Site icon Vistara News

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಆದೇಶ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿ‌ಶಂಕರ್, ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್‌ನನ್ನು ಸ್ಥಳಾಂತರ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದಾರೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು.

ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು. ಈ ವೇಳೆ ದರ್ಶನ್‌ ಅವರು ಮಗನನ್ನು ನೋಡಿ ಕಣ್ಣೀರಿಟ್ಟರು. ಮಗ ವಿನೀಶ್ ಹಾಗೂ ಪತ್ನಿ ವಿಜಯಲಕ್ಷ್ಮಿ ನೋಡುತ್ತಿದ್ದಂತೆ ದರ್ಶನ್ ಭಾವುಕರಾದರು.

ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್‌ ಕಣ್ಣೀರಿಟ್ಟರು. ಪತ್ನಿ ಬಳಿ ನಡೆದ ಘಟನೆಯ ಬಗ್ಗೆ ದರ್ಶನ್‌ ಕೆಲ ಮಾತುಗಳನ್ನಾಡಿದರು. ಕಾನೂನು ಹೋರಾಟದ ಬಗ್ಗೆ ಪತ್ನಿ ದರ್ಶನ್‌ಗೆ ಮಾಹಿತಿ ನೀಡಿದರು. ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

ಇದನ್ನೂ ಓದಿ: Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇದನ್ನೂ ಓದಿ | Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

Exit mobile version