Site icon Vistara News

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Renuka Swamy Murder Case

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣ (Renuka Swamy Murder Case) ಖಂಡಿಸಿ ನಾಳೆ (ಜೂನ್‌ 12) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿ ಪ್ರತಿಭಟನಾಕಾರರು ಹೋರಾಟ ನಡೆಸಲಿದ್ದು, ಈ ವೇಳೆ ಬೇಡ ಜಂಗಮ ಸಮುದಾಯದ ಮುಖಂಡರು, ವಿವಿಧ ಪಕ್ಷ, ಸಂಘಟನೆಗಳ ಪಕ್ಷಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಬೃಹತ್ ಪ್ರತಿಭಟನೆಯಲ್ಲಿ 1000ಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧನವಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ | Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಮೃತನ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದ್ದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ | Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ನಟ ದರ್ಶನ್‌, ಪವಿತ್ರಾ ಗೌಡ, ಕೆ. ಪವನ್, ಪ್ರದೋಶ್, ನಂದೀಶ್, ಕೇಶವಮೂರ್ತಿ, ರಾಘವೇಂದ್ರ, ಎಂ.ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಆರ್.ನಾಗರಾಜ್, ವಿ.ವಿನಯ್‌, ನಿಖಿಲ್‌ ನಾಯಕ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ.

Exit mobile version