Site icon Vistara News

ರಾಷ್ಟ್ರೋತ್ಥಾನ ಸಾಹಿತ್ಯದಿಂದ ಒಂದು ತಿಂಗಳ ಕನ್ನಡ ಪುಸ್ತಕ ಹಬ್ಬ; ಅಕ್ಟೋಬರ್ 29ರಿಂದ ಆರಂಭ

ಕನ್ನಡ ಪುಸ್ತಕ ಹಬ್ಬ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯದ ಕನ್ನಡ ಪುಸ್ತಕ ಹಬ್ಬ ಮತ್ತೊಮ್ಮೆ ಬರುತ್ತಿದೆ. ಪುಸ್ತಕ ಹಬ್ಬವು ಅಕ್ಟೋಬರ್ 29ರಿಂದ ಆರಂಭಿಸಿ ನವೆಂಬರ್ 27ರ ವರೆಗೆ 1 ತಿಂಗಳ ಕಾಲ ನಡೆಯಲಿದೆ.

ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ‘ಕೇಶವಶಿಲ್ಪ’ ಸಭಾಂಗಣದಲ್ಲಿ ಪುಸ್ತಕ ಹಬ್ಬವು ಆಯೋಜನೆಗೊಂಡಿದೆ. ಹಬ್ಬದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಪುಸ್ತಕ ಬಿಡುಗಡೆ, ವಿಶೇಷ ಉಪನ್ಯಾಸ ಹಾಗೂ ಸಂವಾದ ಇರಲಿದೆ. ರಾಷ್ಟ್ರೋತ್ಥಾನ ಸಾಹಿತ್ಯ ಮಾತ್ರವಲ್ಲದೆ ಇತರೆ ಪ್ರಸಿದ್ಧ ಸಾಹಿತ್ಯಗಳೂ ಲಭ್ಯವಿರುತ್ತವೆ.

ಪುಸ್ತಕ ಸಂಸ್ಕೃತಿಯನ್ನು ಬೆಳೆಸುವುದು ಮುಖ್ಯ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಕ್ಷರ ದಾಸೋಹವನ್ನು ಸಾರ್ಥಕವಾಗಿಸುವ ಕೆಲಸ ಮಾಡಲಾಗುತ್ತಿದೆ. ಒಂದು ತಿಂಗಳ ಪುಸ್ತಕ ಹಬ್ಬದಲ್ಲಿ ಶೇ. 50% ವರೆಗೂ ರಿಯಾಯಿತಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ https://www.sahityabooks.com/ ಭೇಟಿ ನೀಡಬಹುದು.

ಇದನ್ನೂ ಓದಿ | ಹೊಸ ಪುಸ್ತಕ | ಸಾವು | ಚರಮಗೀತೆಗಳ ಸೊಗಸು

Exit mobile version