Site icon Vistara News

Wall collapsed : ವಸತಿ ಶಾಲೆಯಲ್ಲಿ ಗೋಡೆ ಕುಸಿದು ಬಾಲಕ ಸಾವು; ಇನ್ನಿಬ್ಬರು ಗಂಭೀರ

wall collapses in ramagar a

ರಾಮನಗರ : ನೀರಿನ ತೊಟ್ಟಿ ಗೋಡೆ ಕುಸಿದು (Wall collapsed) ಬಾಲಕನೊರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭಿರ ಗಾಯಗಳಾಗಿವೆ. ಬಿಡದಿ ಹೋಬಳಿ ಹಚ್.ಗೊಲ್ಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕೌಶಿಕ್ ಗೌಡ (12) ಮೃತ ದುರ್ದೈವಿ.

wall collapses

ಕೌಶಿಕ್‌ ಗೌಡ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ. ಮುಖ ತೊಳೆಯಲು ಹೋದಾಗ ಏಕಾಏಕಿ ನೀರಿನ ತೊಟ್ಟಿ ಗೋಡೆಯು ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಕೌಶಿಕ್‌ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದರೂ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.

ವಸತಿ ಶಾಲೆ ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ದಯಾನಂದ ಸಾಗರ ಆಸ್ಪತ್ರೆಯಲ್ಲಿ ಗಾಯಾಳು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version