Site icon Vistara News

Renukaswamy murder case: ಎಸ್‌ಪಿಪಿ ಬದಲಿಸಲು ಯಾರ ಒತ್ತಡವೂ ಇಲ್ಲ, ಹಾಕಿದ್ರೆ ಕೇಳೋದೂ ಇಲ್ಲ: ಸಿದ್ದರಾಮಯ್ಯ

CM Siddaramaiah

Petrol, Diesel Price Hiked In Karnataka For Guarantee Schemes; Siddaramaiah Clarifies About It

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಬದಲಾವಣೆಗೆ ಒತ್ತಡ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್‌ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ | DK Shivakumar: ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಎಂದ ಡಿ.ಕೆ. ಶಿವಕುಮಾರ್

ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ‌ ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದರು.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.

ಬುದ್ದ, ಬಸವಣ್ಣ ಎಷ್ಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

SDLC ಮತ್ತು PUC ಯಲ್ಲಿ ಹೆಚ್ಚು ಅಂಕ ಗಳಿಸಿದ, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಈ ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಎಲ್ಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.

ಇದನ್ನೂ ಓದಿ | Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು . ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದು ತಿಳಿಸಿದರು.

Exit mobile version