Site icon Vistara News

ಮಾಗಡಿಯಲ್ಲಿ ಫೆ.17ರಂದು ಕಾನೂನು ಅರಿವು, ಬೃಹತ್‌ ಆರೋಗ್ಯ ತಪಾಸಣಾ ಶಿಬಿರ

Health camp

ರಾಮನಗರ: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲಾ ಘಟಕ, ಮಾಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ (HRACF-ದೆಹಲಿ) ಮಾಗಡಿ ತಾಲೂಕು ಶಾಖೆ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ಕ್ಕೆ ʼಕಾನೂನು ಅರಿವು ಮತ್ತು ಬೃಹತ್‌ ಆರೋಗ್ಯ ತಪಾಸಣಾ ಶಿಬಿರʼವನ್ನು (Legal awareness and health camp) ಜಿಲ್ಲೆಯ ಮಾಗಡಿಯ ಡೂಂಲೈಟ್‌ ಸರ್ಕಲ್‌ನ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಕೆ.ಎಸ್.ಎಲ್.ಎಸ್.ಎ. ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆ.ಎಸ್.ಎಲ್.ಎಸ್.ಎ. ಸದಸ್ಯರು ಹಾಗೂ HRACF ರಾಷ್ಟ್ರೀಯ ಅಧ್ಯಕ್ಷ ಡಾ. ಮೋಹನ್‌ರಾವ್‌ ನಲವಡೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಡಿ.ಎಲ್.ಎಸ್.ಎ. ಸದಸ್ಯ ಕಾರ್ಯದರ್ಶಿ ಅನಿತ ಅವರು ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಮಾಗಡಿಯ ಜೆ.ಎಂ.ಎಫ್.ಸಿ.ಯ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಜೀವನ್‌ ರಾವ್ ವಸಂತ್‌ ರಾವ್ ಕುಲಕರ್ಣಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ಕೆ.ಆರ್, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್‌ ಎಸ್‌.ರೆಡ್ಡಿ, ಒಂದನೇ ಅಪರ ಸಿವಿಲ್ ನ್ಯಾಯಾಧೀಶೆ ಧನಲಕ್ಷ್ಮೀ ಎಂ., ಎರಡನೇ ಅಪರ ಸಿವಿಲ್ ನ್ಯಾಯಾಧೀಶೆ ರಂಜಿತ ಜಿ.ಬಿ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ | Govt Employees Conference: ಬೆಂಗಳೂರಿನಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವ ಹಕ್ಕುಗಳು ಮತ್ತು ಭ್ರಷ್ಟಚಾರ ವಿರೋಧಿ ಸಂಸ್ಥೆ(ದೆಹಲಿ) ಮಾಗಡಿ ತಾಲೂಕು ಶಾಖೆಯ ಅಧ್ಯಕ್ಷ ಎಂ.ಆರ್. ಮಂಜುನಾಥ್‌ ಅವರು ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ HRACF ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್‌, ಮಾಗಡಿ ತಾಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್‌, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಮಾರ್ಕೆಟಿಂಗ್‌ ಮ್ಯಾನೇಜರ್‌ ಪರಶುರಾಮ್‌ ರೆಡ್ಡಿ ಹಾಜರಾಗಲಿದ್ದಾರೆ.

Exit mobile version