ಮೈಸೂರು: ಸೋಮವಾರದಿಂದ ಆರಂಭವಾಗಲಿರುವ ಮೈಸೂರು ದಸರಾ (Mysuru Dasara) ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟದಲ್ಲಿ ಆಯೋಜಿಸಲಾಗದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉತ್ಸವಕ್ಕೆ ಚಾಲನೆ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
ದಸರಾ ಉತ್ಸವ ಉದ್ಘಾಟನೆಗೆ ಮುನ್ನ ರಾಷ್ಟ್ರಪತಿ ದ್ರೌಪದಿ ರ್ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ದೇವಿ ದರ್ಶನ ಪಡೆದುಕೊಂಡು ಪೂಜೆ ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದ ಮುರ್ಮು ಅವರ ಜತೆ ರಾಜ್ಯಪಾಲರಾಧ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಜರಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವರಾದ ಶೋಭಾ ಕರಂದ್ಲಾಜೆ, ಎಸ್ ಟಿ ಸೋಮಶೇಖರ್ ಅವರು ಹಾಜರಿದ್ದರು.
ಇದನ್ನೂ ಓದಿ |ಈ ಬಾರಿ ಅದ್ಧೂರಿ ಮೈಸೂರು ದಸರಾ; 50 ಕೋಟಿ ರೂ. ವೆಚ್ಚಕ್ಕೆ ನಿರ್ಧಾರ!