DK Shivakumar : ಕೆಂಪೇಗೌಡರ ಸಮಾಧಿ ಸ್ಥಳ ಅಧಿವೃದ್ಧಿ, ಜನರಿಗೆ ಪರ್ಯಾಯ ವ್ಯವಸ್ಥೆ; ಡಿಕೆಶಿ - Vistara News

ಕರ್ನಾಟಕ

DK Shivakumar : ಕೆಂಪೇಗೌಡರ ಸಮಾಧಿ ಸ್ಥಳ ಅಧಿವೃದ್ಧಿ, ಜನರಿಗೆ ಪರ್ಯಾಯ ವ್ಯವಸ್ಥೆ; ಡಿಕೆಶಿ

DK Shivakumar: ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಸ್ವಲ್ಪ ಜಾಗ ಬೇಕಾಗುತ್ತದೆ. ಇಲ್ಲಿರುವ ಜನರಿಗೆ ಬೇರೆ ವ್ಯವಸ್ಥೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

VISTARANEWS.COM


on

Kempegowda samadhi place
ಅಭಿವೃದ್ಧಿ ಮಾಡಲು ಉದ್ದೇಶಿಸಿರುವ ಮಾಗಡಿ ಕೋಟೆ ಜಾಗವನ್ನು ಡಿಸಿಎಂ ಡಿ ಕೆ ಶಿವಕುಮಾರ್, ಸಂಸದ ಡಿ ಕೆ ಸುರೇಶ್, ಶಾಸಕ ಎಚ್ ಸಿ ಬಾಲಕೃಷ್ಣ, ಎಂಎಲ್ಸಿ ರವಿ ಶುಕ್ರವಾರ ಸಂಜೆ ಪರಿಶೀಲನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಗಡಿ: ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳ (Kempegowda samadhi place) ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಈ ಗ್ರಾಮದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ನಂತರ ಮಾತನಾಡಿದ ಶಿವಕುಮಾರ್ ಈ ವಿಚಾರ ತಿಳಿಸಿದರು.

“ನಾವು ಈ ಹಿಂದೆ ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ ಮಾಡಿದ್ದೆವು. ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು, ಈ ಊರಿನ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಮಾತು ನೀಡಿದ್ದೆವು. ಸ್ಥಳಾಂತರಕ್ಕೆ ಜಮೀನಿನ ವ್ಯವಸ್ಥೆ ಆಗಿದ್ದು, ಇದಕ್ಕೆ ಎಲ್ಲರ ಸಹಕಾರ ಸಿಕ್ಕಿದೆ ಎಂದು ಕೇಳಿ ಸಂತೋಷವಾಗಿದೆ. ಪ್ರತಿಯೊಬ್ಬರಿಗೂ ದಾಖಲೆಗಳ ಸಮೇತ ನಿವೇಶನ ನೀಡಬೇಕು, ಅವರ ಬದುಕಿಗೆ ಅನುಕೂಲ ಆಗುವ ವ್ಯವಸ್ಥೆ ಕಲ್ಪಿಸಲು ಶಾಸಕ ಬಾಲಕೃಷ್ಣ ಅವರಿಗೆ ತಿಳಿಸಿದ್ದೇನೆʼʼ ಎಂದು ಡಿ.ಕೆ. ಶಿವಕುಮಾರ್‌ ಹೇಲೀದರು.

Kempegowda samadhi sthala development
ಕೆಂಪೇಗೌಡ ಸಮಾಧಿ ಸ್ಥಳ ಅಭಿವೃದ್ಧಿಯ ನೀಲನಕ್ಷೆ ವೀಕ್ಷಣೆ

ʻʻಈ ಭಾಗದ ಅಭಿವೃದ್ಧಿಗೆ ಅಕ್ಕಪಕ್ಕದ 7-8 ಎಕರೆ ಜಮೀನು ಬೇಕಿದ್ದು, ಇದಕ್ಕೆ ಬದಲಿ ಜಮೀನು ನೀಡಲಾಗುವುದು. ಇದನ್ನು ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾಗಿ ಮಾಡಬೇಕು. ಇದು ದೇಶದ ಆಸ್ತಿ. ಇದಕ್ಕಾಗಿ ನೀವು ಸಹಕಾರ ನೀಡಬೇಕುʼʼ ಎಂದು ಅವರು ಮನವಿ ಮಾಡಿದರು.

