Site icon Vistara News

MP Renukacharya: ನಾನು ಬಕೆಟ್ ರಾಜಕಾರಣ ಮಾಡಲ್ಲ ಎಂದ ರೇಣುಕಾಚಾರ್ಯ

Ex Minister MP Renukacharya

ದಾವಣಗೆರೆ: ನಾನು ಜೆಪಿ ಚಳವಳಿಯಿಂದ ರಾಜಕಾರಣಕ್ಕೆ ಬಂದವನು. ಯಾರಿಗೂ ಬಕೆಟ್ ಹಿಡಿಯುವ ರಾಜಕಾರಣ ಮಾಡಲ್ಲ. 224 ಜನಕ್ಕೆ ಬಿ ಫಾರ್ಮ್ ಕೊಟ್ಟಿದ್ದಾರೆ, ಎಲ್ಲರೂ ಗೆದ್ದಿದ್ದಾರಾ? ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ, ನಾನು ರೆಡಿಮೇಡ್ ಫುಡ್ ಅಲ್ಲ. ನಿನ್ನೆ ಮೊನ್ನೆ ಬಂದವರ ಮಾತಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ (MP Renukacharya) ಹೇಳಿದರು.

ಬಿಜೆಪಿ ಕೋರ್ ಕಮಿಟಿಯಿಂದ ತಮ್ಮ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಎಲ್ಲರ ಬಗ್ಗೆಯೂ ನನಗೆ ಗೊತ್ತಿದೆ. ಬಕೆಟ್ ಹಿಡಿಯುವ ರಾಜಕಾರಣ ಮಾಡಲ್ಲ. ನನ್ನ ಮೇಲೆ ಬೆದರಿಕೆ ಕರೆ ಬಂದಾಗ ಯಾರೂ ಮಾತನಾಡಿಲ್ಲ, ಈಗ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಆರೋಪ, ಪ್ರತ್ಯಾರೋಪ ಮಾಡಲ್ಲ, ಉತ್ತರ ಕೊಡಲ್ಲ ಎಂದರು ತಿಳಿಸಿದರು.

ಇದನ್ನೂ ಓದಿ | BJP-JDS Alliance: ಜೆಡಿಎಸ್ ಇನ್ನುಮುಂದೆ ಜಾತ್ಯತೀತ ಎಂದು ಹೇಳಿಕೊಳ್ಳಬಾರದು ಎಂದ ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಹೋಗುವ ನಿರ್ಧಾರ ಮಾಡಿಲ್ಲ

ನಾನು ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ. ನಾನು ಸ್ಪರ್ಧಿಸಬೇಕು ಎಂದು ಜನರ ಅಪೇಕ್ಷೆ ಇದೆ. ಕಾಲಾಯ ತಸ್ಮೈ ನಮಃ, ಏನಾಗುತ್ತದೋ ನೋಡೊಣ ಎಂದ ಅವರು, ಸಚಿವ ಮಲ್ಲಿಕಾರ್ಜುನ್ ನನ್ನನ್ನು ಕಾಂಗ್ರೆಸ್‌ಗೆ ಕರೆದಿಲ್ಲ. ಈಗಲೂ ನಾನು ಬಿಜೆಪಿ ಕಟ್ಟಾಳು. ಕಾಂಗ್ರೆಸ್ ಹೋಗುವ ನಿರ್ಧಾರ ಮಾಡಿಲ್ಲ. ಸಂಸದ ಜಿ.ಎಂ. ಸಿದ್ದೇಶ್ವರ್‌ಗೆ ಟಿಕೆಟ್ ಸಿಕ್ಕರೆ ಸಪೋರ್ಟ್ ಮಾಡುವ ಕುರಿತು ನಿರ್ಧಾರ ಮಾಡಿಲ್ಲ. ಟಿಕೆಟ್ ಸಿಗದೇ ಇದ್ದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದರು.

ರೇಣುಕಾಚಾರ್ಯ ನಾಟ್ ರೀಚಬಲ್ ಎಂಬ ಸಿಟಿ ರವಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಯಾರು ನಾಟ್ ರೀಚಬಲ್ ಅಂತ ಗೊತ್ತಿದೆ. ಸಣ್ಣ ಮಗು ನಾನಲ್ಲ, ಲಾಲಿಪಪ್ ತಿನ್ನುತ್ತಿಲ್ಲ. ಯಾರೋ ಕಡೆಯಿಂದ ನಾನು ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ಹೆಚ್ಚು ರಾಜಕಾರಣ ಮಾಡಲು ಹೋಗೋದಿಲ್ಲ. ಕೆಲವರಿಗೆ ನನ್ನ ಕಂಡರೇ ಆಗಲ್ಲ, ಏನೂ ಮಾಡೋಕೆ ಆಗಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | Cauvery water dispute : ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟದಲ್ಲಿ ಕಾಣದ ಸಾಮ್ರಾಟ್; ಈ ಮಾಜಿಗಳೂ ಗೈರು!

