Site icon Vistara News

Karnataka Election: ಅಧಿಕಾರಿಗಳ ಮೇಲೆ ಭ್ರಷ್ಟಾಸುರ‌ ಸರ್ಕಾರ ನಿಯಂತ್ರಣ ಕಳೆದುಕೊಂಡಿದೆ: ರಣದೀಪ್‌ ಸುರ್ಜೇವಾಲಾ

Karnataka Election

#image_title

ತುಮಕೂರು: ʻʻಭ್ರಷ್ಟಾಸುರ‌ ಬೊಮ್ಮಾಯಿ ಸರ್ಕಾರದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ಬಹಿರಂಗ ಕಿತ್ತಾಟ ನಡೆಯುತ್ತಿದೆ. ಅಧಿಕಾರಿಗಳ ಮೇಲೆ ಸರ್ಕಾರ ನಿಯಂತ್ರಣ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಸರ್ಕಾರ (Karnataka Election) ಎಂಬುವುದು ಅಸ್ತಿತ್ವದಲ್ಲಿಯೇ ಇಲ್ಲದಂತಾಗಿದೆʼʼ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಹೇಳಿದರು.

ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಮಧುಗಿರಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿವಾಸದಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ತಯಾರಿ ಕುರಿತ ಸಭೆ ಬಳಿಕ ಮಾತನಾಡಿದ ಅವರು, ಸಚಿವ ಅಶ್ವತ್ಥನಾರಾಯಣ ಸಿದ್ದರಾಮಯ್ಯರನ್ನು ಕೊಲೆ ಮಾಡಬೇಕು ಎನ್ನುತ್ತಾರೆ. ಮುಂದಿನ ದಿನಗಳಲ್ಲಿ ಅವರು ಎಲ್ಲರನ್ನೂ ಕೊಲೆ ಮಾಡಿ ಎನ್ನಬಹುದು. ಬಿಜೆಪಿ ಈ ಮೂಲಕ ಹಿಂಸೆಯನ್ನು ಪ್ರಚೋದಿಸುತ್ತಿದೆ. ಕಾಂಗ್ರೆಸ್‌ನವರು ದೇಶಕ್ಕಾಗಿ ತಮ್ಮ ಜೀವ ತ್ಯಾಗ ಮಾಡಿದ್ದಾರೆ. ಇವತ್ತು ಜೆ.ಪಿ‌. ನಡ್ಡಾ ಕರ್ನಾಟಕದಲ್ಲಿ ಇದ್ದಾರೆ. ಅವರಿಗೆ ನಾನು ಚಾಲೆಂಜ್ ಹಾಕುತ್ತೇನೆ. ಅಶ್ವತ್ಥನಾರಾಯಣರನ್ನು ವಜಾಗೊಳಿಸಿ, ಜೈಲಿಗೆ ಕಳುಹಿಸಿ. ಇಲ್ಲವಾದರೆ ಇದು ನಿಮ್ಮ ಮತ್ತು ಪ್ರಧಾನಿ ಮೋದಿಯವರ ಹೇಳಿಕೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಭ್ರಷ್ಟಾಸುರ ಸರ್ಕಾರ ಕರ್ನಾಟಕದಲ್ಲಿದೆ. ಭ್ರಷ್ಟಾಸುರ‌ ಬೊಮ್ಮಾಯಿ ಸರ್ಕಾರದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ಬಹಿರಂಗ ಕಿತ್ತಾಟ ನಡೆಯುತ್ತಿದೆ. ಅಧಿಕಾರಿಗಳ ಮೇಲೆ ಸರ್ಕಾರ ನಿಯಂತ್ರಣ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಸರ್ಕಾರ ಎಂಬುವುದು ಅಸ್ತಿತ್ವದಲ್ಲಿಯೇ ಇಲ್ಲದಂತಾಗಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಹೇಳಿದರು.

ಇದನ್ನೂ ಓದಿ | Sindhuri Vs Roopa : ಸಿಂಧೂರಿ ಮೇಲೆ ಯಾವ ಕ್ರಮವೂ ಆಗುತ್ತಿಲ್ಲ ಯಾಕೆ, ಅವರನ್ನು ರಕ್ಷಿಸುತ್ತಿರುವವರು ಯಾರು?: ರೂಪಾ ಪ್ರಶ್ನೆ

ಜೆಡಿಎಸ್‌ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಭಾಗಿ

ಕೆ.ಎನ್.ರಾಜಣ್ಣ ಮನೆಯಲ್ಲಿ ನಡೆದ ಸುರ್ಜೆವಾಲಾ ನೇತೃತ್ವದ ಸಭೆಯಲ್ಲಿ ಜೆಡಿಎಸ್‌ ಉಚ್ಛಾಟಿತ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್‌ ಭಾಗಿಯಾಗಿದ್ದರು. ವಾಸು‌ (ಶ್ರೀನಿವಾಸ್) ಹೆಗಲ ಮೇಲೆ ಕೈ ಹಾಕಿ ಸುರ್ಜೆವಾಲಾ ಅವರು ಸಭೆಗೆ ಸ್ವಾಗತಿಸಿದ್ದು ಕಂಡುಬಂತು. ಸಭೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿತರು ಉಪಸ್ಥಿತರಿದ್ದರು. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮದ್, ಶಾಸಕ ರಂಗನಾಥ್, ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್ ಸೇರಿದಂತೆ ಹಲವು ಭಾಗವಹಿಸಿದ್ದರು.

Exit mobile version