Suicide Case | ರೈತ ಸಂಘದ ಅಧ್ಯಕ್ಷನ ಪತ್ನಿ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಯಹತ್ಯೆ - Vistara News

ಕ್ರೈಂ

Suicide Case | ರೈತ ಸಂಘದ ಅಧ್ಯಕ್ಷನ ಪತ್ನಿ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಯಹತ್ಯೆ

ಮಾಗಡಿ ತಾಲೂಕಿನ ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ (Suicide Case ) ಆತ್ಮಹತ್ಯೆಗೆ ಶರಣಾಗಿದ್ದಾರೆ.

VISTARANEWS.COM


on

Suicide Case
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಇಲ್ಲಿನ ಮಾಗಡಿಯ ಹೊಸಪಾಳ್ಯ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ತಾನು ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ (Suicide Case ) ಮಾಡಿಕೊಂಡಿದ್ದಾರೆ. ರೂಪಾ (27), ಹರ್ಷಿಕ (6) ಮತ್ತು ಸ್ಫೂರ್ತಿ (4) ಮೃತ ದುರ್ದೈವಿಗಳು.

ಮೃತ ರೂಪಾ ಮಾಗಡಿ ತಾಲೂಕಿನ ರೈತ ಸಂಘದ ಅಧ್ಯಕ್ಷ ಲೋಕೇಶ್ ಎಂಬುವವರ ಪತ್ನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರೈತ ಸಂಘದಲ್ಲಿ ಗುರುತಿಸಿಕೊಂಡು, ಹೋರಾಟಗಳಲ್ಲಿದ್ದ ಹೊಸಪಾಳ್ಯ ಲೊಕೇಶ್ ಅವರು ಮನೆಯಲ್ಲಿ ಇಲ್ಲದ ವೇಳೆ ಈ ಅನಾಹುತ ನಡೆದಿದೆ. ಮಾಗಡಿ ಸಿಪಿಐ ರವಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | ರಾಮನಗರ-ಚನ್ನಪಟ್ಟಣ 23 ಕಿ.ಮೀ ಬೈಪಾಸ್ ರೆಡಿ, ಬಂದು ನೋಡಿ ಎಂದು ಪ್ರತಾಪ್‌ ಸಿಂಹ ಟಾಂಗ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಶಾಕ್‌! ಜು.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Arvind Kejriwal: ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಸಿಕ್ಕಿರುವ ಬೆನ್ನಲ್ಲೇ, ದಿಲ್ಲಿ ರೋಸ್‌ ಅವೆನ್ಯೂ ಕೋರ್ಟ್‌ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಇಂದು ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್‌, ಕೇಜ್ರಿವಾಲ್‌ ಅವರ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು.

VISTARANEWS.COM


on

Arvind Kejriwal
Koo

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಸಿಕ್ಕಿರುವ ಬೆನ್ನಲ್ಲೇ, ದಿಲ್ಲಿ ರೋಸ್‌ ಅವೆನ್ಯೂ ಕೋರ್ಟ್‌ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಇಂದು ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್‌, ಕೇಜ್ರಿವಾಲ್‌ ಅವರ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು.

ಇದರ ಬೆನ್ನಲ್ಲೇ ರೋಸ್‌ ಅವೆನ್ಯೂ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಜು.25ರವರೆಗೆ ವಿಸ್ತರಿಸಿದೆ ಹೀಗಾಗಿ ಜಾಮೀನು ಸಿಕ್ಕರೂ ಕೇಜ್ರಿವಾಲ್‌ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಎರಡು ವಾರಗಳ ಹಿಂದೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್‌ ನೀಡಲು ರಾಜ್ಯ ಸರ್ಕಾರ ಆದೇಶ!

Continue Reading

ಕಲಬುರಗಿ

Drowned In Water : ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಾಗ ಕೊಚ್ಚಿ ಹೋದ ಯುವತಿ

Drowned in Water : ಕಲಬುರಗಿಯಲ್ಲಿ ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆಂದು ಹೋದ ಯುವತಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ. ಇತ್ತ ಬಾಗಲಕೋಟೆಯ ಲಕ್ಕನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ (Dead Body Found) ಪತ್ತೆಯಾಗಿದೆ.

