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್‌ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು.
ಹಾರೋಹಳ್ಳಿ ಸಮೀಪದ ಹನುಮಂತನಗರದಲ್ಲಿರುವ ಮರಿಲಿಂಗೇಗೌಡರ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ. ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ, ಪಕ್ಷದ ಕೇಸರಿ ಶಾಲು ಹೊದಿಸುವ ಮೂಲಕ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿ ಅನೇಕರು ಸಂದರ್ಭದಲ್ಲಿ ಬಿಜೆಪಿ ಸೇರಿದರು.
ಇದನ್ನೂ ಓದಿ ನಕಲಿ ಡೀಲ್ ರಾಜ V/S ಮಿಸ್ಟರ್ ಬ್ಲ್ಯಾಕ್‌ಮೇಲರ್: ಎಚ್‌ಡಿಕೆ, ಅಶ್ವತ್ಥನಾರಾಯಣ ಸಮರ
ಮರಿಲಿಂಗೇಗೌಡರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅಶ್ವತ್ಥನಾರಾಯಣ, ‘ಬಿಜೆಪಿ ಮಾತ್ರ ಎಲ್ಲರಿಗೂ ಮುಕ್ತ ಅವಕಾಶ ನೀಡುವ ಪಕ್ಷವಾಗಿದ್ದು, ಸಮಾಜದ ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡುವ ಸಂಸ್ಕೃತಿಯನ್ನು ಹೊಂದಿದೆ. ಮರಿಲಿಂಗೇಗೌಡರ ಸೇರ್ಪಡೆಯಿಂದ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ಬಂದಿದೆ’ ಎಂದರು.
ಕಾಂಗ್ರೆಸನ್ನು ದೇಶದ ಜನ ತಿರಸ್ಕರಿಸಿದ್ದಾರೆ. ಜೆಡಿಎಸ್ ಕೇವಲ ಒಂದು ಕುಟುಂಬಕ್ಕೆ ಜೋತು ಬಿದ್ದಿರುವ ಊಳಿಗಮಾನ್ಯ ಪಕ್ಷವಾಗಿದೆ. ಬಿಜೆಪಿ ಮಾತ್ರ ದೇಶದ ಜನರಲ್ಲಿ ಭರವಸೆ ಹುಟ್ಟಿಸಿದ್ದು, ಅಭಿವೃದ್ಧಿ ಕೇಂದ್ರಿತ ರಾಜಕಾರಣದಲ್ಲಿ ನಂಬಿಕೆ ಹೊಂದಿದೆ ಎಂದು ನುಡಿದರು.
ಮರಿಲಿಂಗೇಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಜನಪರ ಮತ್ತು ಬದ್ಧತೆಯ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ. ದೇಶವನ್ನು ಬಲಿಷ್ಠವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ’ ಎಂದರು.
ಇದನ್ನೂ ಓದಿ | ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿ ಸೇರ್ಪಡೆ