ಕರ್ನಾಟಕ
MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್ ಗೂಳಿಗೌಡ
Dinesh Gooligowda: ಮೈಶುಗರ್ ಕಾರ್ಖಾನೆಗೆ ಸರ್ಕಾರದಿಂದ 17.42 ಕೋಟಿ ರೂಪಾಯಿ ಬಾಕಿ ಅನುದಾನ ಬಿಡುಗಡೆಯಾಗಬೇಕಿದ್ದು, ಈ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬೆಂಗಳೂರು: ಮೈಸೂರು ಸಕ್ಕರೆ ಕಾರ್ಖಾನೆಯ (MySugar Factory) ಪುನಶ್ಚೇತನಕ್ಕೆ ಮಂಜೂರಾಗಿರುವ ಹಣದಲ್ಲಿ ಬಾಕಿ ಉಳಿಕೆಯಾಗಿರುವ 17.42 ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಶುಕ್ರವಾರ (ಮಾ. 31) ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬರುವ ಜೂನ್‌ನಿಂದಲೇ ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭವಾಗಲಿದೆ. ಇದೇ ವೇಳೆ ಕಾರ್ಖಾನೆಯಲ್ಲಿ ಮುಂಚಿತವಾಗಿ ಹಣದ ಅವಶ್ಯಕತೆ ಇರುತ್ತದೆ. ರೈತರಿಗೆ ಮುಂಗಡ ಪಾವತಿ ಸೇರಿದಂತೆ ಕಬ್ಬು ಅರೆಯುವ ಸಂಬಂಧ ಅನೇಕ ಖರ್ಚು ವೆಚ್ಚಗಳು ಇರುತ್ತವೆ. ಆದರೆ, ಇಂತಹ ಸಂದರ್ಭದಲ್ಲಿ ಬರಬೇಕಾದ ಅನುದಾನವು ಬಿಡುಗಡೆಯಾಗದೇ ಹೋದರೆ ರೈತರಿಗೆ ಬಹಳವೇ ತೊಂದರೆಯಾಗಲಿದೆ. ಹೀಗಾಗಿ ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅಲ್ಲದೆ, ಜಿಲ್ಲೆಯಲ್ಲಿ 6112 ಎಕರೆ ಪ್ರದೇಶದಲ್ಲಿ 305600 ಮೆಟ್ರಿಕ್ ಟನ್ ಕಬ್ಬು ಬೆಳೆದ 3395 ರೈತರು 2023 ಮತ್ತು 24ನೇ ಸಾಲಿಗೆ ಕಬ್ಬು ಸರಬರಾಜು ಮಾಡಲು ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರೆಲ್ಲರೂ ಜೂನ್‌ನಿಂದಲೇ ಕಬ್ಬು ಪೂರೈಕೆಯನ್ನು ಪ್ರಾರಂಭಿಸಬಹುದಾಗಿದ್ದು, ಇವರಿಗೆ ಆ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ಹಣದ ಪಾವತಿಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಬಾಕಿ ಇರುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಮನವಿ ಪತ್ರದಲ್ಲೇನಿದೆ?
ಮಂಡ್ಯ ಜಿಲ್ಲೆಯ ಜನತೆಯ, ರೈತರ ಜೀವನಾಡಿಯಾಗಿರುವ ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜೂನ್ ತಿಂಗಳಿನಲ್ಲೀಯೇ ಕಬ್ಬು ಅರೆಯುವ ಕೆಲಸವನ್ನು ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈ ಸಾಲಿನಲ್ಲಿ ಒಟ್ಟಾರೆ ಸುಮಾರು 6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಫೆಬ್ರವರಿ, ಮಾರ್ಚ್ ಎರಡು ತಿಂಗಳಲ್ಲಿ 3 ಲಕ್ಷ ಟನ್ ಕಬ್ಬು ಸರಬರಾಜು ಮಾಡುವುದಾಗಿ ರೈತರು ಈಗಾಗಲೇ ಕಾರ್ಖಾನೆಯೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಕಾರ್ಖಾನೆಯಲ್ಲಿ ಯಂತ್ರಗಳ ರಿಪೇರಿ, ಹಾಗೂ ಕಬ್ಬು ನುರಿಸುವ ತಯಾರಿ ಕಾರ್ಯಕ್ಕೆ ಹಣಕಾಸಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗ ಸರ್ಕಾರದ ಸಹಕಾರ ಬಹಳ ಮುಖ್ಯವಾಗುತ್ತದೆ.
ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರವು ನಿರ್ಧರಿಸಿ, ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದಲೇ ಕಾರ್ಖಾನೆಯನ್ನು ನಡೆಸಲಾಗುವುದು. ಕಾರ್ಖಾನೆಯ ಯಂತ್ರೋಪಕರಣ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ, ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲಾಗುವುದು ಎಂದು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದರಂತೆ ಯಂತ್ರೋಪಕರಣಗಳ ದುರಸ್ತಿ ಮತ್ತು ಓವರ್-ಹಾಲಿಂಗ್ ಕೆಲಸಗಳಿಗೆ, ಸಾಮಗ್ರಿ ಖರೀದಿ ಮತ್ತು ಗುತ್ತಿಗೆ ಕೆಲಸಗಳನ್ನು ಕೈಗೊಳ್ಳಲು, ಕಬ್ಬು ಕಟಾವು ಮಾಡುವ ಮೇಸ್ತ್ರಿಗಳಿಗೆ ಮುಂಗಡ ಹಣ ಪಾವತಿಸಲು, ನೌಕರರಿಗೆ ಸ್ವಯಂ ನಿವೃತ್ತಿ ಸೌಲಭ್ಯ ಪಾವತಿಸುವುದಕ್ಕಾಗಿ 32.58 ಕೋಟಿ ರೂ. ಅನುದಾನವನ್ನು ಇದುವರೆಗೆ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದಿರುವ 17.42 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸುವ ಕ್ರಮವಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು.
ಇದನ್ನೂ ಓದಿ: Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಆದ್ದರಿಂದ ಈಗಾಗಲೇ ಸರ್ಕಾರ ನೀಡಿ ಬಜೆಟ್‌ನಲ್ಲಿ ಘೋಷಿಸಿದ್ದ 50 ಕೋಟಿ ರೂಪಾಯಿಯಲ್ಲಿ ಬಾಕಿ ಇರುವ 17.42 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಕೊಡಬೇಕು ಎಂದು ಮಂಡ್ಯ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಅವರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಕೋರಿದ್ದಾರೆ.
ಕರ್ನಾಟಕ
ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ
ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ಜೂನ್ 16 ರಿಂದ 22ರವರೆಗೆ 11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನ ನಡೆಯಲಿದೆ.