VISTARANEWS.COM


on

By

Drowned in water
Koo

ಕಲಬುರಗಿ: ನದಿಯಲ್ಲಿ ಸ್ನಾನ ಮಾಡುವಾಗ ಯುವತಿಯೊಬ್ಬಳು (Drowned in Water) ನೀರುಪಾಲಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಬಳಿಯ ಭೀಮಾ ನದಿಯಲ್ಲಿ ಘಟನೆ ನಡೆದಿದೆ. ಶೈಲಿ ಗೋಡೆ (23) ಮೃತ ದುರ್ದೈವಿ.

ಮಹಾರಾಷ್ಟ್ರದ ದೌಂಡ್ ತಾಲೂಕಿನ ವಂಡ‌ಅಡವಿ ಗ್ರಾಮದ ಶೈಲಿ, ಕುಟುಂಬ ಸಮೇತ ಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಆಗಮಿಸಿದ್ದರು. ದರ್ಶನಕ್ಕೂ ಮುನ್ನ ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ತೆರಳಿದ್ದರು. ಭೀಮಾ ನದಿಯ ಚಕ್ರೇಶ್ವರ ತೀರ್ಥದಲ್ಲಿ ಸ್ನಾನ ಮಾಡಲು ತೆರಳಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಪೊಲೀಸರು ಭೇಟಿ ನೀಡಿ ನೀರಿನೊಳಗೆ ಇದ್ದ ಶವವನ್ನು ಹೊರಗೆ ತಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bellary News : ಪಾಲಿಕೆ ಮುಂಭಾಗದಲ್ಲೆ ಕಾರ್ಪೊರೇಟರ್‌ಗೆ ಪ್ರಜ್ಞೆ ತಪ್ಪುವಂತೆ ಥಳಿಸಿದ ಯುವಕರ ಗ್ಯಾಂಗ್‌!

ಕೆರೆಯಲ್ಲಿ ಕೊಳೆತ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬಾಗಲಕೋಟೆಯ ಜಮಖಂಡಿಯ ಲಕ್ಕನ ಕೆರೆಯಲ್ಲಿ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Drowned in water.. Dead Body Found

ಜಮಖಂಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಮೃತ‌ದೇಹ ಡಿ-ಕಂಪೂಸ್ ಆಗಿದ್ದು, ಗುರುತು ಸಿಗದಂತಾಗಿದೆ. ಹೀಗಾಗಿ ನಾಪತ್ತೆ ಪ್ರಕರಣಗಳು ದಾಖಲಾಗಿರುವ ಪೊಲೀಸ್ ಠಾಣೆಗಳಿಗೆ ಜಮಖಂಡಿ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

ಗೂಡ್ಸ್‌ ವಾಹನಗಳ ಮುಖಾಮುಖಿ ಡಿಕ್ಕಿ

ಟಾಟಾ ಏಸ್ – ಮಹಿಂದ್ರಾ ಗೂಡ್ಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಾಗಲಕೋಟೆಯ ತೇರದಾಳ‌ ಪಟ್ಟಣದ ಕಲೂತಿ ನಗರದ ಬಳಿ ಘಟನೆ ನಡೆದಿದೆ.

ಟಾಟಾ ಏಸ್ ವಾಹನವು ತೇರದಾಳದಿಂದ ರಬಕವಿ ಕಡೆ ಹೊರಟಿದ್ದರೆ, ಮಹಿಂದ್ರಾ ಗೂಡ್ಸ್ ವಾಹನ ಜಮಖಂಡಿಯಿಂದ ಹಾರೂಗೇರಿ ಕಡೆ ಹೊರಟಿತ್ತು. ಜಮಖಂಡಿ ಕಾಗವಾಡ ರಾಜ್ಯ ಹೆದ್ದಾರಿಯಲ್ಲಿ ಬರುವ ಕಲೂತಿ ನಗರದಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕರಿಬ್ಬರಿಗೂ ಸಣ್ಣ ಪುಟ್ಟ ಗಾಯವಾಗಿದ್ದು, ತೇರದಾಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Anchor Aparna: ಪಂಚಭೂತಗಳಲ್ಲಿ ಅಪರ್ಣಾ ಲೀನ; ಸ್ಮಾರ್ತ ಸಂಪ್ರದಾಯದಂತೆ ನೆರವೇರಿದ ಅಂತ್ಯಸಂಸ್ಕಾರ