ʻʻಕೆಂಪೇಗೌಡರ ಜನ್ಮಸ್ಥಳ ಹಾಗೂ ಐಕ್ಯಸ್ಥಳ, ಶ್ರೀ ಶಿವಕುಮಾರಸ್ವಾಮಿಗಳ ಜನ್ಮಸ್ಥಳ, ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಜನ್ಮಸ್ಥಳ ಮಾಗಡಿ ಕ್ಷೇತ್ರದಲ್ಲಿರುವುದು ವಿಶೇಷ. ಈ ಕ್ಷೇತ್ರಗಳ ಅಭಿವೃದ್ಧಿಗೆ ನಿಮ್ಮ ಸಹಕಾರ ಇರಲಿ” ಎಂದು ಡಿ.ಕೆ. ಶಿವಕುಮಾರ್‌ ವಿನಂತಿಸಿದರು.

ಅಭಿಪ್ರಾಯ ಹೇಳುವುದು ಭಿನ್ನಾಭಿಪ್ರಾಯ ಆಗುವುದಿಲ್ಲ ಎಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಅವರು ಕುದೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಲಿಂಗಾಯತರ ಅಸಮಾಧಾನದ ಬಗ್ಗೆ ಸಭೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಅಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲಾ ಪಕ್ಷಗಳು ಅವರದೇ ಆದ ರಾಜಕಾರಣ ಮಾಡಲು ಹೊರಟಿವೆ. ರಾಜ್ಯದ ಎಲ್ಲಾ ಜಾತಿ, ಸಮುದಾಯದವರು ನಮಗೆ ಮತ ಹಾಕಿ ಜನರ ಸೇವೆ ಮಾಡಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾವು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Cauvery Dispute : ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಸರ್ವ ಸಿದ್ಧತೆ; ಡಿ.ಕೆ. ಶಿವಕುಮಾರ್‌

ಪಂಚಾಯ್ತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಸಿಎಂ ಸ್ಪಷ್ಟನೆ ಕುರಿತು ಕೇಳಿದಾಗ, “ಇದು ಆರ್ಥಿಕ ಇಲಾಖೆ ನಿರ್ಧಾರ. ಕಳೆದ 30 ವರ್ಷಗಳಿಂದ ಯಾವುದೇ ಹೊಸ ಅಂಗಡಿಗಳಿಗೆ ಅನುಮತಿ ನೀಡಿಲ್ಲ. ಅನೇಕರು ಪರವಾನಗೆಯನ್ನು 4-5 ಕೋಟಿಗೆ ಮಾರುತ್ತಿದ್ದಾರೆ. ಹೆಚ್ಚಿನ ಜನರಿಗೆ ಉದ್ಯೋಗ ಸೃಷ್ಟಿ ಮಾಡಬೇಕು. ಎಲ್ಲಿ ಮದ್ಯದ ಅಂಗಡಿ ತೆರೆಯಬೇಕು ಎಂದು ಚರ್ಚೆ ಮಾಡುತ್ತೇವೆ. ಹಾಗೆಂದು ಹಳ್ಳಿ, ಹಳ್ಳಿಗಳಲ್ಲಿ ಮಾಡುವುದಿಲ್ಲ. ಕುಡಿತ ತಪ್ಪಿಸಲು ಆಗುವುದಿಲ್ಲ. ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

CM Siddaramaiah: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಕನ್ನಡ ವಾತಾವರಣ ಬೆಳೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ (CM Siddaramaiah) ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ (Karnataka) ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru News) ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಇಂದು ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.

ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು

ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೇ ಬದುಕುವ ವಾತಾವರಣ ಕರ್ನಾಟಕದಲ್ಲಿದೆ ಎಂದು ವಿಷಾದಿಸಿದರು.

ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗ್ಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು.

ನವೆಂಬರ್ ಒಂದರೊಳಗೆ ಕಾಮಗಾರಿ ಪೂರ್ಣಗೊಳಿಸಿ

ನವೆಂಬರ್ 01, 2024ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

2023, ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲಿ ಇಡೀ ವರ್ಷ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯವನ್ನು ಇಟ್ಟು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾಮಕರಣವಾದ ನಂತರ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು.

ತಾಯಿ ಭುವನೇಶ್ವರಿಯ ಪೂಜೆಯನ್ನು ಬಹಳ ವರ್ಷಗಳಿಂದ ರಾಜಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ ಎಂದರು.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ತುಮಕೂರು

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Koratagere News: ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಬುಧವಾರ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೊರಟಗೆರೆ ತಾಲೂಕು ಆಡಳಿತದ ಸಹಯೋಗದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಿತು.

VISTARANEWS.COM


on

Tumkur DC Shubha Kalyan inaugurated the Janaspandana programme in Koratagere
Koo

ಕೊರಟಗೆರೆ: ಜನಸಾಮಾನ್ಯರು ಸ್ಥಳೀಯ ಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಪರಿಹಾರಕ್ಕೆ ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹಾಗೂ ಶೀಘ್ರ ಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪ್ರತಿ ತಿಂಗಳು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ (Koratagere News) ಮಾಡಿದರು.

ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಜನರಿದ್ದೆಡೆಯೇ ಸೇವೆ ಒದಗಿಸುವ ಸರ್ಕಾರದ ಮಹಾದಾಸೆಯಂತೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆ, ರಾಜ್ಯ ಮಟ್ಟದ ಸಮಸ್ಯೆಗಳಿದ್ದರೆ ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾಡಳಿತವು ಪ್ರತಿ ಹಳ್ಳಿ-ಹಳ್ಳಿಗೆ ಹೋಗಿ ಜನರ ಕಷ್ಟ-ಸುಖಗಳನ್ನು ಆಲಿಸಿ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಸರ್ಕಾರದ ನಿರ್ದೇಶನದನ್ವಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಜನಸಾಮಾನ್ಯರು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸುಮಾರು 2.5 ಲಕ್ಷ ಹೇಕ್ಟೆರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಉತ್ತಮ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಗುರಿ ಮೀರಿ ಬಿತ್ತನೆ ಮಾಡಬೇಕು. ಬಿತ್ತನೆಗನುಗುಣವಾಗಿ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು ಮಾಡಲಾಗಿದ್ದು, ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಪ್ರಯೋಜನ ಪಡೆಯಬೇಕು ಎಂದರು.

ಜಿಲ್ಲೆಯಲ್ಲಿ 107 ಕೋಟಿ ರೂ. ಬರ ಪರಿಹಾರ ರೈತರ ಖಾತೆಗೆ ಜಮೆ ಮಾಡಲಾಗಿದೆ. ಆದರೆ ತಾಂತ್ರಿಕ ಕಾರಣಗಳಿಂದ ಇನ್ನೂ 30.000 ರೈತರಿಗೆ ಜಮೆ ಮಾಡಬೇಕಾಗಿದೆ. ಸಂಬಂಧಪಟ್ಟ ರೈತರನ್ನು ಸಂಪರ್ಕಿಸಿ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.