ಬೆಂಗಳೂರು: ಹಿಂದು ರಾಷ್ಟ್ರ ಸ್ಥಾಪನೆಯ ಉದ್ದೇಶದೊಂದಿಗೆ ಪ್ರತಿ ವರ್ಷದಂತೆ ಜೂನ್ 16 ರಿಂದ 22ರವರೆಗೆ ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ʼ11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನʼ (ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವ) ಆಯೋಜಿಸಲಾಗಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆ ವಿಶೇಷ ತಜ್ಞರ ಚರ್ಚಾಕೂಟ, ಗೌರವಾನ್ವಿತರ ಸಂದರ್ಶನ ಇರಲಿದೆ. ‘ಲವ್ ಜಿಹಾದ್, ‘ಹಲಾಲ್ ಸರ್ಟಿಫಿಕೇಷನ್, ‘ಲ್ಯಾಂಡ್ ಜಿಹಾದ್, ‘ಕಾಶಿ-ಮಥುರಾ ಮುಕ್ತಿ, ‘ಮತಾಂತರ, ‘ಗೋಹತ್ಯೆ, ‘ಕೋಟೆ ದೇವಸ್ಥಾನಗಳ ಮೇಲಿನ ಇಸ್ಲಾಂ ಅತಿಕ್ರಮಣ, ‘ದೇವಸ್ಥಾನ ಸಂಸ್ಕೃತಿಯ ರಕ್ಷಣೆ, ‘ಕಾಶ್ಮೀರಿ ಹಿಂದುಗಳ ಪುನರ್ವಸತಿ, ‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಸೇರಿ ವಿವಿಧ ವಿಷಯಗಳ ಜತೆಗೆ ಹಿಂದು ರಾಷ್ಟ್ರದ ಅಡಿಪಾಯಕ್ಕಾಗಿ ಅವಶ್ಯಕ ವಿಷಯಗಳ ಮೇಲೆ ಚರ್ಚೆ, ವಿಚಾರ ವಿನಿಮಯ ಆಗಲಿದೆ ಎಂದು ಹೇಳಿದರು.
ಇದನ್ನೂ ಓದಿ | ರಾಜಮಾರ್ಗ ಅಂಕಣ: ಆತ್ಮಾಹುತಿ ದಾಳಿಗೆ ಎದೆಕೊಟ್ಟು ಆಕೆ ಬಂಡೆಯಂತೆ ನಿಂತಿದ್ದರು!
ಈ ಅಧಿವೇಶನಕ್ಕೆ ಅಮೆರಿಕ, ಬಾಂಗ್ಲಾದೇಶ, ನೇಪಾಳ, ಇಂಗ್ಲೆಂಡ್, ಸಿಂಗಪುರ ಈ ದೇಶಗಳ ಜತೆಗೆ ಭಾರತದಲ್ಲಿನ 28 ರಾಜ್ಯಗಳಲ್ಲಿನ 350ಕ್ಕೂ ಹೆಚ್ಚಿನ ಹಿಂದು ಸಂಘಟನೆಗಳ 1500ಕ್ಕಿಂತಲೂ ಹೆಚ್ಚಿನ ಪ್ರತಿನಿಧಿಗಳಿಗೆ ಆಮಂತ್ರಿಸಲಾಗಿದೆ. ಇದರಲ್ಲಿ ಕರ್ನಾಟಕದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಹಿಂದು ನಾಯಕರಾದ ಅರುಣ್ ಪುತ್ತಿಲ, ಡಾ. ಎಸ್. ಆರ್ ಲೀಲಾ, ಅಡ್ಡಂಡ ಕಾರ್ಯಪ್ಪ ಸೇರಿ ಸುಮಾರು 250ಕ್ಕೂ ಅಧಿಕ ಹಿಂದುತ್ವವಾದಿ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅದೇ ರೀತಿ ಅಮರಾವತಿಯ ರುಕ್ಮಿಣಿ ವಲ್ಲಭ ಪೀಠದ ಶ್ರೀ ಜಗದ್ಗುರು ರಾಮಾನಂದಚಾರ್ಯ, ಶ್ರೀ ಸ್ವಾಮಿ ರಾಮರಾಜೇಶ್ವರಾಚಾರ್ಯಜಿ, ವಿಶ್ವ ಹಿಂದು ಪರಿಷತ್ತಿನ ದೇವಗಿರಿ ಪ್ರಾಂತದ ಧರ್ಮಚಾರ್ಯ ಹ.ಭ.