Anchor Aparna: ಬೆಂಗಳೂರಿನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಶುಕ್ರವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

Koo

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ (Anchor Aparna) ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ (actress aparna) ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್‌, ತೇಜಸ್ವಿನಿ ಅನಂತಕುಮಾರ್, ರಮೇಶ್‌ ಅರವಿಂದ್‌, ವಿನಯ್‌ ರಾಜಕುಮಾರ್‌, ನಿರೂಪಕಿ ಶ್ವೇತಾ ಚೆಂಗಪ್ಪ, ಬ್ರಹ್ಮಾಂಡ ಗೂರೂಜಿ ನರೇಂದ್ರ ಬಾಬು ಶರ್ಮಾ, ಇಂದ್ರಜಿತ್‌ ಲಂಕೇಶ್‌, ಮಂಡ್ಯ ರಮೇಶ್‌, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.

ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

ಇದನ್ನೂ ಓದಿ | Anchor Aparna:  ಹೂವು-ಹಾರ ತರದಂತೆ ಮನವಿ ಮಾಡಿ, ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ!

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (57) (Anchor Aparna) ಅವರು ಗುರುವಾರ ರಾತ್ರಿ ನಿಧನರಾಗಿದ್ದರು.

ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬನಶಂಕರಿ ನಿವಾಸದಲ್ಲಿ ಪತಿ ಹಾಗೂ ಕೇರ್ ಟೇಕರ್ಸ್ ಜತೆ ಅಪರ್ಣಾ ವಾಸಿಸುತ್ತಿದ್ದರು. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ | Anchor Aparna: ಅಪರ್ಣಾ ಕೊನೆ ಆಸೆ ಏನಾಗಿತ್ತು? ಕನಸು ಈಡೇರುವ ಮುನ್ನವೇ ಕಣ್ಮುಚ್ಚಿದ ನಟಿ!

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ.

Continue Reading

ಬಳ್ಳಾರಿ

Bellary News : ಪಾಲಿಕೆ ಮುಂಭಾಗದಲ್ಲೆ ಕಾರ್ಪೊರೇಟರ್‌ಗೆ ಪ್ರಜ್ಞೆ ತಪ್ಪುವಂತೆ ಥಳಿಸಿದ ಯುವಕರ ಗ್ಯಾಂಗ್‌!

Bellary News: ಬಳ್ಳಾರಿ ಪಾಲಿಕೆಯ ಮುಂಭಾಗದಲ್ಲೇ ಕಾರ್ಪೊರೇಟರ್‌ಗೆ ಪ್ರಜ್ಞೆ ತಪ್ಪುವಂತೆ ಹಲ್ಲೆ (Assault Case) ನಡೆಸಿದ್ದಾರೆ. ಸದ್ಯ ಈ ಸಂಬಂಧ ಬಳ್ಳಾರಿ ಗಾಂಧಿನಗರ ಠಾಣೆಯಲ್ಲಿ ಕೇಸು ಕೌಂಟರ್ ಕೇಸು ದಾಖಲಾಗಿದೆ.

VISTARANEWS.COM


on

By

Bellary News
Koo

ಬಳ್ಳಾರಿ/ಗದಗ: ಬಳ್ಳಾರಿಯ (Bellary News) ಮಹಾನಗರ ಪಾಲಿಕೆ ಆವರಣದಲ್ಲಿ ನಿನ್ನೆ ಗುರುವಾರ ರಾತ್ರಿ (ಜು.12) ಕ್ಷುಲ್ಲಕ ಕಾರಣಕ್ಕೆ ಪಾಲಿಕೆ ಸದಸ್ಯನ ಮೇಲೆ ಹಲ್ಲೆ (Assault Case) ನಡೆಸಲಾಗಿದೆ. ಪಾಲಿಕೆ‌ ಸದಸ್ಯರ ಸಂಬಂಧಿ ರವಿ ಮತ್ತು ಪಾಲಿಕೆ‌ ಸದಸ್ಯ ಕುಬೇರನ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