ಕಾವೇರಿ, ಭದ್ರಾ ಜಲಾಶಯದ ನೀರು ನಮ್ಮ ಹಕ್ಕು. ರಾಜ್ಯದ ಪರಿಸ್ಥಿತಿ ಬಗ್ಗೆ ಸರ್ಕಾರ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದರು.

ಆಪರೇಷನ್‌ ಹಸ್ತ ಮಾಡಲ್ಲ, ಹಾಲಿ ಶಾಸಕರನ್ನು ಸೆಳೆಯಲ್ಲ; ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಆಪರೇಷನ್‌ ಹಸ್ತ (Operation Hasta) ಬಹಳವೇ ಸದ್ದು ಮಾಡುತ್ತಿದೆ. ಈಗಾಗಲೇ ಬಿಜೆಪಿಯ ಒಂದಿಬ್ಬರು ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಇದರ ಭಾಗವಾಗಿ ಹಲವಾರು ಮಾಜಿ ಶಾಸಕರು, ಸಂಸದರು ಸೇರಿದಂತೆ ಸ್ಥಳೀಯ ಮಟ್ಟದ ಮುಖಂಡರನ್ನು ಕೈ ಪಡೆ ಸೆಳೆದುಕೊಂಡಿದೆ. ಈಗ ಇದರ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (KPCC president and Deputy CM DK Shivakumar) ಹೇಳಿಕೆ ನೀಡಿದ್ದು, ಹಾಲಿ ಶಾಸಕರನ್ನು ನಾನು ಸಂಪರ್ಕ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ಮಾಜಿ ಶಾಸಕರನ್ನಷ್ಟೇ ಮುಟ್ಟುವುದಾಗಿ ಹೇಳಿಕೊಂಡಿದ್ದಾರೆ.

ರಾಜಕಾರಣದಲ್ಲಿ ಸಿದ್ಧಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್- ಬಿಜೆಪಿ ಮೈತ್ರಿ ನೀಡಿದೆ. “ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಪಕ್ಷ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲ ಜಾತ್ಯತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜತೆಯಲ್ಲೇ ಕೈ ಜೋಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮೈತ್ರಿ ವಿರೋಧಿಸಿ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ

ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬರುತ್ತಿದ್ದಾರೆ. ನಮಗೆ ಮುಖಂಡರಿಗಿಂತ ಕಾರ್ಯಕರ್ತರು ಬಹಳ ಮುಖ್ಯ, ಶಿವಮೊಗ್ಗ, ರಾಮನಗರ, ಬೆಂಗಳೂರು ನಗರ ಹೀಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಂಡೋಪತಂಡವಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾವೆಂದೂ ಆಪರೇಷನ್‌ ಹಸ್ತ ಮಾಡಲ್ಲ

ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ, ನಮ್ಮದು ಕೋ- ಆಪರೇಷನ್ ಎಂದು ಪದೇ, ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Cauvery water dispute : ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟದಲ್ಲಿ ಕಾಣದ ಸಾಮ್ರಾಟ್; ಈ ಮಾಜಿಗಳೂ ಗೈರು!

ಮಾಜಿ ಆಶ್ರಯ ಸಮಿತಿಯ ಅಧ್ಯಕ್ಷ ಕೆ.ಎಂ.ಹೋಂಬೇಗೌಡ, ಎಪಿಎಂಸಿ ಸದಸ್ಯರಾದ ಟಿ.ಎ.ಮೂರ್ತಿ, ನಿವೃತ್ತ ಪಶುವೈದ್ಯಧಿಕಾರಿ ಡಾ.ರಾಜು, ಸಿಲ್ಕ್ ಮಂದಿರ್ ಮಾಲೀಕರಾದ ತಿಮ್ಮೇಗೌಡ ಅವರು ಸೇರಿದಂತೆ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾವರೆಕೆರೆ, ಸೂಲಿವಾರ, ಬ್ಯಾಲಾಳು, ದೊಣ್ಣೇನಹಳ್ಳಿ, ಕುರುಬರಪಾಳ್ಯ, ಉದ್ದಂಡಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ 70ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸೇರ್ಪಡೆಯಾದರು.

Exit mobile version