ಪ. ಜನಾರ್ಧನ ಮಹಾರಾಜ್ಮೇಟೆ, ಕಾಶಿಯ ಜ್ಞಾನವಾಪಿ ಮಸೀದಿಯ ವಿರುದ್ಧ ಹೋರಾಟ ನಡೆಸುತ್ತಿರುವ ವಕೀಲ ಹರಿಶಂಕರ್ ಜೈನ್, ನ್ಯಾಯವಾದಿ ವಿಷ್ಣು ಶಂಕರ ಜೈನ್, ತೆಲಂಗಾಣದ ಹಿಂದುತ್ವ ನಿಷ್ಠ ಶಾಸಕ ಟಿ. ರಾಜಾಸಿಂಗ್, ದೆಹಲಿಯ ಭಾಜಪದ ನಾಯಕ ಕಪಿಲ್ ಮಿಶ್ರಾ ಮತ್ತಿತರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಹಿಂದು ಧರ್ಮವು ವಿಶ್ವ ಬಂಧುತ್ವ ಮತ್ತು ‘ವಸುದೈವ ಕುಟುಂಬಕಂ ಸಂಕಲ್ಪವನ್ನು ಪ್ರಸ್ತುತಪಡಿಸುತ್ತದೆ. ಆದ್ದರಿಂದ ಭಾರತವನ್ನು ಮತ್ತೆ ತುಂಡಾಗುವುದನ್ನು ತಡೆಯಲು ಭಾರತವನ್ನು ಆದರ್ಶ ರಾಮರಾಜ್ಯ ಅರ್ಥಾತ್ ಹಿಂದು ರಾಷ್ಟ್ರ ಮಾಡದೆ ಪರ್ಯಾಯವಿಲ್ಲ ಎಂದು ಮೋಹನ್ ಗೌಡ ಹೇಳಿದರು.
ಈ ಅಧಿವೇಶನದ ನೇರಪ್ರಸಾರ ಹಿಂದೂ ಜನಜಾಗೃತಿ ಸಮಿತಿಯ ಜಾಲತಾಣ HinduJagruti.org ಮೂಲಕ, ಹಾಗೂ ಸಮಿತಿಯ @Hindujagruti ಈ ಯೂಟ್ಯೂಬ್ ಚಾನೆಲ್ ಮತ್ತು @HinduJagrutiOrg ಈ ಟ್ವಿಟರ್ ಹ್ಯಾಂಡಲ್ ಮೂಲಕ ಆಗಲಿದೆ. ಜಗತ್ತಿನಾದ್ಯಂತ ಇರುವ ಹಿಂದುತ್ವ ನಿಷ್ಠರು ಈ ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವದ ಲಾಭ ಪಡೆಯಬೇಕೆಂದು ಹಿಂದು ಜನಜಾಗೃತಿ ಸಮಿತಿಯು ಕರೆ ನೀಡಿದೆ.
ಇದನ್ನೂ ಓದಿ | ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?
ಸುದ್ದಿಗೋಷ್ಠಿಯಲ್ಲಿ ಹಿಂದು ವಿದಿಜ್ಞ ಪರಿಷತ್ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಅಮೃತೇಶ್ ಎನ್.ಪಿ, ಹಿಂದು ಜೈ ಭೀಮ್ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ್ (ಕೋಟೆ ಶೇಕಿ), ಅಯ್ಯಪ್ಪ ಸೇವಾ ಸಮಾಜಂ ಕರ್ನಾಟಕ ಅಧ್ಯಕ್ಷ ಎನ್. ಜಯರಾಮ, ನೆಲಮಂಗಲದ ಶ್ರೀ ರಾಮಾನುಜ ಪೀಠಂ ಉಪಾಧ್ಯಕ್ಷರು & ಉದ್ಯಮಿ ಜಯರಾಮ.ಎಸ್ ಉಪಸ್ಥಿತರಿದ್ದರು.
ಕರ್ನಾಟಕ
ಹುಬ್ಬಳ್ಳಿ ಏರ್‌ಪೋರ್ಟ್ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್ ಜೋಶಿ ಧನ್ಯವಾದ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ 273 ಕೋಟಿ ರೂ. ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದ್ದು (ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ) ಹಾಗೂ ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ 2014ರ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | H.D. Kumaraswamy: ಇದು 40+5 ಪರ್ಸೆಂಟ್ ಕಮಿಷನ್ ಸರ್ಕಾರ: ಕಾಂಗ್ರೆಸ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್!