38ನೇ ವಾಡ್೯ನ ಪಾಲಿಕೆ ಸದಸ್ಯ ಇ. ಕುಬೇರ ಮೇಲೆ ಹಲ್ಲೆ ನಡೆದಿದೆ. 39ನೇ ವಾರ್ಡ್‌ನ ಪಾಲಿಕೆ ಸದಸ್ಯೆಯ ಮೈದುನ ಆಗಿರುವ ರವಿ, ನಿನ್ನೆ ಮೇಯರ್ ಚೇಂಬರ್‌ನಲ್ಲಿ ಕುಬೇರ್‌ ಜತೆಗೆ ಗಲಾಟೆ ಮಾಡಿಕೊಂಡಿದ್ದ. ಅಲ್ಲಿದ್ದವರು ಸಮಾಧಾನಪಡಿಸಿ ಎಲ್ಲರನ್ನು ಹೊರಗೆ ಕಳಿಸಿದ್ದರು.

ಇತ್ತ ಪಾಲಿಕೆಯಿಂದ ಹೊರಬರುತ್ತಿದ್ದಂತೆ ಕುಬೇರನ ಮೇಲೆ ರವಿ ಆ್ಯಂಡ್ ಗ್ಯಾಂಗ್‌ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಕುಬೇರ ಹಾಗೂ ನಾಗರಾಜ ಎಂಬುವವರ ಮೇಲೆ ಹಲ್ಲೆ ಮಾಡಿರುವ ವಿಡಿಯೊ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಲ್ಲೆ ಬಳಿಕ ಇ ಕುಬೇರ ಮತ್ತು ವೀರೇಂದ್ರ ವಿಮ್ಸ್‌ನ ಟ್ರಾಮಾ ಕೇರ್ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಟ್ರಾಮಾ ಕೇರ್‌ಗೆ ಬರುತ್ತಿದ್ದಂತೆ ಗುಂಪು ಕಟ್ಟಿಕೊಂಡು ಬಂದು ರವಿ ಗ್ಯಾಂಗ್‌ ಮತ್ತೆ ಕುಬೇರ, ನಾಗರಾಜು, ವೀರೇಂದ್ರ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಪಾಲಿಕೆ ಸದಸ್ಯ ಕುಬೇರನ ಕಣ್ಣು, ಹೊಟ್ಟೆ, ಬೆನ್ನು, ಕೈ ಭಾಗಕ್ಕೆ ಪೆಟ್ಟಾಗಿದೆ. ನಾಗರಾಜ ಕುತ್ತಿಗೆ, ಹಲ್ಲು, ಕಾಲುಗಳಿಗೆ ಗಾಯವಾಗಿದೆ.

ಹಲ್ಲೆ ಬಳಿಕ ಕುಬೇರ ಅವರಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆ ನಿಖರ ಕಾರಣ ತಿಳಿದುಬಂದಿಲ್ಲ. ಹಲ್ಲೆ ಪರಿಣಾಮ ಬಳ್ಳಾರಿ ಟ್ರಾಮಾ ಕೇರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಲಿಕೆ ಮುಂಭಾಗದಲ್ಲೆ ಕಾರ್ಪೊರೇಟರ್‌ಗೆ ಥಳಿಸಿದ್ದಕ್ಕೆ ಬಳ್ಳಾರಿ ಗಾಂಧಿನಗರ ಠಾಣೆಯಲ್ಲಿ ಕೇಸು ಕೌಂಟರ್ ಕೇಸು ದಾಖಲಾಗಿದೆ. ರವಿ ಮತ್ತು ಗೋವಿಂದರಾಜುಲು ಸೇರಿದಂತೆ ಇತರರ ಮೇಲೆ ಕೊಲೆ ಯತ್ನದ ಕೇಸ್‌ ಹಾಗೂ ಕುಬೇರ ಮತ್ತು ಗಾದಿಲಿಂಗನ ಮೇಲೆ ಹಲ್ಲೆಯ ಕೇಸು ದಾಖಲಾಗಿದೆ.

ಇದನ್ನೂ ಓದಿ: Student Death : ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಸೂಸೈಡ್‌; ಹೂತಿಟ್ಟ ಶವವನ್ನು ಹೊರತೆಗೆದ ಪೊಲೀಸರು!

