Site icon Vistara News

ಜಾರಕಿಹೊಳಿ‌ ಸಿಡಿ ಪ್ರಕರಣ; ಮಾನ ಇದ್ರೆ ಸಿಬಿಐ ತನಿಖೆಗೆ ಕಾಂಗ್ರೆಸ್ ಒತ್ತಾಯಿಸಲಿ, ಇಲ್ದಿದ್ರೆ ಕೆಪಿಸಿಸಿಗೆ ಡಿಕೆಶಿ ರಾಜೀನಾಮೆ ನೀಡಲಿ: ಈಶ್ವರಪ್ಪ

KS Eshwarappa statement about BJP ticket in Shimoga Assembly Constituency

KS Eshwarappa statement about BJP ticket in Shimoga Assembly Constituency

ಬಳ್ಳಾರಿ: ತಮ್ಮ ವಿರುದ್ಧದ ಸಿಡಿ ಬಿಡುಗಡೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ನೇರ ಕೈವಾಡ ಇದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarkiholi) ಅವರು ನೇರವಾಗಿ ಆರೋಪ ಮಾಡಿದ್ದಾರೆ. ಪ್ರತಿಯೊಂದಕ್ಕೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡುವ ಕಾಂಗ್ರೆಸ್‌ನವರು ಮಾನ ಮರ್ಯಾದೆ ಇದ್ದರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಲಿ, ಇಲ್ಲದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಬಗ್ಗೆ ಈಗ ಏಕೆ ಕಾಂಗ್ರೆಸ್ ನಾಯಕರು ಬಾಯಿ ಬಿಡುತ್ತಿಲ್ಲ? ಪ್ರತಿಯೊಂದಕ್ಕೂ ಮೋದಿ, ಬೊಮ್ಮಾಯಿ ವಿರುದ್ಧ ಡಿಕೆಶಿ, ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾರೆ. ಈಗ ಏಕೆ ಸುಮ್ಮಿನಿದ್ದಾರೆ? ಮುಂದೆ ನೋಡಿ, ಯಾರ್ಯಾರು ಯಾವ ಜೈಲಿನಲ್ಲಿ ಇರಲಿದ್ದಾರೆ. ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ದುಷ್ಕೃತ್ಯ ಹೊರಬರಬೇಕು ಎಂದು ಹೇಳಿದರು.

ಇದನ್ನೂ ಓದಿ: Union budget 2023 : ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5200 ಕೋಟಿ ರೂ.

ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ದಾಖಲೆ ನೀಡುವಂತೆ ಪೊಲೀಸರಿಗೆ ಕೇಳಿದೆ. ಪೊಲೀಸರು ದಾಖಲೆಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ರಾಜಕಾರಣ ಮಾಡಿ ಯಶಸ್ಸು ಸಾಧಿಸಲು ಹೊರಟ ಕಾಂಗ್ರೆಸ್‌ನವರಿಗೆ ಸಾಧ್ಯವಾಗುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.

ಐದಾರು ಬಾರಿ ಗೆಲ್ಲಿಸಿದ ಚಾಮುಂಡಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ದಾರೆ. ಸೋಲುವ ಕಾರಣದಿಂದ ಕಳೆದ ಬಾರಿ ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿದರು. ಈಗ ಬಾದಾಮಿಯಲ್ಲಿ ಸೋಲುವುದು ಗೊತ್ತಾಗಿ ಕೋಲಾರಕ್ಕೆ ಹೋಗುತ್ತಿದ್ದಾರೆ. ಜಾತಿ ಮೇಲೆ ಚುನಾವಣೆ ಮಾಡಿದರೆ ತಾತ್ಕಾಲಿಕ ಯಶಸ್ಸು ಸಿಗಬಹುದು. ಜಾತಿವಾದಿಗಳು ದೇಶದಲ್ಲಿ ಹಾಳಾಗಿ ಹೋಗುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: KPCC : ಕಾಂಗ್ರೆಸ್‌ನಲ್ಲಿ ಬಂಡಾಯದ ಆತಂಕ: ನಾಲ್ಕು ತಿಂಗಳು ತಡವಾದರೂ ಆಗಲಿಲ್ಲ ಟಿಕೆಟ್‌ ಘೋಷಣೆ

ದೇಶದಲ್ಲಿ ಈಗ ನಡೆಯುತ್ತಿರುವುದು ಹಿಂದುತ್ವದ ರಾಷ್ಟ್ರೀಯತೆ ವಿಚಾರವಾಗಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜನರು ಹಿಂದುತ್ವವನ್ನು ಮೆಚ್ಚಿದ್ದಾರೆ. ಈಗ ಕಾಂಗ್ರೆಸ್ ನಾಯಕರು ನಾವು ಕೂಡ ಹಿಂದು ಎಂದು ಒತ್ತಿ ಒತ್ತಿ ಹೇಳುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Exit mobile version