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ ರೂ.273 ಕೋಟಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ @NarendraModi ಜೀ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ @JM_Scindia ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು.
— Pralhad Joshi (@JoshiPralhad) June 10, 2023
ಕರ್ನಾಟಕ
Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ
Bellary News: 2017ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಬಳ್ಳಾರಿ ಸೆಷನ್ಸ್ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ.
ಬಳ್ಳಾರಿ: ಪತ್ನಿ ಹಾಗೂ ಮಕ್ಕಳು ಸೇರಿ ಐವರನ್ನು ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದ್ದ ಬಳ್ಳಾರಿ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ. ಪತ್ನಿಯ ಶೀಲ ಶಂಕಿಸಿ ಪತ್ನಿ,, ಪತ್ನಿಯ ತಂಗಿ, ಹೆತ್ತ ಮೂವರು ಮಕ್ಕಳು ಸೇರಿ ಒಟ್ಟು ಐವರನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಅಪರಾಧಿಗೆ ಮರಣ ದಂಡನೆ ಶಿಕ್ಷೆ (Bellary News) ನೀಡಲಾಗಿದೆ.
ಜಿಲ್ಲೆಯ ಕಂಪ್ಲಿಯ ಚಪ್ಪರದಳ್ಳಿ ವಡ್ಡರ ತಿಪ್ಪೇಸ್ವಾಮಿ ಮನೆ ಬಳಿ 2017ರ ಫೆಬ್ರವರಿ 25 ರಂದು ಬೈಲೂರು ತಿಪ್ಪಯ್ಯ, ಐವರನ್ನು ಕೊಚ್ಚಿ ಕೊಲೆ ಮಾಡಿದ್ದ. ಪತ್ನಿ ಫಕೀರಮ್ಮ (36), ಪತ್ನಿಯ ತಂಗಿ ಗಂಗಮ್ಮ (30), ಮಕ್ಕಳಾದ ಬಸಮ್ಮ (9), ರಾಜಪ್ಪ(8), ಪವಿತ್ರ(6) ಹತ್ಯೆಯಾಗಿದ್ದರು.
ಇದನ್ನೂ ಓದಿ | Murder Case: ರೂಮಿನಲ್ಲಿ ಬೆಚ್ಚಗೆ ಮಲಗಿದ್ದವಳ ಕತ್ತು ಕೊಯ್ದ ಪ್ರಿಯಕರ!
ತಿಪ್ಪಯ್ಯನಿಗೆ 2019ರ ಡಿಸೆಂಬರ್ 3ರಂದು ಬಳ್ಳಾರಿ ಸೆಷನ್ಸ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಹೀಗಾಗಿ ಧಾರವಾಡ ಹೈಕೋರ್ಟ್‍ನಲ್ಲಿ ಈತ ಮೇಲ್ಮನವಿ ಸಲ್ಲಿಸಿದ್ದ. ವಿಚಾರಣೆ ನಡೆದು ಬಳ್ಳಾರಿ ಸೆಷೆನ್ಸ್ ನ್ಯಾಯಾಲಯದ ತೀರ್ಪನ್ನೇ ಹೈಕೋರ್ಟ್‌ನ ಧಾರವಾಡ ಪೀಠ ಹಿಡಿದು ಮರಣ ದಂಡನೆ ಶಿಕ್ಷೆ ಖಚಿತಪಡಿಸಿದೆ.
