ರಾಮನಗರ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ (45), ಹರ್ಷ (24) ಮೃತ ದುರ್ದೈವಿಗಳು. ಬೇಕರಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬ ಇವರದಾಗಿತ್ತು. ತಡರಾತ್ರಿ ಊಟ ಹಾಕಿಕೊಡುವ ವಿಚಾರಕ್ಕೆ ತಾಯಿ ಮಗನ ನಡುವೆ ಗಲಾಟೆ ನಡೆದಿದೆ. ಗಲಾಟೆಯಿಂದ ಮನನೊಂದು ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ತಾಯಿಯ ಸಾವಿನ ಬಳಿಕ ಮಗ ಹರ್ಷ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Suicide news | ತಂದೆಯಂತೆಯೇ ಆತ್ಮಹತ್ಯೆ ಮಾಡಿಕೊಂಡ ರೈತ