ಇತ್ತೀಚಿಗಷ್ಟೇ ಪಾವಗಡ, ಗುಬ್ಬಿ ತಾಲೂಕಿನಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಅಹವಾಲುಗಳು ಸ್ವೀಕೃತವಾಗಿವೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳುವ ಬಗ್ಗೆ ರೈತರಿಗೆ 2 ರಿಂದ 3 ಸುತ್ತಿನ ತರಬೇತಿ ನೀಡಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಣಿ ಮಾಡಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವೆನೆಯಿಂದ ಘಟಿಸಿದ ವಾಂತಿ-ಭೇದಿ ಪ್ರಕರಣ ನಮಗೆ ಎಚ್ಚರಿಕೆ ಪಾಠವಾಗಿದೆ. ಕುಡಿಯುವ ನೀರಿನ ಬಗ್ಗೆ ಸಂಶಯ ಬಂದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಯೋಗ್ಯವಲ್ಲದ ನೀರನ್ನು ಜನರಿಗೆ ಕುಡಿಯಲು ಪೂರೈಕೆ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎತ್ತಿನ ಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯನ್ನು ಕಳೆದುಕೊಂಡ ರೈತರು ತಮಗಿನ್ನೂ ಪರಿಹಾರ ಕೈ ಸೇರಿಲ್ಲವೆಂದು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಾಗ ಭೂ ಸ್ವಾಧೀನ ಅಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ತಾಲೂಕಿನ ಬೆಂಡೋಣೆ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಗೆ ಓಡಾಡಲು ದಾರಿ ಬೇಕು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಸುಕುಮಾರ್ ಅವರ ಪಹಣಿ ತಿದ್ದುಪಡಿ ಸೇರಿದಂತೆ ಮತ್ತಿತರ ಪ್ರಮುಖ ಸಮಸ್ಯೆಗಳ ಮನವಿ ಅರ್ಜಿಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಪರಿಹರಿಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶಗಳನ್ನು ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಡಿ ಅಂತರ್ಜಾತಿ ವಿವಾಹವಾದ ನರಸಿಂಹಮೂರ್ತಿ ಹಾಗೂ ಪೂಜ್ಯ ದಂಪತಿಗಳಿಗೆ 1.25 ಲಕ್ಷ ರೂಗಳ ಎನ್‌ಎಸ್‌ಸಿ ಬಾಂಡ್ ವಿತರಿಸಲಾಯಿತು. ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ, ಕಂದಾಯ ಇಲಾಖೆಯಿಂದ ವೃದ್ದಾಪ್ಯ ವೇತನ , ವಿಧವಾ ವೇತನ , ಪವತಿ ಖಾತೆ , ಪಹಣಿ, ವಸತಿ ಸೌಲಭ್ಯಗಳ ಕಾರ್ಯಾದೇಶಗಳನ್ನು ಹಾಗೂ ಕಾಡು ಪ್ರಾಣಿಗಳಿಂದ ದಾಳಿಗೊಳಗಾದವರಿಗೆ ಪರಿಹಾರ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಜನಸಾಮಾನ್ಯರು ಸುರಕ್ಷಿತವಾಗಿ ಶಾಂತಿ ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆಯಿಂದ ಜನಸ್ನೇಹಿ ಸೇವೆ ನೀಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಈ ವೇಳೆ ತಹಸೀಲ್ದಾರ್ ಕೆ. ಮಂಜುನಾಥ್, ತಾ.ಪಂ. ಇಒ ಅಪೂರ್ವ ಸಿ. ಅನಂತರಾಮು , ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಸಹಾಯಕ ನಿರ್ದೇಶಕಿ ಯಮುನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Power Cut: ಬೆಂಗಳೂರು ನಗರದ 66/11 ಕೆ.ವಿ. ಬಾಣಸವಾಡಿ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಈ ವ್ಯಾಪ್ತಿಯ ವಿವಿಧೆಡೆ ಜೂ. 22ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

VISTARANEWS.COM


on

Power cut There will be power outage in various parts of Bengaluru on June 22
Koo

ಬೆಂಗಳೂರು: ನಗರದ 66/11 ಕೆ.ವಿ. ಬಾಣಸವಾಡಿ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಈ ವ್ಯಾಪ್ತಿಯ ವಿವಿಧೆಡೆ ಜೂ. 22ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ (Power Cut) ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?

