ತುಮಕೂರು: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.
ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್ʼಗೆ ಸಿಕ್ಕಿದ್ದು ಹೇಗೆ?
ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.
ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್ʼಗೆ ಸಿಕ್ಕಿದ್ದು ಹೇಗೆ?
ಇನ್ನು ಈ ಹಿಂದೆ ಬಿಗ್‌ಬಾಸ್ ಸ್ಪರ್ಧಿ ಇಶಾನಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.