ಕರ್ನಾಟಕ
Koppala News: ಅಂಜನಾದ್ರಿ ಬೆಟ್ಟದಲ್ಲಿ ಕ್ಲೀನ್ ಡ್ರೈವ್; ಎಲ್ಲೆಂದರಲ್ಲಿ ಬಿಸಾಡಿದ ಸಾವಿರಾರು ವಾಟರ್ ಬಾಟಲ್‌ಗಳು: ಪರಿಸರ ನಾಶದ ಆತಂಕ
Koppala News: ಪ್ರಸಿದ್ಧ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಬಳಸಿ ಬಿಸಾಡುತ್ತಿರುವ ವಾಟರ್ ಬಾಟಲ್‌ಗಳು, ತಿಂಡಿ-ತಿನಿಸುಗಳ ಪ್ಯಾಕೆಟ್, ತಂಬಾಕು ಪದಾರ್ಥಗಳು ಸೇರಿದಂತೆ ದಿನೇ ದಿನೇ ಸಾಕಷ್ಟು ತ್ಯಾಜ್ಯ ಸಂಗ್ರಹಗೊಳ್ಳುತ್ತಿದ್ದು, ಪರಿಸರ ನಾಶದ ಆತಂಕ ಸೃಷ್ಟಿಯಾಗಿದೆ. ಶನಿವಾರ ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಕ್ಲೀನ್ ಡ್ರೈವ್ ಕಾರ್ಯ ಕೈಗೊಂಡು ಸಾವಿರಾರು ವಾಟರ್ ಬಾಟಲ್, ತ್ಯಾಜ್ಯವನ್ನು ಸಂಗ್ರಹಿಸಿದರು.
ಗಂಗಾವತಿ: ಪ್ರಸಿದ್ಧ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ಬೆಟ್ಟದಲ್ಲಿ (Anjanadri Hill) ಶನಿವಾರ ಗಂಗಾವತಿಯ ಕಿಷ್ಕಿಂಧಾ (Kishkindha) ಯುವ ಚಾರಣ ಬಳಗದ ಸದಸ್ಯರು ಕ್ಲೀನ್ ಡ್ರೈವ್ (Clean drive) ಕಾರ್ಯ ಕೈಗೊಂಡರು.
ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಬಿಸಾಡುತ್ತಿರುವ ತ್ಯಾಜ್ಯದಿಂದಾಗಿ ಇದೀಗ ಇಡೀ ಬೆಟ್ಟದಲ್ಲಿ ತ್ಯಾಜ್ಯಗಳಿಂದ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಬಾಟಲಿಗಳಿಂದ ಪರಿಸರ ನಾಶವಾಗುತ್ತಿರುವ ಆತಂಕ ಎದುರಾಗಿದ್ದು, ಇದನ್ನು ಮನಗಂಡ ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಬೆಟ್ಟದ ಕಲ್ಲು ಸಂದಿಗಳಲ್ಲಿ, ಮೆಟ್ಟಿಲುಗಳ ಎರಡು ಕಡೆಗಳಲ್ಲಿ ಜನರು ಎಸೆದಿದ್ದ ನೀರಿನ ಬಾಟಲ್, ತ್ಯಾಜ್ಯಗಳ ಸಂಗ್ರಹಕ್ಕಾಗಿ `ಕ್ಲೀನ್ ಡ್ರೈವ್’ ಕಾರ್ಯ ಮಾಡಿದರು.
ಇದನ್ನೂ ಓದಿ: WTC Final 2023: ಭಾರತ-ಆಸ್ಟ್ರೇಲಿಯಾ ನಾಲ್ಕನೇ ದಿನದಾಟದ ಹೈಲೆಟ್ಸ್
200 ರಿಂದ 300 ಚೀಲದಷ್ಟು ಪ್ಲಾಸ್ಟಿಕ್ ತ್ಯಾಜ್ಯವಿರುವ ಸಾಧ್ಯತೆ
ಸುಮಾರು 40ಕ್ಕೂ ಹೆಚ್ಚು ಯವಕರು ಶನಿವಾರ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಇಳಿದೆವು. ಸುಮಾರು 50ಕ್ಕೂ ಹೆಚ್ಚು ಚೀಲಗಳಲ್ಲಿ ತ್ಯಾಜ್ಯ ಸಂಗ್ರಹಿಸಿದ್ದು, ಇನ್ನೂ 200 ರಿಂದ 300 ಚೀಲದಷ್ಟು ಪ್ಲಾಸ್ಟಿಕ್ ತ್ಯಾಜ್ಯ ಇರುವ ಸಾಧ್ಯತೆ ಇದೆ ಎಂದು ಚಾರಣ ಬಳಗದ ಸದಸ್ಯ ಸಂತೋಷ್ ತಿಳಿಸಿದ್ದಾರೆ.