ಹೊರಮಾವು ಪಿ&ಟಿ ಲೇಔಟ್‌, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್‌ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್‌, ಚಿನ್ನಸ್ವಾಮಪ್ಪ ಲೇಔಟ್‌, ಕೋಕೋನಟ್‌ಗ್ರೋವ್‌, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್‌ ಕಾಲೋನಿ, ಎಚ್‌.ಆರ್‌.ಬಿ.ಆರ್‌. ಲೇಔಟ್‌, 1ನೇ ಬ್ಲಾಕ್‌, 2ನೇ ಬ್ಲಾಕ್‌, 3ನೇ ಬ್ಲಾಕ್‌, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂಎಸ್‌ ಎಸ್‌.ಬಿ. ವಾಟರ್‌ ಟ್ಯಾಂಕ್‌, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್‌ ಲೇಔಟ್‌, ಬಿ.ಡಿ.ಎಸ್.‌ ಗಾರ್ಡನ್‌, ಸತ್ಯಎನ್‌ಕ್ಲೇವ್‌, ಪ್ರಕೃತಿ ಲೇಔಟ್‌, ಹೊಯ್ಸಳ ನಗರ, ಬೃಂದಾವನ ಲೇಔಟ್‌,

ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

ವಿನಾಯಕ ಲೇಔಟ್‌, ವಿವೇಕಾನಂದ ಲೇಔಟ್‌, ಮಂಜುನಾಥನಗರ ರಸ್ತೆ, ಎನ್‌.ಆರ್‌.ಐ ಲೇಔಟ್‌, ರಿಚಸ್‌ ಗಾರ್ಡನ್‌, ಸುಂದರಾಂಜನೇಯ ದೇವಸ್ಥಾನ, ಡಬಲ್‌ ರಸ್ತೆ, ಪುಣ್ಯಭೂಮಿ ಲೇಔಟ್‌, ಸಮದ್‌ ಲೇಔಟ್, ಯಾಸಿನ್‌ ನಗರ, ಪಿ.ಎನ್‌.ಎಸ್‌. ಲೇಔಟ್‌, ಕುಳ್ಳಪ್ಪ ಸರ್ಕಲ್‌, 5ನೇ ಮುಖ್ಯರಸ್ತೆ, ಎಚ್.ಬಿ.ಆರ್.‌ 2ನೇ ಬ್ಲಾಕ್‌, ರಾಜ್‌ಕುಮಾರ್‌ ಪಾರ್ಕ್‌, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್‌, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್‌. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್‌, ಅಜಮಲ್ಲಪ್ಪ ಲೇಔಟ್‌, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್‌, ಗೋಪಾಲರೆಡ್ಡಿ ಲೇಔಟ್‌, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್.‌ 2ನೇ, 5ನೇ, 6ನೇ ಕ್ರಾಸ್‌, 100 ಅಡಿ ರಸ್ತೆ ಬಾಣಸವಾಡಿ, ಗ್ರೀನ್‌ ಪಾರ್ಕ್‌ ಲೇಔಟ್‌, ಫ್ಲವರ್‌ ಗಾರ್ಡನ್‌, ಎಂ.ಎಂ.ಗಾರ್ಡನ್‌, ದಿವ್ಯ ಉನ್ನತಿ ಲೇಔಟ್‌, ಪ್ರಕೃತಿ ಟೌನ್‌ಶಿಪ್‌, ಮಲ್ಲಪ್ಪ ಲೇಔಟ್‌ ಮತ್ತು ಸುತ್ತಲಿನ ಪ್ರದೇಶ,

ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್‌, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್‌, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್‌, ಗುಬ್ಬಿಕ್ರಾಸ್‌, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್‌, ನಂಜಪ್ಪ ಗಾರ್ಡನ್‌, ಸಿ.ಎನ್‌.ಆರ್‌. ಲೇಔಟ್‌, ಆರ್.ಎಸ್‌. ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್‌, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್‌, ಎನ್‌.ಪಿ.ಎಸ್‌., ಬೆಥೆಲ್‌ ಲೇಔಟ್‌, ಸಮೃದ್ಧಿ ಲೇಔಟ್‌, ವಾಟರ್‌ ಟ್ಯಾಂಕ್‌, ಕಲ್ಕೆರೆ, ಜಯಂತಿ ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ:Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ವಿದ್ಯುತ್‌ ದೂರಿಗಾಗಿ ಬೆ.ವಿ.ಕಂ. ಸಹಾಯವಾಣಿ ಸಂಖ್ಯೆ 1912ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪೂರ್ವ ವೃತ್ತದ ಕಾರ್ಯ ಮತ್ತು ಪಾಲನೆ ಅಧೀಕ್ಷಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ವಿಜಯನಗರ

