Site icon Vistara News

ಮಳೆಗೆ ಕೆರೆ ಕೋಡಿ ಒಡೆದು ಕೆರೆಯಾದ ಪೇಟೆಕೇರಿ

petekeri

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಭಾನುವಾರ ಸುರಿದ ಮಳೆಗೆ ಪೇಟೆಕೇರಿ ಬೀದಿಯಲ್ಲಿ ಮತ್ತೆ ಪ್ರವಾಹ ಉಂಟಾಗಿದೆ.

ಭಾರಿ ಮಳೆಗೆ ತಟ್ಟೇಕೆರೆ ಕೆರೆ ನೀರು ಕೋಡಿ ಒಡೆದಿರುವುದರಿಂದ ಭಾರಿ ಪ್ರಮಾಣದಲ್ಲಿ ನೀರು ಊರಿನ ಒಳಗೆ ನುಗ್ಗುತ್ತಿದೆ. ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸದ್ಯ ಬೀಡಿ ಕಾಲೋನಿಯಲ್ಲಿ ಮತ್ತೆ ಪ್ರವಾಹದ ಭೀತಿ ಉಂಟಾಗಿದೆ.

ಕಳೆದ ಎರಡು ದಿನಗಳ ಹಿಂದೆಯೂ ಇದೇ ತರಹದ ಪರಿಸ್ಥಿತಿ ಉಂಟಾಗಿತ್ತು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ರಾಮನಗರ ಜಿಲ್ಲೆಯಾದ್ಯಂತ ಭಾನುವಾರ ಹಾಗೂ ರಾತ್ರಿಯಿಡೀ ಬಿಟ್ಟುಬಿಡದೆ ವರುಣನ ಅಬ್ಬರ ಮುಂದುವರಿದಿದೆ. ರಾಮನಗರ, ಬಿಡದಿ, ಚನ್ನಪಟ್ಟಣ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯ ಬಹುತೇಕ ಕೆರೆ, ಕಟ್ಟೆಗಳು ಭರ್ತಿಯಾಗಿ ಕೋಡಿಯಾಗಿವೆ.

Exit mobile version