ರಾಮನಗರ: ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯಕ್ಕೆ ಶುಕ್ರವಾರ ಭೇಟಿ ನೀಡಿದ್ದರು.
ಈ ಜಲಾಶಯದಿಂದ ಯಶವಂತಪುರ ಮತ್ತು ಮಾಗಡಿ ಪಟ್ಟಣದ ಸುತ್ತಮುತ್ತಲಿನ 28 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ, ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಮಾಹಿತಿಯಿದೆ. ಕಾರ್ಖಾನೆ ಸೇರಿದಂತೆ ಇತರೆ ಮೂಲಗಳಿಂದ ಜಲಾಶಯದ ನೀರು ಕಲುಷಿತಗೊಂಡಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು. ನೀರು ಶುದ್ಧೀಕರಣ ಘಟಕ ಸ್ಥಾಪಿಸಬೇಕು. ಈ ಭಾಗದ ರೈತರಿಗೂ ಕೂಡ ಅನುಕೂಲವಾಗಲು ಸರ್ಕಾರ ಮುಂದಾಗಬೇಕು ಎಂದು ಎನ್. ರವಿಕುಮಾರ್ ಹೇಳಿದರು.
ಬೆಂಗಳೂರು ನಗರದ ಹೃದಯ ಭಾಗಕ್ಕೂ ಈ ಜಲಾಶಯ ಹತ್ತಿರವಿರುವ ಕಾರಣ ಪ್ರವಾಸಿತಾಣವಾಗಲು ಸರ್ಕಾರ ಗಮನಹರಿಸಬೇಕು. ಕೆ.ಆರ್.ಎಸ್ ಜಲಾಶಯ ಮಾದರಿಯಂತೆ ಈ ಜಲಾಶಯವನ್ನು ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಲು ಒತ್ತಾಯಿಸಿ ಈ ಮುಂಬರುವ ಅಧಿವೇಶನದಲ್ಲಿ ಗಮನ ಸೆಳೆಯಲಾಗುವುದು ಎಂದರು.
ಇದನ್ನೂ ಓದಿ | Ram Mandir: ಜ. 22ರಂದು ರಜೆ ಘೋಷಿಸಿ; ರಾಜ್ಯ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ
ರಾಮನಗರದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ವೀಕ್ಷಣೆ
ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು
ರಾಮನಗರ ರೇಷ್ಮೆಗೂಡಿನ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಇದು ಏಷ್ಯಾದ ಅತಿದೊಡ್ಡ ರೇಷ್ಮೆ ಗೂಡಿನ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ರಾಮನಗರ ಜಿಲ್ಲೆ ರೇಷ್ಮೆ ಉತ್ಪಾದನೆಗೆ ಹೆಸರುವಾಸಿಯಾಗಿದೆ.