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Vijayanagara News: ವಿಜಯನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 21ರಂದು ಜಿಲ್ಲಾಮಟ್ಟದ‌ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆಯಯೊಂದಿಗೆ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Vijayanagara DC MS Diwakar meeting with officials of various departments
Koo

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಜೂನ್ 21ರಂದು ಜಿಲ್ಲಾಮಟ್ಟದ‌ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆಯಯೊಂದಿಗೆ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅಧಿಕಾರಿಗಳಿಗೆ ಸೂಚನೆ (Vijayanagara News) ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮರ್ಪಕವಾದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಇಲಾಖೆಗಳ ಪ್ರಗತಿಗೆ ಪೂರಕವಾಗಿ ಮುಖ್ಯಮಂತ್ರಿಗಳು ಬಯಸುವ ಯಾವುದೇ ಮಾಹಿತಿಯನ್ನು ತಕ್ಷಣ ಕೊಡುವ ಹಾಗೆ ಎಲ್ಲಾ ಮಾಹಿತಿಯೊಂದಿಗೆ ಅಧಿಕಾರಿಗಳು ಬರಬೇಕು ಎಂದು ಡಿಸಿ ನಿರ್ದೇಶನ ನೀಡಿದರು.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡಬೇಕು. ಕಚೇರಿಯ ಇನ್ನೀತರ ಅಧಿಕಾರಿ ಸಿಬ್ಬಂದಿಯನ್ನು ನಿಯೋಜಿಸದೇ ಜಿಲ್ಲಾಮಟ್ಟದ ಅಧಿಕಾರಿಗಳೇ ಸಭೆಗೆ ಖುದ್ದು ಹಾಜರಾಗಬೇಕು. ನಿಗದಿತ ಸಮಯಕ್ಕೆ ಸಭೆಗೆ ಹಾಜರಾಗಬೇಕು. ಸಭೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಅನವಶ್ಯಕವಾಗಿ ವಿವರಣೆ ನೀಡದೇ ನೇರವಾಗಿ ಉತ್ತರಿಸಬೇಕು. ಗೊಂದಲಕ್ಕೆ ಅವಕಾಶವಿಲ್ಲದ ಹಾಗೆ ವಸ್ತುನಿಷ್ಠವಾಗಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಪತ್ರಕರ್ತರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಬೇಕು. ‌ಪಾಸು ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಬಾರಿ ಮುಂಗಾರು ಮಳೆಗಳು ಉತ್ತಮವಾಗಿ ಸುರಿದಿವೆ. ಬಿತ್ತನೆಯು ಕಾರ್ಯಾರಂಭವಾಗಿದೆ. ಹೋಬಳಿ, ತಾಲೂಕುವಾರು ಮಳೆ ವಿವರ, ಬಿತ್ತನೆ ಗುರಿ, ಬಿತ್ತನೆ ಬೀಜ ಮತ್ತು ರಸಗೊಬ್ಬರದ ದಾಸ್ತಾನು ಸೇರಿ ಈ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಹತ್ವದ ಕಾಮಗಾರಿಗಳು, ಅವುಗಳ ಪ್ರಗತಿ, ಟೆಂಡರ್ ಹಂತದಲ್ಲಿರುವ ಕಾಮಗಾರಿಗಳ ಮಾಹಿತಿಯನ್ನು ಅನುಷ್ಠಾನಾಧಿಕಾರಿಗಳು ಸಭೆಗೆ ಸರಿಯಾಗಿ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಸಭೆಯಲ್ಲಿ ಜಿಪಂ ಸಿಇಓ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಜಿಪಂ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Continue Reading
Advertisement
CM Siddaramaiah
ಪ್ರಮುಖ ಸುದ್ದಿ15 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು26 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ27 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ28 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ30 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು35 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ59 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ2 hours ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