ಕುಡಿಯುವ ನೀರಿನ ಬಾಟಲ್‌ಗಳೇ ಅಧಿಕ
ಸಂಗ್ರಹಿಸಿದ ತ್ಯಾಜ್ಯದಲ್ಲಿ ಕುಡಿಯುವ ನೀರಿನ ಬಾಟಲ್‌ಗಳ ಪ್ರಮಾಣವೇ ಅಧಿಕವಾಗಿದೆ. ಜತೆಗೆ ತಂಬಾಕು ಪದಾರ್ಥಗಳ ತ್ಯಾಜ್ಯ, ತಿಂಡಿ-ತಿನಿಸುಗಳ ಪ್ಲಾಸ್ಟಿಕ್ ಪ್ಯಾಕೆಟ್ ಗಳನ್ನು ಬಳಸಿ ಎಲ್ಲೆಂದರಲ್ಲಿ ಎಸೆದು ಹೋಗಿದ್ದು, ಇದರಿಂದ ಬೆಟ್ಟದ ಸಹಜ ಸೌದರ್ಯ ನಾಶವಾಗುತ್ತದೆ ಎಂಬ ಕಾರಣಕ್ಕೆ ಗಂಗಾವತಿ, ಹೊಸಪೇಟೆ, ಕೊಪ್ಪಳ, ಕಂಪ್ಲಿ, ಕುಷ್ಟಗಿ, ಆನೆಗುಂದಿ, ಹನುಮನಹಳ್ಳಿಯಿಂದ ಬಂದಿದ್ದ ಸಮಾನ ಮನಸ್ಕ ಯುವಕರು ಸ್ವಚ್ಛತೆಗೆ ಮುಂದಾಗಿದ್ದೇವೆ ಎಂದು ಚಾರಣ ಬಳಗದ ಮತ್ತೊಬ್ಬ ಸದಸ್ಯ ತಿಳಿಸಿದರು.
ಇದನ್ನೂ ಓದಿ: ಎಟಿಎಸ್ ಭರ್ಜರಿ ಕಾರ್ಯಾಚರಣೆ; ಐಸಿಸ್ ತರಬೇತಿಗಾಗಿ ಅಫ್ಘಾನ್ಗೆ ಹೊರಟಿದ್ದ ಯುವತಿ, ಯುವಕರ ಬಂಧನ
ಮದ್ಯ ಬಾಟಲ್‌ಗಳು ಪತ್ತೆ
ಪ್ರಸಿದ್ಧ ಧಾರ್ಮಿಕ ತಾಣವಾದ ಅಂಜನಾದ್ರಿ ಬೆಟ್ಟದಲ್ಲಿ ಮದ್ಯ ಬಾಟಲಿಗಳು ಕೂಡ ಕಿಷ್ಕಿಂಧಾ ಯುವ ಚಾರಣ ಬಳಗ ಹಮ್ಮಿಕೊಂಡಿದ್ದ ಕ್ಲೀನ್ ಡ್ರೈವ್ ಸಂದರ್ಭದಲ್ಲಿ ಪತ್ತೆಯಾಗಿವೆ.
