Site icon Vistara News

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ರಾಮನಗರದಲ್ಲಿ ಮಂಗಳವಾರ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಡೆದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಸಂಸದ ಡಿ.ಕೆ. ಸುರೇಶ್ ಪರ ಡಿಸಿಎಂ ಡಿ.ಕೆ. ಶಿವಕುಮಾರ್, ಭರ್ಜರಿ ಮತಬೇಟೆ ನಡೆಸಿದರು.

ಇದನ್ನೂ ಓದಿ: Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿದ್ದು, ಎಲ್ಲರಿಗೂ ಅನ್ಯಾಯ ಮಾಡಿದೆ. ಈ ವಿಚಾರವನ್ನು ರಾಜ್ಯ ಹಾಗೂ ದೇಶದ ಜನರ ಗಮನಕ್ಕೆ ತಂದಿದ್ದೇನೆ. ನಮ್ಮ ಮುಂದಿನ ಪೀಳಿಗೆಗಳು ರಾಜ್ಯದಲ್ಲೇ ಸ್ವಾಭಿಮಾನದಿಂದ ಬದುಕಬೇಕಾದರೆ ತೆರಿಗೆ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದ ಅವರು, ನಮ್ಮ ಉದ್ಯೋಗಗಳು, ಅಭಿವೃದ್ಧಿ, ಅನುದಾನವು ಉತ್ತರ ಪ್ರದೇಶ, ಗುಜರಾತ್, ಬಿಹಾರದ ಪಾಲಾಗುತ್ತಿವೆ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಿದ್ದೇನೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಪ್ರಾರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಮನಗರ ಪಟ್ಟಣದ ಅಭಿವೃದ್ಧಿಗೆ 800 ಕೋಟಿಗೂ ಹೆಚ್ಚು ಅನುದಾನವನ್ನು ಮಂಜೂರು ಮಾಡಿದ್ದೇವೆ. ಈ ಭಾಗದಲ್ಲಿ ರಸ್ತೆ, ಒಳಚರಂಡಿ ದುಸ್ಥಿತಿಯಲ್ಲಿದ್ದು, ಇದೆಲ್ಲವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ತಮಗೆ ಅವಕಾಶ ನೀಡಿ, ಹಸ್ತದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version