Site icon Vistara News

ಸೆ.5ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಅರಣ್ಯ ಹಕ್ಕು ಪಿಐಎಲ್ ಅಂತಿಮ ವಿಚಾರಣೆ : ರವೀಂದ್ರ ನಾಯ್ಕ

ರವೀಂದ್ರ ನಾಯ್ಕ

ಶಿರಸಿ: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ಸೆಪ್ಟೆಂಬರ್ 5ರಿಂದ ಪ್ರಾರಂಭವಾಗಲಿದೆ ಎಂದು ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕೆಂದು ಎಂಟು ಪರಿಸರವಾದಿ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿ ಮಹತ್ವದ ವಿಚಾರಣೆ ಇದಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ | Operation Leopard | ಬಲೆಗೆ ಬೀಳದ ಬೆಳಗಾವಿ ಚಿರತೆ; ಸೋಮವಾರದಿಂದ ಶಾಲಾ-ಕಾಲೇಜು ಆರಂಭ

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಈ ಪ್ರಕರಣದಲ್ಲಿ ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲು ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿರುವುದು ವಿಶೇಷವಾಗಿದೆ. ಅಂತಿಮ ವಿಚಾರಣೆಯಲ್ಲಿ ಹೋರಾಟಗಾರರ ವೇದಿಕೆಯ ಹಿರಿಯ ನ್ಯಾಯವಾದಿಗಳು ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲಾಗುವುದೆಂದು ಹೇಳಿದರು.

ಅಲ್ಲದೇ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ತಿರಸ್ಕಾರವಾಗಿರುವ ಅತಿಕ್ರಮಣದಾರನ್ನು ಹಂತಹಂತವಾಗಿ ಒಕ್ಕಲೆಬ್ಬಿಸಲಾಗುವುದೆಂದು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರವಾಗಿ ರಾಜ್ಯ ಸರ್ಕಾರಕ್ಕೆ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಹೋರಾಟಗಾರರ ವೇದಿಕೆಯು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದಾಗಲೂ ಅರಣ್ಯವಾಸಿಗಳ ಪರವಾಗಿ ತಿದ್ದುಪಡಿ ಪ್ರಮಾಣ ಪತ್ರ ಇಂದಿನವರೆಗೂ ರಾಜ್ಯ ಸರ್ಕಾರ ಸಲ್ಲಿಸಿಲ್ಲ ಎಂದು ರವೀಂದ್ರ ನಾಯ್ಕ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ | ಮುರುಘಾ ಮಠದಲ್ಲಿ ನಾಳೆ ಸಾಮೂಹಿಕ ವಿವಾಹ; ಮದುವೆಯಿಂದ ಹಿಂದೆ ಸರಿದ 3 ಜೋಡಿ

Exit mobile version