Site icon Vistara News

Karnataka Election 2023: ಜಗದೀಶ್‌ ಶೆಟ್ಟರ್‌ ನಿವಾಸಕ್ಕೆ ಸುರ್ಜೇವಾಲಾ ಭೇಟಿ, ಗೆಲುವಿಗೆ ರಣತಂತ್ರ

Jagadish Shettar

Jagadish Shettar

ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Election 2023) ಲಿಂಗಾಯತರ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಹಲವು ರಣತಂತ್ರ ರೂಪಿಸುತ್ತಿದೆ. ಇನ್ನು ಲಿಂಗಾಯತ ಸಮುದಾಯದ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿರುವ ಜಗದೀಶ್‌ ಶೆಟ್ಟರ್‌ ನಿವಾಸಕ್ಕೆ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಭೇಟಿ ನೀಡಿ, ಗೆಲುವಿಗೆ ರಣತಂತ್ರ ರೂಪಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಶೆಟ್ಟರ್‌ ನಿವಾಸಕ್ಕೆ ತೆರಳಿದ ಸುರ್ಜೇವಾಲಾ, ಶೆಟ್ಟರ್‌ ಅವರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಇದೇ ವೇಳೆ ತಿಂಡಿ ತಿಂದು, ಚಹಾ ಸವಿದರು. ಹುಬ್ಬಳ್ಳಿ-ಧಾರವಾಡ ಸೇರಿ ಸುತ್ತಮುತ್ತಲಿನ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ತಿಳಿದುಬಂದಿದೆ.

ಜಗದೀಶ್‌ ಶೆಟ್ಟರ್‌ ಟ್ವೀಟ್‌

ರಣದೀಪ್‌ ಸುರ್ಜೇವಾಲಾ ಭೇಟಿ ಕುರಿತು ಜಗದೀಶ್‌ ಶೆಟ್ಟರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಹುಬ್ಬಳ್ಳಿಯ ಗೃಹ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು” ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ನಾಯಕರಾದ ಎನ್.ಎಚ್. ಕೋನರೆಡ್ಡಿ, ರಜತ್ ಉಳ್ಳಾಗಡ್ಡಿಮಠ ಸೇರಿ ಹಲವರು ಉಪಸ್ಥಿತರಿದ್ದರು.

ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಬಿಜೆಪಿಗೆ ತಿರುಗೇಟು ನೀಡಲು ಹೆಚ್ಚಿನ ರಣತಂತ್ರ ರೂಪಿಸುತ್ತಿದ್ದಾರೆ. ಅಲ್ಲದೆ, ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿಯೂ ತೊಡಗಿದ್ದಾರೆ. ಬೃಹತ್‌ ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶಿಸಿರುವ ಅವರು, ಬಿಜೆಪಿಯನ್ನು ಕಟ್ಟಿಹಾಕುವ ಪಣ ತೊಟ್ಟಿದ್ದಾರೆ.

ಇದನ್ನೂ ಓದಿ: Karnataka Elections : 3 ದಿನ ಹಿಂದಷ್ಟೇ ಬಿಜೆಪಿ ಬಿಟ್ಟು ಬಂದ ಜಗದೀಶ್‌ ಶೆಟ್ಟರ್‌ ಈಗ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕ, ರಮ್ಯಾಗೂ ಸ್ಥಾನ

Exit mobile version