ಗದಗದಲ್ಲಿ ಕೊಡಲಿಯಿಂದ ಯುವಕನ ಮೇಲೆ ಹಲ್ಲೆ

ಕೊಡಲಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ ಬೇಲೇರಿ ಆ್ಯಂಡ್‌ ಗ್ಯಾಂಗ್ ಸೇರಿಕೊಂಡು ಗ್ರಾಮದ ಸುರೇಶ್ ಬೇಲೇರಿ ಎಂಬಾತನ ತಲೆಗೆ ಕೊಡಲಿಯಿಂದ ಹೊಡೆದಿದ್ದಾರೆ. ಸುರೇಶ್‌ ಗಂಭೀರವಾಗಿ ಗಾಯಗೊಂಡರೆ, ಜತೆಗಿದ್ದ ಯಶವಂತ ಬೆಲೇರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳು ಸುರೇಶ್ ಗದಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಯಶವಂತಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಲ್ಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಇಬ್ಬರು ಮಹಿಳೆಯರು ಸೇರಿ ಐವರಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಮಂಜುನಾಥ್, ಅಜ್ಜಪ್ಪ ಸೇರಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Akshay Kumar tests positive for COVID-19 will miss Anant Ambani wedding
ಬಾಲಿವುಡ್6 mins ago

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Anant Radhika Wedding
ವಾಣಿಜ್ಯ7 mins ago

Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

Arvind Kejriwal
ದೇಶ15 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಶಾಕ್‌! ಜು.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Drowned in water
ಕಲಬುರಗಿ26 mins ago

Drowned In Water : ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಾಗ ಕೊಚ್ಚಿ ಹೋದ ಯುವತಿ

Monsoon session
ಕರ್ನಾಟಕ27 mins ago

Monsoon session: ಜು.15ರಿಂದ ಮುಂಗಾರು ಅಧಿವೇಶನ: ನಾಗೇಂದ್ರ ಬಂಧನಕ್ಕೆ ಇಡಿ ನನ್ನ ಅನುಮತಿ ಪಡೆಯಲೇಬೇಕು ಎಂದ ಸ್ಪೀಕರ್‌

John Cena
ಕ್ರೀಡೆ31 mins ago

John Cena: ಅನಂತ್‌ ಅಂಬಾನಿ-ರಾಧಿಕಾ ಮದುವೆಗೆ ಆಗಮಿಸಿದ ಖ್ಯಾತ ರಸ್ಲರ್​ ಜಾನ್ ಸೀನ; ವಿಡಿಯೊ ವೈರಲ್​

Actor Yash Changed Rocky Bhai Hair Style
ಸ್ಯಾಂಡಲ್ ವುಡ್41 mins ago

Actor Yash: ಬದಲಾಯ್ತುʻ ರಾಕಿ ಭಾಯ್ʼ ಹೇರ್ ಸ್ಟೈಲ್:  ಅಬ್ಬಾ..! ಏನ್​ ಲುಕ್‌ ಗುರು.. ಅಂದ್ರು ಫ್ಯಾನ್ಸ್‌!

Gold Rate Today
ಕರ್ನಾಟಕ53 mins ago

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ ನೋಡಿ

muda scam r ashok in mysore
ಪ್ರಮುಖ ಸುದ್ದಿ59 mins ago

MUDA Scam: ಪೊಲೀಸರಿಂದ ಬಂಧನ ತಪ್ಪಿಸಲು ಗೂಡ್ಸ್‌ ಆಟೋದಲ್ಲಿ ಮೈಸೂರಿಗೆ ಬಂದ ಆರ್‌. ಅಶೋಕ್!

Dream Budget
ಬಜೆಟ್ 20241 hour ago

Central Budget 2024: 1997ರಲ್ಲಿ ʼಕ್ರಾಂತಿಕಾರಿ ಬಜೆಟ್ʼ ಮಂಡಿಸಿದ್ದ ಪಿ ಚಿದಂಬರಂ; ಆಗ ಪ್ರಧಾನಿಯಾಗಿದ್ದವರು ದೇವೇಗೌಡರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ23 hours ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