ಕುರುಗೋಡು: ಕಂಪ್ಲಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ (Congress) ಪಕ್ಷದ ಹಿರಿಯ ಮುಖಂಡ, ರಾಮಸಾಗರ ಗ್ರಾಮದ ಬಿ.ನಾರಾಯಣಪ್ಪ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ನೇತೃತ್ವದಲ್ಲಿ ಪಟ್ಟಣದಲ್ಲಿ ಶನಿವಾರ ಬಿಜೆಪಿ ಪಕ್ಷಕ್ಕೆ (BJP party) ಸೇರ್ಪಡೆಯಾಗಿದ್ದಾರೆ.
ಬಳಿಕ ಮಾತನಾಡಿದ ಬಿ.ನಾರಾಯಣಪ್ಪ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುವ ಜತೆಗೆ ಪಕ್ಷವನ್ನು ಕೆಳಮಟ್ಟದಿಂದ ಬೆಳೆಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ನನಗೆ ಪಕ್ಷದ ವರಿಷ್ಠರು ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಪಕ್ಷವು ತತ್ವ ಸಿದ್ಧಾಂತವನ್ನು ಮರೆಮಾಚಿ ನನಗೆ ಟಿಕೆಟ್ ನೀಡದೇ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಅವರು, ಆದರೂ ನಾನು ಪಕ್ಷದಲ್ಲೇ ಮುಂದುವರಿಯಲು ನಿರ್ಧರಿಸಿದ್ದೆ. ಯಾರೂ ನನ್ನನ್ನು ಸಂಪರ್ಕಿಸದ ಹಿನ್ನೆಲೆಯಲ್ಲಿ ಮನನೊಂದು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರು.
ಇದನ್ನೂ ಓದಿ: ದುರಂತ ತಪ್ಪಿಸಿದ ಕಾಶ್ಮೀರ ಪೊಲೀಸರು; ಉಗ್ರರ ಜತೆ ನಂಟು ಹೊಂದಿದ್ದವನ ಬಂಧನ, 5 ಕೆಜಿ ಐಇಡಿ ವಶ
ಬಿಜೆಪಿ ಅಭ್ಯರ್ಥಿ ಸುರೇಶ್ ಬಾಬು ಅವರ ಪರ ಪ್ರಚಾರ ಕೈಗೊಂಡು, ಸುರೇಶ್ ಬಾಬು ಅವರನ್ನು ಗೆಲ್ಲಿಸಲು ಶ್ರಮಿಸುವುದಾಗಿ ತಿಳಿಸಿದರು.
ಕಂಪ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಬಾಬು ಮಾತನಾಡಿ, ಹಿರಿಯ ಮುಖಂಡ ಬಿ.ನಾರಾಯಣಪ್ಪ ಅವರು ತಮ್ಮ ಅಪಾರ ಬೆಂಬಲಿಂಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: IPL 2023 : ವೀರೇಂದ್ರ ಸೆಹ್ವಾಗ್ ಪುತ್ರರ ಜೊತೆ ಪೋಸ್ ನೀಡಿದ ವಿರಾಟ್ ಕೊಹ್ಲಿ!
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಪಕ್ಕೀರಪ್ಪ, ಜೆ.ಶಾಂತಾ, ಮುಖಂಡ ರಾಮಲಿಂಗಪ್ಪ, ಕಂಪ್ಲಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವಿರೇಶ, ಕೆ.ಸುನೀಲ್, ಜಿ.ಸುಧಾಕರ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.