570 ಕ್ಕೂ ಹೆಚ್ಚು ಮೆಟ್ಟಿಲುಗಳಿರುವ ಅಂಜನಾದ್ರಿ ಬೆಟ್ಟ ಏರುವಾಗ ದಣಿವಾರಿಸಿಕೊಳ್ಳಲು ಎಂದು ಹಲವರು ಕುಡಿಯುವ ನೀರಿನ ಬಾಟಲಿ, ಆಹಾರದ ಪೊಟ್ಟಣಗಳನ್ನು ತರುತ್ತಾರೆ. ಆಹಾರ ಸೇವಿಸಿದ ಬಳಿಕ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ತ್ಯಾಜ್ಯ ಸಂಗ್ರಹಕ್ಕೆ ಕಾರಣವಾಗಿದೆ.
ಇದನ್ನೂ ಓದಿ: WTC Final 2023: 44 ವರ್ಷಗಳ ಹಳೆಯ ದಾಖಲೆ ಪುಡಿಗಟ್ಟಿದ ರವೀಂದ್ರ ಜಡೇಜಾ
ಜನರಲ್ಲಿ ಜಾಗೃತಿ ಮೂಡಿಸಲಿ
ಭಕ್ತರು ಎಸೆದಿರುವ ಕುಡಿಯುವ ನೀರಿನ ಬಾಟಲಿಗಳ ಪ್ರಮಾಣವೇ ಸುಮಾರು ಹತ್ತು ಸಾವಿರಕ್ಕೂ ಅಧಿಕವಿದೆ. ತಾಜ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ದೇವಸ್ಥಾನದ ಆಡಳಿತ ಮಂಡಳಿ ಮತ್ತು ತಾಲೂಕು ಆಡಳಿತ ಮಾಡಬೇಕು ಎಂದು ಚಾರಣ ಬಳಗದ ಸದಸ್ಯರು ಆಗ್ರಹಿಸಿದ್ದಾರೆ.
-
ಪ್ರಮುಖ ಸುದ್ದಿ37 mins ago
Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!
-
ಅಂಕಣ23 hours ago
ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?
-
ಕ್ರಿಕೆಟ್20 hours ago
Viral News: ಲಬುಶೇನ್ರನ್ನು ನಿದ್ರೆಯಿಂದ ಬಡಿದೆಬ್ಬಿಸಿದ ಸಿರಾಜ್; ಸಖತ್ ಮಜವಾಗಿದೆ ವಿಡಿಯೊ
-
ಕ್ರಿಕೆಟ್20 hours ago
Viral News: ಶುಭಮನ್ ಗಿಲ್ಗೆ ಪ್ರಪೋಸ್ ಮಾಡಿದ ಯುವತಿ; ಸಾರಾ ತೆಂಡೂಲ್ಕರ್ ರಿಯ್ಯಾಕ್ಷನ್ ಹೇಗಿತ್ತು?
-
ದೇಶ16 hours ago
Tipu Sultan: ಬುಲ್ಡೋಜರ್ ಮೂಲಕ ಟಿಪ್ಪು ಸುಲ್ತಾನ್ ಸ್ಮಾರಕ ನೆಲಸಮ, ವ್ಯಾಪಕ ಬಂದೋಬಸ್ತ್
-
ಕ್ರಿಕೆಟ್18 hours ago
WTC Final 2023: ರದ್ದಾಗುವ ಭೀತಿಯಲ್ಲಿದೆ ವಿಶ್ವ ಟೆಸ್ಟ್ ಫೈನಲ್ ಪಂದ್ಯ!
-
ಕರ್ನಾಟಕ16 hours ago
BY Vijayendra: ಧರಣಿ ಕುಳಿತ ಶಾಸಕ ಬಿ.ವೈ. ವಿಜಯೇಂದ್ರ! ತಾರಕಕ್ಕೇರಿದ ಮರ ಸಾಗಾಟ ಗಲಾಟೆ
-
South Cinema17 hours ago
Adipurush Movie: ಮುಟ್ಟಾದವರು ಆದಿಪುರುಷ್ ಸಿನ್ಮಾ ನೋಡೋದು ಬೇಡ! ರಾಹುಕಾಲದಲ್ಲಿ ಶೋ ಬೇಡ್ವೇ ಬೇಡ